ಧಾರವಾಡ : ವಿಬಿ-ಜಿ ರಾಮ್ ಜಿ ಯೋಜನೆಗೆ ಮಂಜೂರಾಗಿರುವ ಕಾಮಗಾರಿಗಳನ್ನು ಗ್ರಾಮದಲ್ಲೇ ಕೈಗೆತ್ತಿಕೊಂಡು, ಸ್ಥಳೀಯ ನಿವಾಸಿಗಳಿಗೇ ಕೆಲಸ ಒದಗಿಸಲಾಗುವುದು ಎಂದು ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು.
ಧಾರವಾಡ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತ ಆವರಣದಲ್ಲಿ ಜನ ಸಂಪರ್ಕ ಸಭೆ ಹಾಗೂ ಪ್ರಜಾ ಸೇವಾ ಆಂದೋಲನ ಸಭೆ ಉದ್ಘಾಟಿಸಿ ಮಾತನಾಡಿದರು.
ವಿಬಿ-ಜಿ ರಾಮ್ ಜಿ ಯೋಜನೆಗೆ ಸಂಬಂಧಿಸಿದಂತೆ ಪ್ಲಾನ್ ಸ್ಯಾಂಕ್ಷನ್ ಹಾಗೂ ಕಾಮಗಾರಿಗಳಿಗೆ (ವರ್ಕ್) ಅಧಿಕೃತ ಅನುಮೋದನೆ ದೊರೆತಿದೆ. ಆದ್ದರಿಂದ ಮುಂಬರುವ ದಿನಗಳಲ್ಲಿ ಗ್ರಾಮಸ್ಥರು ಕೆಲಸಕ್ಕೆ ಬೇರೆಡೆಗೆ ಹೋಗುವ ಅಗತ್ಯವಿಲ್ಲ. ಇದೇ ಊರಿನಲ್ಲಿಯೇ ಎಲ್ಲರಿಗೂ ನಿಯಮಿತವಾಗಿ ಕೆಲಸ ನೀಡಲಾಗುವುದು ಎಂದು ರೈತರು ಮತ್ತು ಕೂಲಿ ಕಾರ್ಮಿಕರಿಗೆ ಅವರು ಹೇಳಿದರು.
ಗ್ರಾಮಗಳ ಅಭಿವೃದ್ಧಿಗೆ ಯುವಜನತೆ ಮತ್ತು ಸಾರ್ವಜನಿಕರ ಸಹಕಾರ ಅಗತ್ಯ. ಸರಕಾರವು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ನಿಮ್ಮ ಬಳಿಗೇ ಬಂದಿದ್ದು, ಗ್ರಾಮಗಳ ಮತ್ತು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಯುವಜನತೆ ಹಾಗೂ ಊರಿನ ಮುಖಂಡರು ಒಗ್ಗಟ್ಟಿನಿಂದ ಕೈಜೋಡಿಸಬೇಕು ಎಂದು ಅವರು ಹೇಳಿದರು.
ಸಾರ್ವಜನಿಕರು ಸಲ್ಲಿಸಿರುವ ಪ್ರಮುಖ ಹಾಗೂ ಜರೂರಾದ ಕೆಲಸಗಳನ್ನು ನಿಗದಿತ ಸಮಯದಲ್ಲಿ ಪ್ರಾಮಾಣಿಕವಾಗಿ ಹಂತ ಹಂತವಾಗಿ ಈಡೇರಿಸ. ಮೂಲಸೌಕರ್ಯ ಹಾಗೂ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಲು ಸಾರ್ವಜನಿಕರ ಮೇಲ್ವಿಚಾರಣೆಯೂ ಅಗತ್ಯ ಎಂದರು.
ದೇಶ ಮತ್ತು ರಾಜ್ಯ ಯಾವುದೇ ಒಂದು ರಾಜಕೀಯ ಪಕ್ಷದ ಗುತ್ತಿಗೆಯಲ್ಲ. ಜನಪ್ರತಿನಿಧಿಗಳು ಜನಸೇವಕರು. ಎಲ್ಲಾ ಪಕ್ಷಗಳ ಮುಖಂಡರು ಮತ್ತು ಗ್ರಾಮಸ್ಥರು ಒಗ್ಗಟ್ಟಿನಿಂದ ಶ್ರಮಿಸಿದಾಗ ಮಾತ್ರ ಹಳ್ಳಿಗಳ ಉದ್ದಾರ ಸಾಧ್ಯ. ಗ್ರಾಮಗಳಲ್ಲಿನ ಸಮಸ್ಯೆಗಳ ಪರಿಹಾರ ಹಾಗೂ ಕಷ್ಟ-ಸುಖಗಳಿಗೆ ಸ್ಪಂದಿಸಲು ಯುವಜನತೆ ಮುಂಚೂಣಿಯಲ್ಲಿ ನಿಲ್ಲಬೇಕು. ಸ್ವಚ್ಛತೆ ಮತ್ತು ಸಾಮಾಜಿಕ ಸೇವೆಗಳಲ್ಲಿ ಯುವಕರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಭಾರತ ಜೋಡೋ ಯುವ ಸಂಘಗಳ ಯೋಜನೆ: ಗ್ರಾಮೀಣ ಯುವಕರನ್ನು ಸಂಘಟಿಸಲು ಹಾಗೂ ಕ್ರೀಡೆ, ಸಾಂಸ್ಕøತಿಕ ಮತ್ತು ಸಾಮಾಜಿಕ ಜಾಗೃತಿ ಚಟುವಟಿಕೆಗಳನ್ನು ಪೆÇ್ರೀತ್ಸಾಹಿಸಲು 'ಭಾರತ ಜೋಡೋ' ಕಾರ್ಯಕ್ರಮದಡಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯುವ ಸಂಘಗಳಿಗೆ ಶರತ್ತುಗೊಳಪಟ್ಟು ವರ್ಷಕ್ಕೆ ರೂ. 10 ಲಕ್ಷದವರೆಗೆ ಪೆÇ್ರೀತ್ಸಾಹ ಧನ ನೀಡುವ ಯೋಜನೆ ಇದೆ. 16 ರಿಂದ 35 ವರ್ಷದ ಯುವಕರು ಇದರ ನೋಂದಣಿ ಮಾಡಿಕೊಂಡು ಸೌಲಭ್ಯ ಪಡೆಯಬೇಕು.
ಸಾರ್ವಜನಿಕರು ನೀಡಿದ ಮನವಿಗಳನ್ನು ಪರಿಶೀಲಿಸಲಾಗಿದ್ದು, ಆದ್ಯತೆಯ ಮೇರೆಗೆ ಕೆಲಸಗಳನ್ನು ಮಾಡಿಕೊಡಲಾಗುವುದು. ಪ್ರತಿಯೊಬ್ಬರಿಗೂ ಸಮಾನವಾಗಿ ಸ್ಪಂದಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಸಚಿವರು ಭರವಸೆ ನೀಡಿದರು.
ಸರ್ಕಾರ ಜಾರಿಗೆ ತರುವ ಅಭಿವೃದ್ಧಿ ಯೋಜನೆಗಳು ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಿದ್ದು, ಅವುಗಳ ಸೂಕ್ತ ನಿರ್ವಹಣೆ ಮತ್ತು ರಕ್ಷಣೆ ಸಾರ್ವಜನಿಕರ ಪ್ರಮುಖ ಕರ್ತವ್ಯವಾಗಿದೆ. ಸರ್ಕಾರಿ ಆಸ್ತಿಗಳನ್ನು ಕಾಪಾಡಿಕೊಳ್ಳುವುದು ಕೇವಲ ಅಧಿಕಾರಿಗಳ ಹೊಣೆಯಾಗಿರದೆ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ.
ಸಮುದಾಯ ಮತ್ತು ಮೂಲಸೌಕರ್ಯ ಅಭಿವೃದ್ಧಿ: ಸ್ಮಶಾನಗಳ ಅಭಿವೃದ್ಧಿ, ಸಮುದಾಯ ಭವನಗಳ ನಿರ್ಮಾಣ ಹಾಗೂ ಗ್ರಾಮೀಣ ಭಾಗಗಳಲ್ಲಿ ಹಾಳಾದ ರಸ್ತೆಗಳನ್ನು ತಕ್ಷಣವೇ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಮಾಜಿಕ ಹಾಗೂ ಆರ್ಥಿಕ ನೆರವು: ಅಂಗವಿಕಲರಿಗೆ ಸ್ವಯಂ ಉದ್ಯೋಗಕ್ಕಾಗಿ ಅಂಗಡಿ ಸೌಲಭ್ಯ, ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ಆರ್ಥಿಕ ಧನಸಹಾಯ ನೀಡಿದರು.
ಶಿಕ್ಷಣ ಮತ್ತು ನೈರ್ಮಲ್ಯ: ಶಾಲಾ ಶೌಚಾಲಯಗಳ ನಿರ್ಮಾಣ, ಮಾದರಿ ಶಾಲೆಗಳಿಗೆ ಹೆಚ್ಚಿನ ಕೊಠಡಿಗಳ ಅನುದಾನ ಒದಗಿಸುವುದು ಹಾಗೂ ಕಲಿಕೇರಿ ಗ್ರಾಮದಲ್ಲಿ ನೂತನ ಕಾಲೇಜು ಸ್ಥಾಪನೆಗೆ ಕ್ರಮ ವಹಿಸಲಾಗುವುದು.
ಸಾರ್ವಜನಿಕ ಬೇಡಿಕೆಗಳ ಈಡೇರಿಕೆ: ಕಲಿಕೇರಿ ಗ್ರಾಮದಲ್ಲಿ ಹೊಸ ಬ್ಯಾಂಕ್ ಶಾಖೆ ಹಾಗೂ ಪಶುಸಂಗೋಪನಾ ಆಸ್ಪತ್ರೆ ಸ್ಥಾಪನೆಗಾಗಿ ಅರ್ಜಿಗಳನ್ನು ಸ್ವೀಕರಿಸಿ ಪರಿಶೀಲಿಸಿದರು.
ಬರ ಪರಿಹಾರ ಮತ್ತು ನಿರ್ವಹಣೆ: ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ರಾಜ್ಯದ 101 ತಾಲೂಕುಗಳನ್ನು ಮೊದಲ ಹಂತದಲ್ಲಿ ಬರಪೀಡಿತ ಎಂದು ಘೋಷಿಸಲಾಗಿದೆ. ಹಂತ-ಹಂತವಾಗಿ ಪರಿಶೀಲಿಸಿ, ಅರ್ಹವಿರುವ ಇತರ ತಾಲೂಕುಗಳನ್ನೂ ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಊರಿನ ಹಿರಿಯರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.