ಬೇಲೂರು, ತಿಪಟೂರು, ಬೆಳ್ತಂಗಡಿ, ಕೆಂಭಾವಿ, ಧಾರವಾಡ, ಯಡ್ರಾಮಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಚಂಡಮಾರುತದಿಂದಾಗಿ ಕರ್ನಾಟಕ, ಛತ್ತೀಸ್ಗಢ, ತೆಲಂಗಾಣ, ತಮಿಳುನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
ಎಚ್ಎಎಲ್ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರೊಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.