ಹೊಸಕೋಟೆ, ಬೆಳ್ಳೂರು, ಹುಣಸೂರು, ಮದ್ದೂರು, ಸರಗೂರು, ಕೃಷ್ಣರಾಜಪೇಟೆ, ದುರ್ಗ, ಚನ್ನರಾಯಪಟ್ಟಣ, ಬೆಂಗಳೂರು ಎಚ್ಎಎಲ್, ನಾಗಮಂಗಲ, ಬೆಂಗಳೂರು, ರಾಯಲ್ಪಾಡು, ಮೊಳಕಾಲ್ಮೂರು, ಹೆಸರಘಟ್ಟ, ಹೊಸದುರ್ಗ, ಟಿಜಿ ಹಳ್ಳಿ, ಕೋಲಾರ, ಶಿರಹಟ್ಟಿ, ಜೇವರ್ಗಿ, ಲಕ್ಷ್ಮೇಶ್ವರದಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 40.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.