Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದಿಂದ ಪ್ರತಿಭಟನೆ






ಧಾರವಾಡ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ದಾಖಲಿಸಿದ ಅನುದಾನಿತ ಪ್ರೌಢಶಾಲೆಗಳು ಹಾಗೂ ಶಿಕ್ಷಕರ ವಿರುದ್ಧ ಕ್ರಮ ಜರುಗಿಸುವ ಕುರಿತ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಘಟಕದವರು ಪ್ರತಿಭಟನೆ ನಡೆಸಿದರು.


ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯ ಸರ್ಕಾರ ಅನುದಾನಿತ ಶಾಲೆ ಹಾಗೂ ಶಿಕ್ಷಕರ ಮೇಲೆ ಮಲತಾಯಿ ಧೋರಣೆ ತೋರುತ್ತಿದೆ. ಶಿಕ್ಷಕರು, ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸದೆ, ಇಂತಹ ಆದೇಶ ಹೊರಡಿಸುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ದೂರಿದರು.

2015 ರಿಂದ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ವಹಿಸಿಲ್ಲ. 2020 ರವರೆಗೆ ವರೆಗೆ ಖಾಲಿಯಾದ ಹುದ್ದೆ ತುಂಬಲು ಹೊರಡಿಸಿರುವ ಆದೇಶದ ನಿಯಮವನ್ನು ಸಡಲಿಸಿ ಜಾರಿಗೊಳಿಸಬೇಕು. 5 ಮತ್ತು 8 ನೇ ತರಗತಿಯಲ್ಲಿ ಅನುತೀರ್ಣ ನಿಯಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಸಿಬಿಎಸ್‍ಇ ಮಾದರಿಯಲ್ಲಿ ಉತೀರ್ಣತೆಯಲ್ಲಿ ಆಂತರಿಕ ಅಂಕಗಳನ್ನು ಸಂಯೋಜಿಸುವುದು ಹಾಗೂ ಪಿಯುಸಿ ಮಾದರಿಯಲ್ಲಿ ಮೂರು  ಪರೀಕ್ಷೆಗಳ ಫಲಿತಾಂಶವನ್ನು ಸಂಯೋಜಿಸಿ ಶಾಲಾ ಫಲಿತಾಂಶ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಶಿಕ್ಷಕರನ್ನು ಕಲಿಸುವ ಕೆಲಸಕ್ಕೆ ಮಾತ್ರ ಬಳಿಸಿಕೊಳ್ಳಬೇಕು ಇತರ ಕಾರ್ಯಗಳಿಗೆ ಬಳಿಸಿಕೊಳ್ಳುವುದನ್ನು ಕೈಬಿಡಬೇಕು. ಶಿಕ್ಷಕರ ಹುದ್ದೆಗಳ ಕೊರತೆಯಿಂದ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ ಎಂದು ದೂರಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್, ಜಿಲ್ಲಾ ಘಟಕದ ಅಧ್ಯಕ್ಷ ವಿ.ಎಸ್. ಹುದ್ದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಎನ್.ಸವಣೂರ, ಎನ್.ಎಸ್. ಗೋವಿಂದರಡ್ಡಿ, ಎಂ.ಜಿ.ಕೊಡ್ಲಿ, ಸಂಗಮೇಶ ಹಡಪದ, ಐ.ಬಿ.ಮರ್ಜೆಡಿ, ವೆಂಕಣ್ಣ ಕೋರಡ್ಡಿ, ಶಿವಪ್ರಕಾಶ ಬೋಂಗಾಳೆ, ಉದಯ ಅಬ್ಬಾಯಿ,, ಆರ್.ಎಫ್. ಮೂಲಿಮನಿ, ಮಹಮ್ಮದ್ ಗೌಸ್ ಪೀರಣ್ಣನವರ, ರವಿ ಕೊಣ್ಣೂರ, ಮಂಜುನಾಥ ಕೊಡ್ಲಿ,ಮಡಿವಾಳಿ ಕರಿಸುಬ್ಬನವರ  ಪಾಲ್ಗೊಂಡಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ