LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರಮೇಶ ಅರವಿಂದ್ ಚಿತ್ರ ದೈಜಿ ಸೆಳೆಯುತ್ತಿದೆ ಟೀಸರ್



       "ಹುಟ್ಟು - ಸಾವು ಬಾಳಿನಲ್ಲಿ ಎರಡು ಕೊನೆಗಳು ಎಂಬ ಸಾಲಿದೆ. ಆದರೆ ಇವೆರಡರ ಮಧ್ಯೆ ಏನಿದೆ? ಇವೆರಡರ ಮಧ್ಯೆ ಪ್ರೀತಿ ಇದೆ. ಒಂದು ವೇಳೆ ಸಾವೇ ಕೊನೆಯಾಗದಿದ್ದರೆ ಏನಿರುತ್ತದೆ?  ಅದರ ಆಚೆಗೆ ಒಂದು ದುಷ್ಟ ಶಕ್ತಿ ಇರುತ್ತದೆ. ಆ ಶಕ್ತಿ ಈ ಪ್ರೀತಿಯನ್ನು ಹೊತ್ತುಕೊಂಡು ಹೊಗುತ್ತದೆ. ಇದೇ ನಾವು ಸಾಮಾನ್ಯ ಹಾರಾರ್ ಚಿತ್ರಗಳಲ್ಲಿ ಕಾಣುವುದು. ಆದರೆ ನಿರ್ದೇಶಕ ಆಕಾಶ್ ಶ್ರೀವತ್ಸ ದೈಜಿ ಚಿತ್ರವನ್ನು  ಈ ರೀತಿಯ ಹಾರಾರ್ ಸಿನಿಮಾ ಮಾಡಿಲ್ಲ" ಎಂದು ಮಹಾನ್ ನಟ ರಮೇಶ್ ಅರವಿಂದ್ ಅವರು ತಿಳಿಸಿದರು.


     ತಮ್ಮ ಅಮೋಘ ಅಭಿನಯದಿಂದ ಜನಮನಗೆದ್ದಿರುವ  ರಮೇಶ್ ಅರವಿಂದ್ ಅವರ ಹುಟ್ಟುಹಬ್ಬಕ್ಕೆ  ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ 'ದೈಜಿ' ಚಿತ್ರದ ಟೀಸರ್ ಬಿಡುಗಡೆ ಮಾಡಿ
ಚಿತ್ರತಂಡ ತಮ್ಮ ನಾಯಕನಿಗೆ  ಶುಭಾಶಯ ತಿಳಿಸಿದೆ.

     ಈ ಸಂದರ್ಭದಲ್ಲಿ ರಮೇಶ್ ಅರವಿಂದ್  ಅವರು ಮಾತನಾಡಿದರು.



"ಈವರೆಗೂ ನಾನು ಸಾಕಷ್ಟು ಹಾರಾರ್ ಸಿನಿಮಾ ನೋಡಿದ್ದೇನೆ. ಆದರೆ ಈ ರೀತಿ ಕಥೆ ನಾನು ನೋಡಿಲ್ಲ. ಅಂತಹ ಚಿತ್ರ ಮಾಡಿದ್ದಾರೆ ನಿರ್ದೇಶಕ ವತ್ಸ ಅವರು. ನಾನು ಬಾಲಚಂದರ್ ಅವರಂತಹ ಹೆಸರಾಂತ ನಿರ್ದೇಶಕರ ಜೊತೆಗೆ ಹತ್ತು ಸಿನಿಮಾ ಮಾಡಿದ್ದೇನೆ. ಮುಂದೆ ವತ್ಸ ಅವರ ಜೊತೆಗೂ ಇದೇ ರೀತಿ ಮಾಡುತ್ತೇನೆ.  ಇನ್ನೂ, ನಿರ್ಮಾಪಕ ರವಿ ಕಶ್ಯಪ್ ಅವರ ಸಿನಿಮಾ ಪ್ರೀತಿ ಬಗ್ಗೆ ಎಷ್ಟು ಹೇಳಿದರು ಕಡಿಮೆ. ರಾಧಿಕಾ ನಾರಾಯಣ್ ಅವರಂತೂ ಮಹಾನಟಿ. ದಿಗಂತ್ ಅವರ ಲವಲವಿಕೆ ನನಗೆ ಬಹಳ ಇಷ್ಟ. ಈ ಚಿತ್ರದಲ್ಲಿ ವಿದೇಶದ ಪ್ರಸಿದ್ದ ಕಲಾವಿದರೊಂದಿಗೂ ನಟಿಸಿದ್ದೇನೆ. ಆದಷ್ಟು ಬೇಗ 'ದೈಜಿ' ಚಿತ್ರವನ್ನು ತೆರೆಯ ಮೇಲೆ ನೋಡಲು ಕಾತುರ‌ನಾಗಿದ್ದೇನೆ ಎಂದು  ಹೇಳಿದರು.

       ನಿರ್ಮಾಪಕ ರವಿ ಕಶ್ಯಪ್ "ಹತ್ತು ವರ್ಷಗಳ ಹಿಂದೆ ನಾನು‌, ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಈ ಚಿತ್ರದ ಬಗ್ಗೆ ಹೇಳಿದ್ದೆ. ಈಗ ಕಾಲ ಕೂಡಿ ಬಂದಿದೆ. ಇದು ವಿದೇಶದಲ್ಲಿ ನಾನು ಕಂಡಿರುವ ನೈಜ ಘಟನೆ ಆಧಾರಿತ ಚಿತ್ರ. ಯಾವುದೇ ಹಾಲಿವುಡ್ ಚಿತ್ರಕ್ಕೂ ಕಡಿಮೆ ಇಲ್ಲದಂತೆ ಮೂಡಿಬಂದಿರುವ ನಮ್ಮ 'ದೈಜಿ' ಚಿತ್ರವನ್ನು ಕೆಲವೆ ದಿನಗಳಲ್ಲಿ ನಿಮ್ಮ ಮುಂದೆ ತರುತ್ತೇವೆ" ಎಂದರು.


     "ನಿರ್ಮಾಪಕ ಹೇಳಿದ ನೈಜ ಘಟನೆಯ ಈ ಕಥೆಯೇ 'ದೈಜಿ' ಚಿತ್ರಕ್ಕೆ ಸ್ಪೂರ್ತಿ. ನಂತರ ಈ ಕಥೆಗೆ ರಮೇಶ್ ಅರವಿಂದ್ ಅವರೇ ಸೂಕ್ತ ಎನಿಸಿ, ಅವರಿಗೆ ಕಥೆ ಹೇಳಿದಾಗ, ನಟಿಸಲು ಒಪ್ಪಿಕೊಂಡಿದ್ದು ಬಹಳ ಖುಷಿಯಾಯಿತು. ಸೂರ್ಯ ಎಂಬ ಪಾತ್ರದಲ್ಲಿ ರಮೇಶ್ ಅವರು ಕಾಣಿಸಿಕೊಂಡಿದ್ದಾರೆ.  ರಾಧಿಕಾ ನಾರಾಯಣ್ ಅವರು ಭೂಮಿ ಪಾತ್ರದಲ್ಲಿ ಹಾಗೂ ರಮೇಶ್ ಅವರ ತಮ್ಮನಾಗಿ ನಟ ದಿಗಂತ್, ಗಗನ್ ಎನ್ನುವ ಪಾತ್ರದಲ್ಲಿ ನಟಿಸಿದ್ದಾರೆ. 'ದೈಜಿ' ಎಂದರೆ ಪ್ರೇತಾತ್ಮಗಳ ದೈವ ಎಂದರ್ಥ" ಎಂದು ನಿರ್ದೇಶಕ ಆಕಾಶ್ ಶ್ರೀವತ್ಸ ತಿಳಿಸಿದರು.

     ನಟಿ ರಾಧಿಕಾ ನಾರಾಯಣ್ ಹಾಗೂ  ದಿಗಂತ್ ತಮ್ಮ ಪಾತ್ರಗಳ ಬಗ್ಗೆ,  ಚಿತ್ರದಲ್ಲಿ ನಟಿಸಿರುವ ಬಿ.ಎಂ.ಗಿರಿರಾಜ್, ಬರಹಗಾರ ಅಭಿಜಿತ್ ಹಾಗೂ ಕಾಸ್ಟಿಂಗ್ ಡೈರೆಕ್ಟರ್ ಸುನಯನ ಸುರೇಶ್ ಮುಂತಾದವರು "'ದೈಜಿ' ಬಗ್ಗೆ ಮಾತನಾಡಿದರು. ಶ್ರೀಶ ಕುದುವಳ್ಳಿ ಛಾಯಾಗ್ರಹಣ, ಜ್ಯೂಡಾ ಸ್ಯಾಂಡಿ ಸಂಕಲನವಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್