Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಮಹಾನ್ ನಟಿಯಾಗಿ  ರಾಧಿಕಾ ನಾರಾಯಣ್

     ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, 'ಮಹಾನ್" ಚಿತ್ರದ ಪ್ರಮುಖಪಾತ್ರದಲ್ಲಿ ರಂಗಿತರಂಗ ಖ್ಯಾತಿಯ ರಾಧಿಕಾ ನಾರಾಯಣ್ ನಟಿಸುತ್ತಿದ್ದಾರೆ.

     ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ 'ಮಹಾನ್' ತಂಡಕ್ಕೆ ರಾಧಿಕಾ ನಾರಾಯಣ್ ಅವರನ್ನು ಸ್ವಾಗತಿಸಿದೆ.


     ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ  'ಮಹಾನ್' ರೈತರ ಕುರಿತಾದ ಚಿತ್ರ.


     "ಈ ಚಿತ್ರದಲ್ಲಿ ನಟಿಸಲು ನನಗೆ ಬಹಳ ಸಂತೋಷವಾಗಿದೆ. ಪಿ.ಸಿ.ಶೇಖರ್ ಅವರ ನಿರ್ದೇಶನದಲ್ಲಿ ನನಗೆ ನಟಿಸಬೇಕೆಂಬ ಆಸೆಯಿತ್ತು. ಆದರೆ ಇಷ್ಟು ದಿನ ಸಾಧ್ಯವಾಗಿರಲಿಲ್ಲ ಈಗ ಅವರ  'ಮಹಾನ್' ಚಿತ್ರದಲ್ಲಿ ನಟಿಸುತ್ತಿದ್ದೇನೆ.  ಸಮಾಜಿಕ ಕಳಕಳಿ ಹೊಂದಿರುವ ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಬಹಳ ಖುಷಿ. ಇನ್ನೂ ನಿರ್ದೇಶಕರು ಇದೊಂದು ರೈತರ ಕುರಿತಾದ ಚಿತ್ರ ಎಂದು ಹೇಳಿದ ತಕ್ಷಣ ನನಗೆ ಕಥೆ ಬಹಳ ಇಷ್ಟವಾಯಿತು. ನಾನು ಈ ಚಿತ್ರದಲ್ಲಿ ಹಳ್ಳಿಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ" ಎಂದಿದ್ದಾರೆ  ರಾಧಿಕಾ ನಾರಾಯಣ್.


      "ಈ ಹಿಂದೆ ರಾಧಿಕಾ ನಾರಾಯಣ್ ಅವರ ಜೊತೆಗೆ ಎರಡು ಮೂರು ಕಥೆಗಳನ್ನು ಚರ್ಚಿಸಿದ್ದರೂ ಆಗಿರಲಿಲ್ಲ. ಈಗ ನನ್ನ ನಿರ್ದೇಶನದ  'ಮಹಾನ್' ಚಿತ್ರದಲ್ಲಿ ರಾಧಿಕಾ ನಾರಾಯಣ್ ಅವರು ನಟಿಸುತ್ತಿರುವುದು ಬಹಳ ಸಂತೋಷವಾಗಿದೆ. ಅವರ ಪಾತ್ರ ಕೂಡ ವಿಭಿನ್ನವಾಗಿರಲಿದೆ" ಎನ್ನುತ್ತಾರೆ ನಿರ್ದೇಶಕ ಪಿ.ಸಿ.ಶೇಖರ್.


      "ರಂಗಿತರಂಗ' ಸೇರಿದಂತೆ ಕನ್ನಡದ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿರುವ ರಾಧಿಕಾ  ಅವರು ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವುದು ಸಂತಸ ತಂದಿದೆ" ಎಂದು ನಿರ್ಮಾಪಕ‌ ಪ್ರಕಾಶ್ ಬುದ್ದೂರು ತಿಳಿಸಿದ್ದಾರೆ‌.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ