Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸದನದಲ್ಲಿ ರಾಜಣ್ಣ ವಜಾ ಪ್ರತಿಧ್ವನಿ; ಕಾರಣಕ್ಕಾಗಿ ವಿಪಕ್ಷಗಳ ಪಟ್ಟು


ಬೆಂಗಳೂರು: ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಸಚಿವ ಸ್ಥಾನದಿಂದ ವಜಾಗೊಂಡಿರುವ ಕೆ. ಎನ್‌. ರಾಜಣ್ಣ ಅವರ ವಿಷಯ ಪ್ರಸ್ತಾಪವಾಯಿತು‌.


ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಸಹಕಾರ ಸಚಿವರಾಗಿದ್ದ ಕೆ. ಎನ್. ರಾಜಣ್ಣ ಅವರು ಸಚಿವ ಸ್ಥಾನದಿಂದ ವಜಾಗೊಂಡಿರುವ ಕುರಿತ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಸಹಿಯಿರುವ ಪತ್ರ ಓದಲು ಮುಂದಾದರು.‌ ಇದಕ್ಕೆ ಆಡಳಿತ ಪಕ್ಷದ ಸಚೇತಕ ಸಲೀಂ ಅವರು ಆಕ್ಷೇಪ ವ್ಯಕ್ತಪಡಿಸಿದರು.


ಪ್ರಶೋತ್ತರ ಅವಧಿ ಮುಗಿದ ಬಳಿಕ ಮಾತನಾಡಿ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಸೂಚಿಸಿದರು. ತುರ್ತು ವಿಷಯವಾಗಿದ್ದು, ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಯಾಕೆ ವಜಾ ಮಾಡಿದರು ಎಂದು ಛಲವಾದಿ ನಾರಾಯಣ ಪ್ರಶ್ನಿಸಿದರು. ಇದಕ್ಕೆ ಬಿಜೆಪಿ ಸದಸ್ಯರಾದ ಸಿ. ಟಿ‌. ರವಿ. ರವಿಕುಮಾರ್ ಸೇರಿದಂತೆ ಇನ್ನಿತರ ಸದಸ್ಯರು ಧ್ವನಿಗೂಡಿಸಿದರು.


ವಿಪಕ್ಷ ಸದಸ್ಯರ ಮಾತಿಗೆ ವಿರೋಧಿಸಿದ ಆಡಳಿತ ಪಕ್ಷದ ನಾಯಕರು, ರಾಜಣ್ಣ ಅವರ ಮೇಲೆ ಯಾವತ್ತಿನಿಂದ ಪ್ರೀತಿ ಬಂತು ಎಂದು ವ್ಯಂಗ್ಯವಾಡಿದರು‌.‌ ಮಾತಿನ ಚಕಮಕಿ ಹೆಚ್ಚಾಗುತ್ತಿದ್ದಂತೆ 10 ನಿಮಿಷ ಕಲಾಪವನ್ನು ಸಭಾಪತಿ ಅವರು ಮುಂದೂಡಿದರು.


ಸಭಾನಾಯಕರು ಬಂದ ಬಳಿಕ ಉತ್ತರ: ಸದನ ಮತ್ತೆ ಆರಂಭವಾಗುತ್ತಿದ್ದಂತೆ ರಾಜಣ್ಣ ಅವರನ್ನು ವಜಾಗೊಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ವಜಾಗೊಳಿಸಲು ಕಾರಣವೇನು? ಭ್ರಷ್ಟಾಚಾರದಲ್ಲಿ ಅವರು ತೊಡಗಿಸಿಕೊಂಡಿದ್ದಾರೆಯೇ ಎಂದು ಛಲವಾದಿ ಅವರು ಪ್ರಶ್ನಿಸಿದರು. ಮುಖ್ಯಮಂತ್ರಿಗಳಿಂದ ಅಥವಾ ಸಭಾ ನಾಯಕರಿಂದ ಉತ್ತರ ಕೊಡಿಸಿ ಎಂದು ಪಟ್ಟು ಹಿಡಿದರು. ಸಭಾ ನಾಯಕರು ಸದನಕ್ಕೆ ಬಂದಿಲ್ಲ. ಬಂದ ಬಳಿಕ ಅವರಿಂದ ಉತ್ತರ ಕೊಡಿಸಲಾಗುವುದು ಸಭಾಪತಿ ಅವರು ಭರವಸೆ ನೀಡಿದ್ದರಿಂದ ವಿಪಕ್ಷ ನಾಯಕರು ಸುಮ್ಮನಾದರು.












Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ