Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಬಲ್ ಇಸ್ಮಾರ್ಟ್ ಸಿನಿಮಾಕ್ಕೆ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ  ರಾಮ್ ಪೋತಿನೇನಿ-ಕಾವ್ಯಾ ಥಾಪರ್

      'ಡಬಲ್ ಇಸ್ಮಾರ್ಟ್' ಸಿನಿಮಾದ ಸ್ಟೆಪ್ಪಮಾರ್ ಹಾಡಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇದೀಗ ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ಮಾರ್ ಮುಂತಾ ಚೋಡ್ ಚಿಂತಾ ಎಂಬ ಗಾನಬಜಾನಕ್ಕೆ ನಾಯಕ ಉಸ್ತಾದ್ ರಾಮ್ ಪೋತಿನೇನಿ ಹಾಗೂ ನಾಯಕಿ ಕಾವ್ಯಾ ಥಾಪರ್ ಸಖತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.


     ಕಾಸರ್ಲ ಶ್ಯಾಮ್ ಸಾಹಿತ್ಯದ ದೇಸಿ ನಂಬರ್ ಗೆ ಮಣಿ ಶರ್ಮಾ ಟ್ಯೂನ್ ಹಾಕಿದ್ದು, ರಾಹುಲ್ ಸಿಪ್ಲಿಗುಂಜ್ ಮತ್ತು ಕೀರ್ತನಾ ಶರ್ಮಾ ಧ್ವನಿಯಾಗಿದ್ದಾರೆ. ಮಾರ್ ಮುಂತಾ ಚೋಡ್ ಚಿಂತಾ ಲಿರಿಕಲ್ ವಿಡಿಯೋದ ಜೊತೆಗೆ ಮೇಕಿಂಗ್ ವಿಡಿಯೋ ಕೂಡ ಇರೋದು ವಿಶೇಷವಾಗಿದೆ.


    'ಇಸ್ಮಾರ್ಟ್ ಶಂಕರ್' ಸಿನಿಮಾದ ಮುಂದುವರೆದ ಭಾಗವೇ ಈ 'ಡಬಲ್ ಇಸ್ಮಾರ್ಟ್' ಚಿತ್ರ. ಈ ಮೂಲಕ ಡೈರೆಕ್ಟರ್ ಪೂರಿ ಜಗನ್ನಾಥ್ ಹೊಸ ರೀತಿಯಲ್ಲಿಯೆ ಶಂಕರ್‌ನ ಕಥೆ ಹೇಳಲು ಹೊರಟ್ಟಿದ್ದಾರೆ. 2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. 5 ವರ್ಷದ ಬಳಿಕ ಪಾರ್ಟ್-2 'ಡಬಲ್ ಇಸ್ಮಾರ್ಟ್' ಸಿನಿಮಾ ಬರುತ್ತಿದೆ. ಟಾಲಿವುಡ್‌ನಲ್ಲಿ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ.


     ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್ ಇಸ್ಮಾರ್ಟ್’ ಸಿನಿಮಾ ಬಿಡುಗಡೆಯಾಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಪುರಿ ಕನೆಕ್ಟ್ಸ್’ ಬ್ಯಾನರ್ ಮೂಲಕ ಪುರಿ ಜಗನ್ನಾಥ್, ಚಾರ್ಮಿ ಕೌರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ರಾಮ್‌ ಪೊತೀನೇನಿಗೆ ನಟಿ ಕಾವ್ಯಾ ಥಾಪರ್ ಜೋಡಿ ಆಗಿದ್ದಾದೆ. ಸಂಜಯ್ ದತ್ ಈ ಸಿನಿಮಾದಲ್ಲಿ ಖಡಕ್ ವಿಲನ್ ಆಗಿಯೇ ಕಾಣಿಸುತ್ತಿದ್ದಾರೆ.


     ಭರದಿಂದಲೇ ಚಿತ್ರೀಕರಣ ನಡೆಯುತ್ತಿರೋ ಈ ಸಿನಿಮಾ ರಿಲೀಸ್ ಡೇಟ್ ಕೂಡ ಫಿಕ್ಸ್ ಆಗಿದೆ. ಆಗಸ್ಟ್-15 ರಂದು ಚಿತ್ರ ಎಲ್ಲೆಡೆ ರಿಲೀಸ್ ಮಾಡಲಾಗುತ್ತಿದೆ. ವಿಶ್ವದಾದ್ಯಂತ ಈ ಚಿತ್ರದ ಪ್ರಚಾರ ಕೂಡ ಈಗಾಗಲೇ  ಶುರುವಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ