LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರಾಮನ ಅವತಾರ ಟ್ರೇಲರ್ ರಿಲೀಸ್  ಎಲ್ಲರ ಜೀವನದ ರಾಮಾಯಣ ಹೇಳ್ತಾರೆ  ರಿಷಿ 

     ಟೀಸರ್, ಹಾಡು ಹಾಗೂ ವಿಭಿನ್ನ ಪ್ರಮೋಷನ್ ವಿಡಿಯೋಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ರಾಮನ ಅವತಾರ. ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

     ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ರಾಮನ ಅವತಾರ ಸಿನಿಮಾದ ಮೊದಲ ನೋಟ ಅನಾವರಣ ಮಾಡಲಾಯಿತು. ಈ ವೇಳೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.


     ನಟ ರಿಷಿ ಮಾತನಾಡಿ "ಈ ಸಿನಿಮಾ ಒಪ್ಪಿಕೊಳ್ಳಲು ಮುಖ್ಯ ಕಾರಣ ಆಪರೇಷನ್ ಅಲಮೇಲಮ್ಮ. ಈ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಆ ರೀತಿ ಎಂಟರ್ ಟೈನ್ಮೆಂಟ್ ಸಿನಿಮಾ ಮಾಡಿ ಎನ್ನುತ್ತಿದ್ದರು. ಅದೇ ರೀತಿ ಹಾಸ್ಯಭರಿತ ಚಿತ್ರ ಮಾಡಿ ಎನ್ನುತ್ತಿದ್ದರು. ನನಗೆ ಆಪರೇಷನ್ ಅಲಮೇಲಮ್ಮ ಮ್ಯಾಜಿಕ್. ಅದನ್ನು ರಿಪೀಟ್ ಮಾಡುವ ಆಗಿಲ್ಲ. ನೋಡೋಣಾ ಅದು ಸರಳ ಜಾನರ್ ಅಲ್ಲ. ಆ ಸಮಯದಲ್ಲಿ ಪಂಪಾಪತಿ ಸಿಕ್ಕಿದ್ದರು.


ಅವರ ಹಾಸ್ಯ ನನಗೆ ಇಷ್ಟವಾಯ್ತು. ರಾಮಾಯಣ ಇಟ್ಟುಕೊಂಡು ಸಿನಿಮಾ ಮಾಡುವ ಕಥೆ ತಂದರು. 2024 ರಲ್ಲಿ ನಡೆಯುವ ಘಟನೆಗೆ ರಾಮಾಯಣ ಮೌಲ್ಯವನ್ನು ತೋರಿಸುವುದು. ಈ ಚಿತ್ರದಲ್ಲಿ ತೋರಿಸುತ್ತಿರುವುದು ನನಗೆ ಖುಷಿ ಕೊಟ್ಟಿದೆ. ಇದು ಖುಷಿ ಕೊಡುವ ಸಿನಿಮಾ. ಪ್ರತಿಯೊಬ್ಬರು ತಮ್ಮ ಪಾತ್ರಗಳಿಗೆ ಅದ್ಭುತವಾಗಿ ಜೀವ ತುಂಬಿದ್ದಾರೆ. ಸಿನಿಮಾ ಮೇ‌10ರಂದು ರಿಲೀಸ್ ಆಗ್ತಿದೆ. ಹಾಡುಗಳು ನನಗೆ ತುಂಬಾ ಇಷ್ಟ. ಇಡೀ ಸಿನಿಮಾಗೆ ದುಡಿದ ಎಲ್ಲರಿಗೂ ಧನ್ಯವಾದ" ತಿಳಿಸಿದರು.


     ನಿರ್ದೇಶಕ ವಿಕಾಸ್ ಪಂಪಾಪತಿ "ಈ ಸಿನಿಮಾ ಕ್ಯಾರೆಕ್ಟರ್ ಜರ್ನಿ ಹೇಳುತ್ತಿದ್ದೇವೆ. ರಾಮ ಪಾತ್ರಧಾರಿ ಅವನಿಗೆ ಅವನೇ ಜೆಂಟಲ್ ಮ್ಯಾನ್ ಎಂದು ಹೇಳಿಕೊಂಡು ಓಡಾಡುತ್ತಾ ಇರುತ್ತಾನೆ. ಅವನು ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಅವನ ಜೀವನದಲ್ಲಿ ನಡೆದ ಘಟನೆಗಳೇನು ಅವನನ್ನು ಹೇಗೆ ಬದಲಾಯಿಸುತ್ತದೆ?  ರಾಮನ ಅವತಾರ ಎಂದು ಯಾಕೆ ಇಟ್ಟಿದ್ದೇವೆ ಎಂದರೆ? ರಾಮನ ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ ಅನ್ನುವುದನ್ನು ಎಂಟರ್ ಟೈನ್ಮೆಂಟ್ ಆಗಿ ಹೇಳಿದ್ದೇವೆ. ರಾಮನ ಅವತಾರ ಎಂದು ಹೇಗೆ ಹೆಸರಟ್ಟಿದ್ದೇವೆ ಎಂದರೆ ಎಲ್ಲರ ಲೈಫ್ ನಲ್ಲಿಯೂ ಒಂದಲ್ಲ ಒಂದು ರಾಮಾಯಣ ನಡೆಯುತ್ತದೆ. ಸೀತೆ ತರ ಹೆಂಡತಿ, ಲಕ್ಷ್ಮಣ ರೀತಿ ತಮ್ಮ, ರಾವಣನಿಂದ ಆಗುವ ಸಮಸ್ಯೆ? ಈ ರೀತಿ ಸಮಸ್ಯೆಗಳು ಎಲ್ಲರ ಜೀವನದಲ್ಲಿ ನಡೆಯುತ್ತವೆ. ಆ ಘಟನೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆ" ಎಂದು ಹೇಳಿದರು.


     ನಟಿ ಪ್ರಣೀತಾ ಸುಭಾಷ್  "ರಾಮನ ಅವತಾರ ತುಂಬಾ ವಿಶೇಷವಾದ ಸಿನಿಮಾ. ರಾಮಾಯಣ ಎಲ್ಲರಿಗೂ ಗೊತ್ತಿದೆ. ಈ ರಾಮಾಯಣ ಮಾರ್ಡನ್ ಟೇಕ್. ನಾನು ಈ ರೀತಿ ಪ್ರಾಜೆಕ್ಟ್ ಭಾಗವಾಗಿದ್ದು, ಖುಷಿ ಕೊಟ್ಟಿದೆ. ರಾಮಾಯಣ ಬಗ್ಗೆ ಅಂದ ತಕ್ಷಣ ಸಿನಿಮಾ ಒಪ್ಪಿಕೊಂಡೆ. ರಿಷಿ ಅವರ ಚಿತ್ರಗಳನ್ನು ನೋಡಿದ್ದೇನೆ. ಶೂಟಿಂಗ್ ಜರ್ನಿ ತುಂಬಾ ಚೆನ್ನಾಗಿತ್ತು" ಎಂದು ಹೇಳಿದರು.


     ನಟಿ ಶುಭ್ರ ಅಯ್ಯಪ್ಪ "ನಿರ್ದೇಶಕರು ನನ್ನ ಪಾತ್ರದ ಹೇಳಿದಾಗ ನಾನು ಎಕ್ಸೈಟ್ ಆದೆ. ಹಳ್ಳಿ ಹುಡುಗಿ ಪಾತ್ರದಲ್ಲಿ ನನ್ನನ್ನು ನಾನು ನೋಡಲು ಕಾತುರನಾಗಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಮೇ 10ಕ್ಕೆ‌  ನಮ್ಮ ಸಿನಿಮಾ ರಿಲೀಸ್ ಆಗುತ್ತಿದೆ. ನಿಮ್ಮ ಬೆಂಬಲ ಇರಲಿ" ಎಂದರು.


     ರಾಮನ‌ ಅವತಾರ ಟ್ರೇಲರ್ ಪ್ರಾಮಿಸಿಂಗ್ ಆಗಿದೆ. ಟ್ರೇಲರ್ ನಲ್ಲಿ ನಗು, ಅಳು, ಪ್ರೀತಿ-ಪ್ರೇಮ ಎಲ್ಲವೂ ಇದೆ. ಭಿನ್ನ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿರುವ ರಿಷಿ, ಇತ್ತೀಚಿಗೆ ವೆಬ್​ ಸೀರಿಸ್ ಮೂಲಕವೂ ಮೋಡಿ ಮಾಡಿದ್ದಾರೆ. ಅವರೀಗ ಕಾಮಿಡಿ ಕಥೆ ಹೊತ್ತು ಪ್ರೇಕ್ಷಕರನ್ನು ನಗಿಸಲು ಬರ್ತಿದ್ದಾರೆ.


    'ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಅವರು ‘ಸ್ಟಾರ್ ಫ್ಯಾಬ್ ಪ್ರೊಡಕ್ಷನ್’​ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್‌ ಅಡಿಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶಪಾಂಡೇ ಛಾಯಾಗ್ರಾಹಣ ಮಾಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜನೆ ಹಾಗೂ ಅಮರನಾಥ್ ಸಂಕಲನ ಚಿತ್ರಕ್ಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್