LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆ ಮಾಡದಿರಲು ಆರ್​ಬಿಐ ನಿರ್ಧಾರ

ಮುಂಬೈ: ಭಾರತೀಯ ರಿಸರ್ವ್​ ಬ್ಯಾಂಕ್​ ಸತತ 9ನೇ ಬಾರಿಯೂ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಇರುವಂತೆ ಶೇಕಡಾ 6.5ರಲ್ಲೇ ಮುಂದುವರಿಸಿದೆ. ತನ್ನ ಆರ್ಥಿಕ ನೀತಿಗಳ ಸಭೆ ಬಳಿಕ ಇಂದು ಸುದ್ದಿಗೋಷ್ಠಿ ನಡೆಸಿದ ಆರ್​ಬಿಐ ಗವರ್ನರ್​​ ಶಕ್ತಿಕಾಂತ್​ ದಾಸ್​, ಬಡ್ಡಿದರವನ್ನು ಯಥಾಸ್ಥಿತಿಯಲ್ಲೇ ಮುಂದುವರೆಸುವುದಾಗಿ ಘೋಷಿಸಿದ್ದಾರೆ.


ಜಾಗತಿಕ ಆರ್ಥಿಕ ಅನಿಶ್ಚಿತತೆಗಳ ನಡುವೆ ಆರ್​ಬಿಐ ತನ್ನ ಎಚ್ಚರಿಕೆ ಹೆಜ್ಜೆಯನ್ನು ಮುಂದುವರೆಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಶೇಕಡಾ 6.5 ಕ್ಕೆ ಬದಲಾಯಿಸದೆ ಇರಿಸಲು ತೀರ್ಮಾನಿಸಿದೆ. ವಿಕಸಿಸುತ್ತಿರುವ ಸ್ಥೂಲ ಆರ್ಥಿಕ ಪರಿಸ್ಥಿತಿಗಳು ಮತ್ತು ಒಟ್ಟಾರೆ ಆರ್ಥಿಕ ದೃಷ್ಟಿಕೋನದ ವಿವರವಾದ ಮೌಲ್ಯಮಾಪನದ ನಂತರ, ನಾಲ್ವರು ಸದಸ್ಯರು ರೆಪೋ ದರವನ್ನು ಶೇಕಡಾ 6.5ರ ಮಟ್ಟದಲ್ಲೇ ಇರಿಸಲು ನಿರ್ಧರಿಸಿದ್ದರಿಂದಾಗಿ ಆರ್​ಬಿಐ ಈ ನಿಲುವಿಗೆ ಬಂದಿದೆ.


"ಸ್ಥಾಯಿ ಠೇವಣಿ ಸೌಲಭ್ಯದ ದರವು ಶೇ 6.25, ಮಾರ್ಜಿನಲ್ ಸ್ಟ್ಯಾಂಡಿಂಗ್ ಸೌಲಭ್ಯ ದರ ಹಾಗೂ ಬ್ಯಾಂಕ್ ದರವನ್ನು ಶೇ 6.75ರಲ್ಲೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ದಾಸ್​ ಇದೇ ವೇಳೆ ಪ್ರಕಟಿಸಿದರು. ಹಣದುಬ್ಬರವನ್ನು ನಿಯಂತ್ರಣದಲ್ಲಿ ಇಡುವ ದೃಷ್ಟಿಕೋನದಿಂದ ರೆಪೋ ದರವನ್ನು ಸ್ಥಿರವಾಗಿಡುವ ನಿರ್ಧಾರಕ್ಕೆ ಬರಲಾಗಿದೆ. ಆಹಾರ ಹಣದುಬ್ಬರ ಮತ್ತು ಇತರ ಆರ್ಥಿಕ ಅಂಶಗಳಿಂದಾಗಿ ಹಣದುಬ್ಬರವನ್ನು ಶೇಕಡಾ 4ರೊಳಗೆ ತರುವ ಗುರಿಯ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅಷ್ಟೇ ಅಲ್ಲ ತನ್ನ ಗುರಿ ತಲುಪಲು ಕೇಂದ್ರೀಯ ಬ್ಯಾಂಕ್‌ ಸವಾಲುಗಳನ್ನು ಎದುರಿಸುತ್ತಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್