Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಂಗಕರ್ಮಿ  ಪುರುಷೋತ್ತಮ ಹಂದ್ಯಾಳ್ ಹುಟ್ಟುಹಬ್ಬ ಆಚರಣೆ



ಬಳ್ಳಾರಿ, ಜೂ.19.: ಹಿರಿಯ ರಂಗ ಕಲಾವಿದ, ಪತ್ರಿಕಾ ಛಾಯಾಗ್ರಹಕ ಪುರುಷೋತ್ತಮ‌ ಹಂದ್ಯಾಳ್ ಅವರ ಹುಟ್ಟುಹಬ್ಬವನ್ನು ರಂಗ ಕಲಾವಿದರ ಒಕ್ಕೂಟದಿಂದ  ಆಚರಿಸಲಾಯಿತು.


ನಾಡೋಜ ಬುರ್ರಕಥಾ ದರೋಜಿ ಈರಮ್ಮ ಫೌಂಡೇಷನ್ ಮತ್ತು ಡಾ.‌ಸುಭಾಷ್ ಭರಣಿ ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ ಪುರುಷೋತ್ತಮ ಹಂದ್ಯಾಳ್ ಅವರ ಹುಟ್ಟುಹಬ್ಬದ ಅಂಗವಾಗಿ ಕೇಕ್ ಕತ್ತರಿಸಿ ಬಳಿಕ ಹಂದ್ಯಾಳ್ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆ ಅಧ್ಯಕ್ಷ , ಹಿರಿಯ ಪತ್ರಕರ್ತ ಸಿ.ಮಂಜುನಾಥ್ ಅವರು ಮಾತನಾಡಿ ಪುರುಷೋತ್ತಮ ಅವರ ಮೂರುವರೆ ದಶಕಗಳ ರಂಗ ಸೇವೆ ಮತ್ತು ಎರಡು ದಶಕಗಳ‌ ಪತ್ರಿಕೋದ್ಯಮ ಸೇವೆಯನ್ನು ಶ್ಲಾಘಿಸಿದರು.

ಸಂಘ ಸಂಸ್ಥೆಗಳು ಹಲವು ಪ್ರಶಸ್ತಿ ನೀಡಿ ಉತ್ತೇಜಿಸಿವೆ ಆದರೆ ಸರಕಾರದ ಅಕಾಡೆಮಿಗಳು ಇವರ ರಂಗ ಸೇವೆಯನ್ನು ನಿರ್ಲಕ್ಷಿಸಿವೆ ಎಂದು‌ ಬೇಸರ ವ್ಯಕ್ತಪಡಿಸಿದರು.

ಫೌಂಡೇಶನ್ ಅಧ್ಯಕ್ಷ, ಸತ್ಯಂ‌ ಬಿಇಡಿ ಕಾಲೇಜಿನ ಪ್ರಾಚಾರ್ಯ ಡಾ. ಅಶ್ವರಾಮು ಅವರು ಮಾತನಾಡಿ ರಂಗ ಸಂಘಟಕರೂ ಆಗಿರುವ ಪುರುಷೋತ್ತಮ ಹಂದ್ಯಾಳ್ ಅವರು ಉದಯೋನ್ಮುಖ ಹಾಗೂ ಹಿರಿಯ ರಂಗ ಕಲಾವಿದರಿಗೆ ವೇದಿಕೆ ಕಲ್ಪಿಸುವುದರ ಜತೆಗೆ ಪ್ರಶಸ್ತಿ ಪುರಸ್ಕಾರಗಳನ್ನು ನೀಡಿ ಸತ್ಕರಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಮಾ ಪುರುಷೋತ್ತಮ ಹಂದ್ಯಾಳ್,  ಅಧ್ಯಾಪಕಿ ಸಾಯಿ ಶೃತಿ ಹಂದ್ಯಾಳ್ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ