Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜೇಂದ್ರ ಹತ್ಯೆಗೆ ಸಂಚು: ಮೂವರು ಪೊಲೀಸ್ ವಶಕ್ಕೆ

ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದು ವೈರಲ್ ಆದ ಬೆನ್ನಲ್ಲೇ ಮೂವರನ್ನು ತುಮಕೂರಿನ ಕ್ಯಾತಸಂದ್ರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಪುಷ್ಪಾ ಎಂಬ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ರಾಜೇಂದ್ರ ಅವರ ಹತ್ಯೆಗೆ ರೌಡಿಶೀಟರ್ ಸೋಮ ಎಂಬಾತ ಸಂಚು ರೂಪಿಸಿದ್ದ ಕುರಿತು 18 ನಿಮಿಷಗಳ ಆಡಿಯೋವೊಂದು ವೈರಲ್ ಆಗಿದೆ. ರಾಜೇಂದ್ರ ಅವರ ಆಪ್ತ ರಾಕಿ ಮತ್ತು ಸೋಮನ ಆಪ್ತೆ ಪುಷ್ಪಾ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇತ್ತೀಚೆಗಷ್ಟೇ ಬಹಿರಂಗವಾಗಿತ್ತು. ಈ ಬೆನ್ನಲ್ಲೇ ಸೋಮ, ಪುಷ್ಪಾ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


ಆಡಿಯೋದಲ್ಲಿ ಏನಿದೆ..? ವೈರಲ್ ಆಗಿರುವ ಆಡಿಯೋದಲ್ಲಿ ರಾಕಿ ಜೊತೆ ಮಾತನಾಡಿದ್ದ ಪುಷ್ಪಾ, ''ಪ್ರಭಾವಿ ವ್ಯಕ್ತಿಯೊಬ್ಬರಿಂದ ರಾಜೇಂದ್ರ ಹತ್ಯೆಗೆ ಸೋಮುಗೆ 75 ಲಕ್ಷ ರೂ. ಗುತ್ತಿಗೆ (ಸುಪಾರಿ) ಬಂದಿತ್ತು. ಇದಕ್ಕಾಗಿ 5 ಲಕ್ಷ ರೂ. ಹಣ ಅಡ್ವಾನ್ಸ್ ನೀಡಿದ್ದರು. ಇದು ನಿಜ. ಬೇಕಾದರೆ ಸೋಮನನ್ನು ಪೊಲೀಸರು ವಿಚಾರಿಸಿದರೆ ಎಲ್ಲಾ ಹೊರಬರುತ್ತದೆ. ಈ ವಿಚಾರ ಬೇಕಾದರೆ ರಾಜೇಂದ್ರ ಅವರಿಗೆ ನಾನು ಹೇಳುತ್ತೇನೆ. ಅವರ ಬಳಿ ಕರೆದುಕೊಂಡು ಹೋಗು ಎಂದು ಪುಷ್ಪಾ ತಿಳಿಸಿದ್ದಾರೆ.


ನವೆಂಬರ್‌ ತಿಂಗಳಲ್ಲಿ ರಾಜೇಂದ್ರ ಅವರ ಪುತ್ರಿಯ ಹುಟ್ಟುಹಬ್ಬ ಸಮಾರಂಭದಲ್ಲಿ ಜೈಪುರದ ಇಬ್ಬರು ಹುಡುಗರು ಬಂದಿದ್ದರು. ಆ ಇಬ್ಬರು ಹುಡುಗರನ್ನು ಕಳುಹಿಸಿದ್ದು ಕೂಡ ಸೋಮು. ಅಲ್ಲದೆ ಜೈಪುರದ ಇನ್ನೊಬ್ಬ ರೌಡಿ ಶೀಟರ್‌ನನ್ನ ಕೊಲ್ಲುವುದಾಗಿ ಸೋಮು ಹೇಳಿದ್ದಾನೆ. ಇದಕ್ಕಾಗಿ ಕಲಾಸಿಪಾಳ್ಯದಲ್ಲಿರುವ ಇಬ್ಬರು ತಮಿಳು ಹುಡುಗರನ್ನು ಕೂಡ ಕರೆಸಿಕೊಂಡಿದ್ದಾನೆ. ಸೋಮುಗೆ ರೂ.5 ಲಕ್ಷ ದುಡ್ಡು ಬಂದಿರುವುದು ದೇವರ ಸಾಕ್ಷಿಯಾಗಿಯೂ ನಿಜ. ಮನು ಎಂಬಾತನ ಅಕೌಂಟ್‌ಗೆ ಹಣ ಹಾಕಲಾಗಿದೆ'' ಎಂದು ಪುಷ್ಪಾ ಹೇಳಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ