ಬೆಂಗಳೂರು, ಜೂನ್ 9: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ
ಮಳೆಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 13ರ ಬಳಿಕ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದ್ದು ಮೂರು ದಿನಗಳ ಬಳಿಕ ಮಳೆ ಹೆಚ್ಚಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರದಲ್ಲಿ ಬುಧವಾರದಿಂದ ಮಳೆ ಹೆಚ್ಚಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕದ್ರಾ, ಕಾರ್ಕಳ, ಗದಗ, ಭಾಲ್ಕಿ, ಹುಮ್ನಾಬಾದ್, ಗುರುಮಿಟ್ಕಲ್, ಚಿಕ್ಕೋಡಿ, ರಾಯಚೂರು, ಮಂಗಳೂರು, ಗೇರುಸೊಪ್ಪದಲ್ಲಿ ಮಳೆಯಾಗಿದೆ.