Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆ: ಕಾರ್ಮಿಕ ವಿರೋಧಿ ನೀತಿ ಪಾಲನೆ ಆರೋಪ





ಬಳ್ಳಾರಿ,ಮೇ.21.: ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ  ಅಖಿಲ ಭಾರತ ಪ್ರತಿಭಟನೆ ಅಂಗವಾಗಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸರ್ಕಾರದ ೪ ಲೇಬರ್ ಕೋಡ್, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಸೇರಿದಂತೆ   ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರೋಧಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಲೇಬರ್ ಕೋಡ್ ಪ್ರತಿಕೃತಿಯನ್ನು, ಹಾಗೂ ವಿಮೆಯಲ್ಲಿ ೧೦೦% ವಿದೇಶಿ ಬಂಡವಾಳದ ಪ್ರತಿಕೃತಿಯನ್ನು  ದಹಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.   ಜುಲೈ ೯, ೨೦೨೫ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಪೂರ್ವಭಾವಿಯಾಗಿ ಈ ಪ್ರತಿಭಟನೆ ನಡೆಸಲಾಯಿತು.


   ಈ ಸಂದರ್ಭದಲ್ಲಿ ಎಐಯುಟಿಯುಸಿಯ ಎ.ದೇವದಾಸ್, ಸಿಐಟಿಯುನ ಸತ್ಯಬಾಬು, ಹಿರಿಯ ಕಾರ್ಮಿಕ ಮುಖಂಡರಾದ ಟಿ.ಜಿ ವಿಠ್ಠಲ್, ಅಖಿಲ ಭಾರತ ವಿಮಾ ನೌಕರರ ಸಂಘದ ಸೂರ್ಯ ನಾರಾಯಣ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಶಾಂತಾ ಮಾತನಾಡಿದರು. ಎಐಯುಟಿಯುಸಿಯ ಆರ್ ಸೋಮಶೇಖರ ಗೌಡ, ಜಿ. ಸುರೇಶ್ ಉಪಸ್ಥಿತರಿದ್ದರು.


 ಮುಖಂಡರುಗಳು ಮಾತನಾಡುತ್ತಾ “ಕೇಂದ್ರ ಸರ್ಕಾರ ವ್ಯಾಪಾರವನ್ನು ಸುಲಭ ಮಾಡುವ ಹೆಸರಿನಲ್ಲಿ ದುಡಿಯುವ ಜನರ ಮೇಲೆ ಗುಲಾಮಗಿರಿಯ ಷರತ್ತುಗಳನ್ನು ಹೇರುತ್ತಿದೆ. ಅವಿರತ ತ್ಯಾಗ ಬಲಿದಾನಗಳಿಂದ ಗಳಿಸಿದ ೨೯ ಕಾರ್ಮಿಕ ಕಾನೂನುಗಳನ್ನು ಕಿತ್ತು ಹಾಕಿ ಕಾರ್ಮಿಕ-ವಿರೋಧಿ ೪ ಲೇಬರ್ ಕೋಡ್‌ಗಳನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರವು ಅತ್ಯಂತ ಸಕ್ರಿಯವಾಗಿದೆ. ಲೇಬರ್ ಕೋಡ್‌ಗಳು ಕಾರ್ಮಿಕರ ಬಹುತೇಕ ಚಾಲ್ತಿಯಲ್ಲಿರುವ ಹಕ್ಕುಗಳನ್ನು ಕಸಿದುಕೊಳ್ಳುತ್ತವೆ. ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಇತ್ಯಾದಿ ಸೇರಿದಂತೆ ಮೂಲಭೂತ ಹಕ್ಕುಗಳು ಹಾಗೂ ಯೂನಿಯನ್ ಮಾಡುವ ಹಕ್ಕು, ಮನ್ನಣೆ, ಸಾಮೂಹಿಕ ಚೌಕಾಸಿ, ಅಂದೋಲನಗಳು ಮತ್ತು ಮುಷ್ಕರದ ಹಕ್ಕು ಸೇರಿದಂತೆ ಯಾವುದೇ ರೀತಿಯ ಸಾಮೂಹಿಕ ಪ್ರತಿಭಟನೆಯ ಹಕ್ಕುಗಳನ್ನು ಲೇಬರ್ ಕೋಡ್‌ಗಳು ಕಸಿದುಕೊಳ್ಳುತ್ತವೆ. ಎಂದರು.


ಮುಂದುವರೆದು “ ಆಗಿನ ಕಾಂಗ್ರೆಸ್ ಸರ್ಕಾರವು ಜಾಗತೀಕರಣ, ಖಾಸಗೀಕರಣ ಹಾಗೂ ಉದಾರೀಕರಣ ನೀತಿಗಳನ್ನು ಪ್ರಾರಂಭಿಸಿದ ಫಲವಾಗಿ ಕಾರ್ಮಿಕರ ಸಂಕಷ್ಟಗಳು ಇನ್ನಷ್ಟು ಹೆಚ್ಚಾದವು. ಪ್ರಸ್ತುತ ಕೇಂದ್ರ ಬಿಜೆಪಿ ಸರ್ಕಾರವು ಅತ್ಯಂತ ವೇಗವಾಗಿ ಈ ನೀತಿಗಳನ್ನು ಅನುಷ್ಠಾನಗೊಳಿಸುತ್ತಿರುವುದು ಅತ್ಯಂತ ಕಾರ್ಮಿಕ ವಿರೋಧಿ ಹಾಗೂ ಜನ ವಿರೋಧಿ ಕ್ರಮವಾಗಿದೆ. ಎಂದರು.


ಈ ಹಿನ್ನೆಲೆಯಲ್ಲಿ ದುಡಿಯುವ ಜನ ಇನ್ನಷ್ಟು ಸಂಘಟಿತರಾಗಿ ಹೋರಾಟ ತೀವ್ರಗೊಳಿಸುವ ಅವಶ್ಯಕತೆ ಇದೆ. ಜುಲೈ ೯ರಂದು ನಡೆಯುವ ಅಖಿಲ ಭಾರತ ಮುಷ್ಕರವನ್ನು ಯಶಸ್ವಿಗೊಳಿಸುವಂತೆ “ ಕರೆ ನೀಡಿದರು.

ಇನ್ನಿತರ ಕಾರ್ಮಿಕ ಮುಖಂಡರಾದ ಚೇತನ್, ಪಾರ್ವತಮ್ಮ, ಜಯಮ್ಮ, ನಾಗಮ್ಮ, ಲಕ್ಷ್ಮಿ ದೇವಿ, ರಮಾ ದೇವಿ ಮುಂತಾದವರು ಉಪಸ್ಥಿತರಿದ್ದರು.


ಬೇಡಿಕೆಗಳು: ೧.ಕಾರ್ಮಿಕ-ವಿರೋದಿ ಬಂಡವಾಳಶಾಹಿ ಪರ ೪ ಲೇಬರ್ ಕೋಡ್‌ಗಳನ್ನು ರದ್ದುಗೊಳಿಸಬೇಕು. ೨.ಸಾರ್ವಜನಿಕ ವಲಯಗಳ ಹಾಗೂ ಸರ್ಕಾರಿ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಿ.ರಾಷ್ಟ್ರೀಯ ನಗದೀಕರಣ ಯೋಜನೆ ರದ್ದುಗೊಳಿಸಬೇಕು, ೩. ವಿದ್ಯುತ್ ಕಾಯ್ದೆ ತಿದ್ದುಪಡಿ ಮಸೂದೆ ೨೦೨೩ ಹಿಂಪಡೆಯಿರಿ. ಸ್ಮಾರ್ಟ್ ಮೀಟರ್ ಅಳವಡಿಕೆ ನಿಲ್ಲಿಸಬೇಕು, ೪. ಕೆಲಸದ ಅವಧಿಯನ್ನು ಪ್ರಸ್ತುತದಲ್ಲಿರುವ ದಿನಕ್ಕೆ ೮ ಗಂಟೆ ಮತ್ತು ವಾರಕ್ಕೆ ೪೮ ಗಂಟೆ ಮಿತಿಯನ್ನು ಖಾತ್ರಿಗೊಳಿಸಿ. ಮಹಿಳೆಯರಿU ರಾತ್ರಿ ಪಾಳಿ ಅವಕಾಶ ನೀಡುವ ಆದೇಶವನ್ನು ಹಿಂಪಡೆಯಬೇಕು. ೫. ಓPS / UPS ಬೇಡ. ಎಲ್ಲರಿಗೂ ಔPS ಜಾರಿ ಮಾಡಿ.

೬. ಎಲ್ಲಾ ಕಾರ್ಮಿಕರಿಗೆ ಕನಿಷ್ಠ ವೇತನ ರೂ.೩೬,೦೦೦ ನಿಗದಿಪಡಿಸಬೇಕು. ೭. ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು. ಎಲ್ಲಾ ಗುತ್ತಿಗೆ-ಹೊರಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಅಲ್ಲಿಯವರೆಗೆ

ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು. ೮. ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು ಸೇರಿದಂತೆ ಎಲ್ಲಾ ಯೋಜನಾ ಕಾರ್ಯಕರ್ತರ  ಸೇವೆಗಳನ್ನು ಖಾಯಂಗೊಳಿಸಿ ಸರ್ಕಾರಿ ನೌಕರರನ್ನಾಗಿ ಪರಿಗಣಿಸಿ. ೯. ವಲಸೆ ಕಾರ್ಮಿಕರಿಗೆ ಸುರಕ್ಷತೆ, ಭದ್ರತೆ ಹಾಗೂ ಖಾಯಂ ಉದ್ಯೋಗ ನೀಡಬೇಕು.  ೧೦.ಕಾರ್ಮಿಕ ಸಂಘ ರಚಿಸುವ ಪ್ರಜಾತಾಂತ್ರಿಕ ಹಕ್ಕುಗಳನ್ನು ಖಾತ್ರಿ ಪಡಿಸಿ.

೧೧. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ತುರ್ತು ಕ್ರಮ ಕೈಗೊಳ್ಳಬೇಕು. ೧೨. ಗಿಗ್ ಮತ್ತು ಪ್ಲಾಟ್‌ಫಾರಂ ಕೆಲಸಗಾರರನ್ನು ಕಾರ್ಮಿಕರೆಂದು ಪರಿಗಣಿಸಿ ಎಲ್ಲಾ

ಕಾರ್ಮಿಕ ಕಾಯ್ದೆಗಳನ್ನು ಅವರಿಗೆ ಅನ್ವಯಿಸುವಂತೆ ಕ್ರಮಕೈಗೊಳ್ಳಬೇಕು. ೧೩. ಎಲ್ಲಾ ಅಸಂಘಟಿತ ವಲಯದ ಕಾರ್ಮಿಕರಿಗೆ ಕಲ್ಯಾಣ ಮಂಡಳಿಗಳನ್ನು ಸ್ಥಾಪಿಸಿ, ಸಾಮಾಜಿಕ ಭದ್ರತೆ ಸವಲತ್ತುಗಳನ್ನು

ಖಾತ್ರಿಗೊಳಿಸಬೇಕು. ೧೪. ಎಲ್ಲಾ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ, ಉದ್ಯೋಗದ ಹಕ್ಕನ್ನು ಮೂಲಭೂತ ಸಾಂವಿಧಾನಿಕ ಹಕ್ಕನ್ನಾಗಿ ಮಾಡಬೇಕು .






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ