Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರೆಕಲ್ಲು ಗ್ರಾಮದಲ್ಲಿ ಮತದಾನ ಜಾಗೃತಿಗೆ ರಂಗೋಲಿ ಸ್ಪರ್ಧೆ

ಬಳ್ಳಾರಿ,ಏ.24 :ಲೋಕಸಭಾ ಚುನಾವಣೆಗೆ ಮೇ 07 ರಂದು ನಡೆಯುವ ಮತದಾನ ದಿನದಂದು ಪ್ರತಿಯೊಬ್ಬ ಅರ್ಹರು ಮತದಾನ ಮಾಡಬೇಕು. ನಿಮ್ಮವರಿಗೂ ಮತದಾನ ಮಾಡುವಂತೆ ತಿಳಿಸಬೇಕು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಯೋಜನಾಧಿಕಾರಿ ವಾಗೇಶ್ ಶಿವಾಚಾರ್ಯ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಬಳ್ಳಾರಿ ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಮತದಾನ ಮಹತ್ವ ಸಾರಲು ಬಳ್ಳಾರಿ ತಾಲ್ಲೂಕಿನ ಕಾರೇಕಲ್ಲು ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅರ್ಹ ಮತದಾರರು ಯಾವುದೇ ಉಡುಗೊರೆಗಳಿಗೆ ಮರುಳಾಗದೇ ನಿರ್ಭೀತಿಯಿಂದ ಮತದಾನ ಮಾಡುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಯುವತಿಯರಿಂದ ಆಕರ್ಷಕ ರಂಗೋಲಿ ಮೂಡಿದ್ದವು. *ರಂಗೋಲಿ ಸ್ಪರ್ಧೆ ವಿಜೇತರ ಪಟ್ಟಿ* ಪ್ರಥಮ ಸ್ಥಾನ- ಸುಷ್ಮಾ, ದ್ವಿತೀಯ ಸ್ಥಾನ- ಶಾಂತಿ ಮತ್ತು ತೃತೀಯ ಸ್ಥಾನ- ಯಶೋಧ. ಈ ಸಂಧರ್ಭದಲ್ಲಿ ತಾಲ್ಲೂಕು ಪಂಚಾಯತ್‍ನ ಕಾರ್ಯನಿರ್ವಾಹಕಾಧಿಕಾರಿ ಮಡಗಿನ ಬಸಪ್ಪ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಮಹಮ್ಮದ್ ಗೌಸ್ ಸೇರಿದಂತೆ ಗ್ರಾಮ ಪಂಚಾಯತಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ