LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಫೈರ್ ಫ್ಲೈ'ಗೆ ಸಿಕ್ಕಳು ನಾಯಕಿ... ವಂಶಿಗೆ ಜೋಡಿಯಾದ ರಚನಾ ಇಂದರ್

     ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ 'ಫೈರ್ ಫ್ಲೈ'. ಈ ಚಿತ್ರ ನಾನಾ ಕಾರಣಗಳಿಂದ ನಿರೀಕ್ಷೆ ಹೆಚ್ಚಿಸಿದೆ. ಅದರಲ್ಲಿ ಪ್ರಮುಖವಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ ಚಿತ್ರ ನಿರ್ಮಾಣ ಮಾಡುತ್ತಿರುವುದು ಒಂದು ವಿಷಯವಾದರೆ, ಮತ್ತೊಂದು ಕಾರಣ ಸಿನಿಮಾದ ತಾರಾಬಳಗ. ಈಗಾಗಲೇ ಫೈರ್ ಫ್ಲೈ ಸಿನಿತಂಡ ಸುಧಾರಾಣಿ, ಅಚ್ಯುತ್ ಕುಮಾರ್ , ಶೀತಲ್ ಶೆಟ್ಟಿ ಸೇರಿದಂತೆ ಹಲವರನ್ನು ಪರಿಚಯಿಸಿದೆ. ಇದೀಗ ಚಿತ್ರದ ನಾಯಕಿ ಯಾರು ಅನ್ನೋದನ್ನು ಅನಾವರಣ ಮಾಡಿದೆ.

     ಲವ್ ಮಾಕ್‌ಟೇಲ್‌, ಹರಿಕಥೆ ಅಲ್ಲ ಗಿರಿಕಥೆ, ತ್ರಿಬಲ್‌ ರೈಡಿಂಗ್ ಸಿನಿಮಾಗಳಲ್ಲಿ ಬಬ್ಲಿ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರಚನಾ ಇಂದರ್ ವಂಶಿಗೆ ಜೋಡಿಯಾಗಿ ಅಭಿನಯಿಸಿದ್ದಾರೆ.‌ ನೇಹಾ ಎಂಬ ಪಾತ್ರದಲ್ಲಿ ರಚನಾ ಬಣ್ಣ ಹಚ್ಚಿದ್ದು, ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. "ನಿವೇದಿತಾ ಶಿವರಾಜ್ ಕುಮಾರ್ ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ. ಇಡೀ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಸಿನಿಮಾದಲ್ಲಿ ನೇಹಾ ಎಂಬ ಪಾತ್ರ ಮಾಡಿದ್ದೇನೆ. ನೇಹಾ ಬದುಕನ್ನು ತುಂಬಾ ಇಷ್ಟಪಡುತ್ತಾಳೆ. ಎಂಜಾಯ್ ಮಾಡುತ್ತಾಳೆ. ಭವಿಷ್ಯದ ಬಗ್ಗೆ ಯೋಚನೆ ಮಾಡೋದಿಲ್ಲ. ಸಿನಿಮಾವನ್ನು ನಾನು ನೋಡಲು ಕಾತರಳಾಗಿದ್ದೇನೆ. ಚಿತ್ರದ ಒಂದಷ್ಟು ಕ್ಲಿಪ್ ನೋಡಿದಾಗ ಮನರಂಜನೆ ನೀಡುವ ಸಿನಿಮಾ ಎನಿಸಿತು. ವಂಶಿ ತುಂಬಾ ಹಾರ್ಡ್ ವರ್ಕ್ ಮಾಡಿದ್ದಾರೆ. ದೀಪಾವಳಿಗೆ ನಮ್ಮ ಚಿತ್ರ ತೆರೆಗೆ ಬರುತ್ತಿದೆ" ಎಂದಿದ್ದಾರೆ.

      ಚಿತ್ರಕ್ಕೆ ಅಭಿಲಾಷ್ ಕಳತ್ತಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಸ ಶ್ರೀಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ. ಈ ಸಂಸ್ಥೆಯ ಮೊದಲ ಕೂಸು 'ಫೈರ್ ಫ್ಲೈ' ಸಿನಿಮಾ ದೀಪಾವಳಿಗೆ ತೆರೆಗೆ ಬರಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್