Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೇವ್ ಪಾರ್ಟಿ  ಪ್ರಕರಣ: ಡ್ರಗ್ಸ್ ಪೆಡ್ಲರ್ ಬಂಧನ

ಬೆಂಗಳೂರು, ಜೂನ್.03: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಿಳಿ ನಡೆದಿದ್ದ ರೇವ್ ಪಾರ್ಟಿ  ಪ್ರಕರಣಕ್ಕೆ ಸಂಬಂಧಿಸಿ ಈ ಪಾರ್ಟಿಗೆ ಡ್ರಗ್ಸ್ ಸಪ್ಲೈ  ಮಾಡಿದ್ದ ಪೆಡ್ಲರ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಡಿಜೆ ಹಳ್ಳಿ ನಿವಾಸಿ, ಇಮಾರ್ ಶರೀಫ್ ಬಂಧಿತ ಆರೋಪಿ. ಈತ ಹೈಟೆಕ್ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ. ಡ್ರಗ್ಸ್ ಸಹಿತ ಬರುವಂತೆ ಶರೀಫ್​ಗೆ ತಿಳಿಸಲಾಗಿತ್ತು. ಅದ್ರಂತೆ ವಿವಿಧ ಮಾದರಿಯ ಡ್ರಗ್ಸ್ ತೆಗೆದುಕೊಂಡು ಈತ ಪಾರ್ಟಿಗೆ ಬಂದಿದ್ದ. ಸದ್ಯ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ರೇವ್ ಪಾರ್ಟಿಯಲ್ಲಿ ಆಯೋಜಕರ ಮೂಲಕ ಡ್ರಗ್ಸ್ ನೀಡಲಾಗಿತ್ತು. ಆರೋಪಿ ಶರೀಫ್ ಬಳಿ ನಲವತ್ತು ಎಂಡಿಎಂಎ ಮಾತ್ರೆಗಳು ಪತ್ತೆಯಾಗಿವೆ. ಸದ್ಯ ಶರೀಫ್ ಅರೆಸ್ಟ್ ಮಾಡಿ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಸಿಸಿಬಿ ನೋಟಿಸ್​ಗೆ ಹಾಜರಾಗದವರಿಗೆ ಸಂಕಷ್ಟ ಎದುರಾಗಲಿದೆ. ಪಾರ್ಟಿಯಲ್ಲಿ ಹಾಜರಾಗಿ ಡ್ರಗ್ಸ್ ಸೇವನೆ ಹಿನ್ನಲೆ ತೆಲುಗು ನಟಿ ಹೇಮಾ, ಆಶಿ ರಾಯ್ ಸೇರಿ ಇದುವರೆಗೆ ಇಪತ್ತಕ್ಕೂ ಹೆಚ್ಚು ಜನರಿಗೆ ಸಿಸಿಬಿ ನೋಟಿಸ್ ನೀಡಿದೆ. ಆದರೆ ಯಾರು ಕೂಡ ಇದುವರೆಗೆ ಸಿಸಿಬಿ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಸಿಸಿಬಿ ನ್ಯಾಯಾಲಯದ ಮೋರೆ ಹೋಗಲಿದೆ. ವಿಚಾರಣೆಗೆ ಹಾಜರಾಗದ ವ್ಯಕ್ತಿಗಳ ವಿರುದ್ದ ಅರೆಸ್ಟ್ ವಾರಂಟ್ ಪಡೆದು ಬಂಧಿಸಲು ಅಧಿಕಾರಿಗಳು ತೀರ್ಮಾನ ಮಾಡಿದ್ದಾರೆ.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*