LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಾ.14 ರಂದು ರಾಷ್ಟಿçÃಯ ಲೋಕ್ ಅದಾಲತ್

ಬಳ್ಳಾರಿ,ಮಾ.13.
ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಮಾ.14 ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ನಡೆಯಲಿದೆ.
ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಲೋಕ್ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ.
ಸಾರ್ವಜನಿಕರು, ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳುವುದರ ಮೂಲಕ ತಮ್ಮ ವಿವಾದಗಳನ್ನು ಅಂತ್ಯಗೊಳಿಸಿಕೊಳ್ಳಬಹುದು. ರಾಷ್ಟಿçÃಯ ಲೋಕ್ ಅದಾಲತ್ ಅಂಗವಾಗಿ ಪ್ರತಿದಿನ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ 31 ನ್ಯಾಯಾಲಯಗಳಲ್ಲಿ ಪೂರ್ವಭಾವಿ ಬೈಠಕ್ ಗಳು ನಡೆಯುತ್ತಲಿರುತ್ತವೆ. ಪೂರ್ವಭಾವಿ ಬೈಠಕ್ ಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ದೂ.08392-278077 ಹಾಗೂ ಎನ್‌ಎಎಲ್‌ಎಸ್‌ಎ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್