Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಲ್‌ಇ ಕೆವಿಕೆಯಿಂದ ರೈತರಿಗೆ ಹಿಂಗಾರು ಹಂಗಾಮಿಗೆ ಗುಣಮಟ್ಟ ಬೀಜ ಪೂರೈಕೆ

ನೇಸರಗಿ: ಮತ್ತಿಕೊಪ್ಪದ ಐಸಿಎಆರ್-ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ದಿನಾಂಕ ೨೬.೦೯.೨೦೨೫ ರಂದು “ಬೀಜ ಮೇಳ” ವನ್ನು ಏರ್ಪಡಿಸಲಾಗಿತ್ತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೇಂದ್ರದ ಮುಖ್ಯಸ್ಥ ಡಾ. ಮಂಜುನಾಥ ಚೌರಡ್ಡಿಯವರು ಮಾತನಾಡುತ್ತ, ಪ್ರಸ್ತುತ ಕೃಷಿ ವ್ಯವಸ್ಥೆಯಲ್ಲಿ ಗುಣಮಟ್ಟದ ಬೀಜಗಳ ಲಭ್ಯತೆಯಿಲ್ಲದ ಕಾರಣ ವ್ಯವಸಾಯದಲ್ಲಿ ಕಡಿಮೆ ಇಳುವರಿಯಿಂದಾಗಿ ರೈತರು ಆರ್ಥಿಕ ನಷ್ಟವನ್ನು ಅನುಭವಿಸುತ್ತಿದ್ದಾರೆ.  ಗುಣಮಟ್ಟದ ಬಿತ್ತನೆ ಬೀಜಗಳ ಬಳಕೆಯಿಂದ ರೈತರು ಉತ್ತಮ ಇಳುವರಿ ಹಾಗೂ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ.  ಹಿಂಗಾರು ಹಂಗಾಮು ಪ್ರಾರಂಭವಾಗಿದ್ದು, ಗುಣಮಟ್ಟ ಬೀಜ ರೈತರಿಗೆ ದೊರೆಯುವಂತೆ ಮಾಡುವುದೇ ಕೆವಿಕೆಯ ಬೀಜ ಮೇಳದ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ಕೃಷಿ ವಿಜ್ಞಾನ ಕೇಂದ್ರವು ಮುಂಚೂಣಿಯಲ್ಲಿದೆ. ಈ ದಿಸೆಯಲ್ಲಿ, ಕೃಷಿ ವಿಜ್ಞಾನ ಕೇಂದ್ರವು ಉತ್ಪಾದಿಸಿದ ಕಡಲೆ (ಬಿಜಿಡಿ-೧೧೧-೧), ಜೋಳ-(ಎಸ್‌ಪಿವಿ-೨೨೧೭), ಗೋದಿ (ಯುಎಎಸ್-೩೩೪) ಬಿತ್ತನೆ ಬೀಜಗಳನ್ನು ಬೀಜ ಮೇಳದಲ್ಲಿ ಪೂರೈಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.


ಕಾರ್ಯಕ್ರಮದ ಉದ್ಘಾಟನೆಯನ್ನು ಬೈಲಹೊಂಗಲ ಕೃಷಿಕ ಸಮಾಜದ ಉಪಾಧ್ಯಕ್ಷರಾದ ಶ್ರೀ ಶಿವಪುತ್ರಪ್ಪ ತಟವಟಿಯವರ ಇವರು ನೆರವೇರಿಸಿ ಮಾತನಾಡುತ್ತಾ, ಕೃಷಿ ವಿಜ್ಞಾನ ಕೇಂದ್ರವು ರೈತರಿಗೆ ಉತ್ತಮ ತಂತ್ರಜ್ಞಾನ ಮಾಹಿತಿಯನ್ನು ನೀಡುತ್ತಿದ್ದು ಅಲ್ಲಿರುವ ನುರಿತ ವಿಜ್ಞಾನಿಗಳ ಸಂಪರ್ಕ ಬೆಳೆಸಿ ತಂತ್ರಜ್ಞಾನದ ಅಳವಡಿಕೆಯೊಂದಿಗೆ  ತಮ್ಮ ವ್ಯವಸಾಯದಲ್ಲಿ ಅವುಗಳನ್ನು ಬಳಸಿಕೊಂಡು ತಮ್ಮ ಬೇಸಾಯದ ಖರ್ಚು ಕಡಿಮೆ ಮಾಡಿ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಲು ಕರೆ ನೀಡಿದರು.


ಕಾರ್ಯಕ್ರಮ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಕೇಂದ್ರದ ಬೇಸಾಯ ತಜ್ಞ ಜಿ. ಬಿ. ವಿಶ್ವನಾಥ ಅವರು ಕೃಷಿ ವಿಜ್ಞಾನ ಕೇಂದ್ರವು ಉತ್ತಮ ಗುಣಮಟ್ಟದ ಬೀಜಗಳನ್ನು ರೈತರಿಗೆ ಪೂರೈಸುತ್ತ ಬಂದಿದ್ದು, ಹಿಂಗಾರು ಹಂಗಾಮಿನಲ್ಲಿ ಅಧಿಕ ಇಳುವರಿ ನೀಡುವ ತಳಿಗಳ ಬೀಜವನ್ನು ಪೂರೈಸುವ ಉದ್ದೇಶದಿಂದ ಬೀಜ ಮೇಳವನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಹಿಂಗಾರು ಬೆಳೆಗಳಲ್ಲಿ ತಳಿಗಳ ವಿಶೇ?ತೆ, ಸಮಗ್ರ ಪೋ?ಕಾಂಶ, ಕಳೆ ಹಾಗೂ ನೀರು ನಿರ್ವಹಣೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು.  ಬಿತ್ತನೆ ಸಮಯದಲ್ಲಿ ಪ್ರತಿಯೊಬ್ಬ ರೈತರು ಜೈವಿಕ ಅಥವಾ ರಸಾಯನಿಕ ರೋಗ ಮತ್ತು ಕೀಟನಾಶಕ ಮತ್ತು ಅಣುಜೀವಿ ಗೊಬ್ಬರಗಳೊಂದಿಗೆ ಬೀಜೋಪಚಾರ ಮಾಡಿ ಮುಂದೆ ಬರುವಂತಹ ಕೀಟ ಮತ್ತು ರೋಗಗಳನ್ನು ನಿರ್ವಹಣೆ ಜೊತೆಗೆ ಉತ್ತಮ ಬೆಳೆಯ ಬೆಳವಣಿಗೆಯನ್ನು ಪಡೆಯಬಹುದು ಎಂದು ರೈತರಿಗೆ ಮಾಹಿತಿ ನೀಡಿದರು.


  ಕಾರ್ಯಕ್ರಮದಲ್ಲಿ ಕೇಂದ್ರದ ವಿಜ್ಞಾನಿ ಪ್ರವೀಣ ಯಡಹಳ್ಳಿ ಸ್ವಾಗತಿಸಿದರು ಹಾಗೂ ಎಸ್. ಎಸ್. ಪಾಟೀಲ ವಂದಿಸಿದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ