Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಗಾಂಧಿ ಯುವಜನತೆಯ ಕ್ಷಮೆ ಕೇಳಬೇಕು: ಕುಮಾರ್ ಹಿರೇಮಠ ಆಗ್ರಹ




ಬೆಳಗಾವಿ .ಭಾರತೀಯ ಜನತಾ ಪಾರ್ಟಿ ಬೆಳಗಾವಿ ವತಿಯಿಂದ ಬೆಳಗಾವಿ ನಗರದ ಸರ್ಕಿಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ  ಕುಮಾರ್ ಹಿರೇಮಠ ಅವರು ಮಾತನಾಡಿ ಲೋಕಸಭೆ ಪ್ರತಿಪಕ್ಷ ರಾಹುಲ್ ಗಾಂಧಿಯವರು ಅಗ್ನಿಪಥ ಯೋಜನೆ ಕುರಿತು ಹಗುರವಾಗಿ ಮಾತನಾಡಿದ್ದು, ಇದು ಸೈನಿಕರಿಗೆ ಮಾಡಿದ ಅವಮಾನವಾಗಿದೆ.


ಕೂಡಲೆ ಅವರು ಯುವ ಜನತೆಯ ಕ್ಷಮೆ ಕೇಳ ಬೇಕು ,ಅಗ್ನಿಪಥ ಯೋಜನೆಯು ಭಾರತದ ಸೈನ್ಯವನ್ನು ಬಲಪಡಿಸುವ ಹಾಗೂ ದೇಶ ಕಾಪಾ

ಡುವ ದೇಶ ಸೇವೆಯೇ ಪರಮೋಚ್ಛ ಎಂದು ಬಿಂಬಿಸುವ ಯೋಜನೆಯಾಗಿದೆ. ಆದರೆ, ಕಾಂಗ್ರೆಸ್ಸಿಗರು ಅದರಲ್ಲೂ ರಾಹುಲ್ ಗಾಂಧಿಯವರು ಈ ಯೋಜನೆ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದರು.ಪ್ರಧಾನಿ ಮೋದಿಯವರು ಭಾರತೀಯ ಸೈನ್ಯಕ್ಕೆ ಬಲ ತುಂಬುತ್ತಿದ್ದಾರೆ.ಸೈನಿಕರಿಗೆ ಎಲ್ಲಾ ಸೌಕರ್ಯಗಳನ್ನು

ಒದಗಿಸುತ್ತಿದ್ದಾರೆ.


ಈ ಹಿನ್ನಲೆಯಲ್ಲಿ ಯುವ ಸೈನಿಕರು ಹೆಚ್ಚಾಗಬೇಕು ಎಂಬ ಉದ್ದೇಶದಿಂದ ಅಗ್ನಿಪಥ ಯೋಜನೆ ಜಾರಿಗೆ ತಂದಿದ್ದಾರೆ. ಈಗಾಗಲೇ ಸುಮಾರು 80 ಸಾವಿರ ಯುವಕರು ಈ ಯೋಜನೆಯಡಿ ದೇಶ ಸೇವೆ ಮಾಡುತ್ತಿದ್ದಾರೆ ಎಂದರು.18 ವರ್ಷ ಮೇಲ್ಪಟ್ಟವರು, ಈ ಯೋಜನೆಯಡಿ ಸೈನ್ಯಕ್ಕೆ ಸೇರಬಹುದು.

ತರಬೇತಿಗಾಗಿಯೇ - 1ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಲಾಗುತ್ತಿದೆ. ಅಗ್ನಿಪಥಯೋಜನೆ ಇದೊಂದು ದೇಶದ ಸೇವೆ ಜೊತೆಗೆ

ಯುವಕರಲ್ಲಿ ಆರ್ಥಿಕ ಬಲ ತುಂಬುವ ಮಹತ್ವದ ಯೋಜನೆ ಯಾಗಿದೆ ಎಂದು ತಿಳಿಸಿದರು.


ಯುವಕರಿಗೆ ಆಸರೆಯಾ ಗಿರುವ, ದೇಶ ಪ್ರೇಮ ಬೆಳೆಸುವ ಯೋಜನೆ ಕುರಿತು ಕಾಂಗ್ರೆಸ್‌ ಮುಖಂಡರು ಹಗುರವಾಗಿ ಮಾತನಾಡುತ್ತಿದ್ದು,ಸರಿಯಲ್ಲ ಎಂದರು. ಈ ಸಂದರ್ಭದಲ್ಲಿ ಭಾ.ಜ.ಪಾ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಮಹೇಶ್ ಮೋಹಿತೆ,ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ಸಹ ಪ್ರಮುಖ ಬಾಳೇಶ್ ಚವ್ವನ್ನವರ,ಮಾಜಿ ಸೈನಿಕರ ಒಕ್ಕೂಟದ ಬೆಳಗಾವಿ ಗ್ರಾಮಂತರ ತಾಲೂಕಾ ಅಧ್ಯಕ್ಷ ರಮೇಶ ಚೌಗಲಾ, ಜಗದೀಶ್ ಪೂಜೇರಿ,ಭಾ.ಜ.ಪಾ  ಕಾರ್ಯಾಲಯ ಕಾರ್ಯದರ್ಶಿ ವಿಠ್ಠಲ್ ಸಾಯಣ್ಣವರ,ಲಕ್ಷ್ಮಣ ದಂಡಾಪುರೆ, ರಾಜೇಂದ್ರ ಹಲಗಿ,ಶಿವಾಜಿ ಕದಂ,ಸಂಗಪ್ಪ ಮೇಟಿ, ವಿಲಾಸ್ ಜಾಂಗಳೆ ಹಾಗೂ ಅನೇಕರು ಉಪಸ್ಥಿತರಿದ್ದರು






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ