Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಣ್ಣ ಜೀವವೈವಿಧ್ಯತೆಯ ಪ್ರಾಮುಖ್ಯತೆ ಪ್ರತಿಪಾದಿಸಿದ ಮೊದಲಿಗ : ರಾಜಶೇಖರಗೌಡ ಪಾಟೀಲ





ಇತ್ತೀಚಿನ ಕೆಲವು ವರ್ಷಗಳ ಹಿಂದೆ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ಭೂಮಿಯ ಮೇಲಿನ ಜೀವರಾಶಿಗಳ ಉಳಿವಿಗಾಗಿ ಅಂತರರಾಷ್ಟ್ರೀಯ ಜೀವ ವೈವಿಧ್ಯ ವರ್ಷಾಚರಣೆ ಆಚರಿಸಲು ಕರೆಕೊಟ್ಟಿತು. ಆದರೆ ಇದಕ್ಕೂ 800 ವರ್ಷಗಳ ಮೊದಲೇ ಬಸವಣ್ಣನವರು ಭೂಮಿಯ ಮೇಲಿನ ಎಲ್ಲಾ ಜೀವರಾಶಿಗಳ ಉಳಿವಿಗಾಗಿ "ಸಕಲ ಜೀವಾತ್ಮರಿಗೆ ಲೇಸನೆ ಬಯಸು"ಎಂದು ತಿಳಿಸುತ್ತಾ ಜೀವವೈವಿಧ್ಯತೆಯ ಪ್ರಾಮುಖ್ಯತೆಯನ್ನು  ಜಗತ್ತಿನಲ್ಲೇ ಮೊಟ್ಟ ಮೊದಲ ಬಾರಿಗೆ ತಿಳಿಸಿಕೊಟ್ಟರು ಎಂದು ಡಾ. ಸ. ಜ. ನಾಗಲೋಟಿಮಠ ವಿಜ್ಞಾನ ಕೇಂದ್ರದ ಯೋಜನಾಧಿಕಾರಿ ರಾಜಶೇಖರಗೌಡ ಪಾಟೀಲ ಅಭಿಪ್ರಾಯಪಟ್ಟರು. ಅವರು ಸೋಮವಾರ ಇಲ್ಲಿನ ಶಿವ ಬಸವನಗರದ ಕಾರಂಜಿ ಮಠದಲ್ಲಿ 286 ನೇ ಮಾಸಿಕ ಶಿವಾನುಭವ ಗೋಷ್ಠಿ ಮತ್ತು ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ "ಬಸವಣ್ಣನವರ ವೈಜ್ಞಾನಿಕ ನಿಲುವು" ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ನೀಡುತ್ತಾ ಮಾತನಾಡಿದರು. ಮುಂದುವರೆದು ಮಾತನಾಡಿದ ಅವರು ಜನನ, ಮರಣ, ಜಾತಕ, ಸರ್ಪ ಸೇರಿದಂತೆ ಇತ್ಯಾದಿ ದೋಷ ಹಾಗು ನವಗ್ರಹ, ಶನಿ  ಮುಂತಾದ ಕಾಟಗಳನ್ನು ನಂಬಿ ಜನ ಮೋಸ ಹೋಗುವ ಬದಲು ಬಸವಣ್ಣನವರು ತಿಳಿಸಿದ ವೈಜ್ಞಾನಿಕ ತಳಹದಿಯ ಮೇಲೆ ಜೀವನ ರೂಪಿಸಿಕೊಳ್ಳಬೇಕು. ಮುಟ್ಟು ಮೈಲಿಗೆಯ ಕಾರಣದಿಂದ ಹೆಣ್ಣು ಮಕ್ಕಳಿಗೆ ಧಾರ್ಮಿಕ ಸ್ವಾತಂತ್ರ್ಯ ಇರದ ಸಂದರ್ಭದಲ್ಲಿ ಬಸವಣ್ಣನವರು ಅದೊಂದು ನೈಸರ್ಗಿಕ ಪ್ರಕ್ರಿಯೆ ಎಂದು ತಿಳಿಸುತ್ತಾ ಅವರಿಗೂ ಸಮಾನ ಅವಕಾಶವನ್ನು ನೀಡಿ ವೈಜ್ಞಾನಿಕ ಹಿನ್ನೆಲೆಯಲ್ಲಿ ಬದುಕು ರೂಪಿಸಿ ಕೊಳ್ಳಲು ಅವಕಾಶ ಕೊಟ್ಟರು. ಅಂತಹ ಮಹಾಮಾನವತಾವಾದಿಯ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನಿವೃತ್ತ ಪ್ರಾಧ್ಯಾಪಕ ಗುರುಪಾದ ಘಿವಾರಿ ಮಾತನಾಡಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಮಾನತೆಯ ಸಮಾಜ ನಿರ್ಮಿಸಲು ಪ್ರಯತ್ನಿಸಿದರೆ ಬಸವಣ್ಣನವರು ಸಮಾನತೆಯ ಜೊತೆ ಜೊತೆಗೆ ಆಧ್ಯಾತ್ಮಿಕ ತಳಹದಿಯ ಮೇಲೆ ಸಮಾಜ ಕಟ್ಟುವ ಕಾರ್ಯ ಮಾಡಿದರು ಎಂದರು.

ಕಾರ್ಯಕ್ರಮದ ಸಾನಿಧ್ಯವಹಿಸಿ ಆಶೀರ್ವಚನ ನೀಡಿದ ಕಾರಂಜಿ ಮಠದ ಗುರುಸಿದ್ಧ ಮಹಾಸ್ವಾಮಿಗಳು ಮೂಡನಂಬಿಕೆಗಳನ್ನು ತ್ಯಜಿಸಿ ಮೂಲ ನಂಬಿಕೆಗಳೊಂದಿಗೆ ಜೀವನ ರೂಪಿಸಿಕೊಳ್ಳಬೇಕು. ಮಾನಸಿಕವಾಗಿ ದುರ್ಬಲವಾಗಿರುವವರು ಮಾತ್ರ ಅಂದಾನುಕರಣೆಯಲ್ಲಿ ಜೀವಿಸುತ್ತಾರೆ. ಶರಣ ಪರಂಪರೆಯ ವಾರಸುದಾರರು ವೈಜ್ಞಾನಿಕವಾಗಿ ಬದುಕು ಕಟ್ಟಿಕೊಳ್ಳಬೇಕು ಎಂದರು.

ಇದೇ ಸಂದರ್ಭದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮನೋಜ ಘೋಡಗೇರಿ, ದಾನೇಶ್ವರಿ ಪಾಟೀಲ, ಸಾಕ್ಷಿ ಘಿವಾರಿ, ಗೌತಮಿ ಹಿರೇಮಠ, ಸಾಕ್ಷಿ ನೇರಳಿ ವಿದ್ಯಾರ್ಥಿಗಳಿಗೆ ಕಾರಂಜಿ ಮಠದಿಂದ ಸನ್ಮಾನಿಸಿ ಗೌರವಿಸಲಾಯಿತು.
ಲಿಂಗರಾಜ ಕಾಲೇಜು ಪ್ರಾಧ್ಯಾಪಕ ಮಹೇಶ ಗುರಣಗೌಡರ ಸ್ವಾಗತಿಸಿದರು. ನಿವೃತ್ತ ಪ್ರಾಧ್ಯಾಪಕ ಏ.ಕೆ. ಪಾಟೀಲ ನಿರೂಪಿಸಿದರು. ನ್ಯಾಯವಾದಿ ವಿ. ಕೆ. ಪಾಟೀಲ ವಂದಿಸಿದರು.





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ