Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈ ವಾರ ತೆರೆಗೆ : ಪಾಠಶಾಲಾ ಪಾಠಶಾಲಾ  ಓದು ಅಥವಾ ಓಡೋಗು...










     ಕೆಲವು ವರ್ಷಗಳ ಹಿಂದೆ ಗ್ಯಾಪಲ್ಲೊಂದು ಸಿನಿಮಾ ಮಾಡಿ ನಂತರ ಓಮಿನಿ ಎಂಬ ಚಿತ್ರ ನಿರ್ದೇಶಿಸಿದ್ದ ಹೆದ್ದೂರ್ ಮಂಜುನಾಥ್ ಶೆಟ್ಟಿ ಅವರ  'ಪಾಠಶಾಲಾ' ಚಿತ್ರ  ಬಿಡುಗಡೆಯಾಗಿದೆ.

     "ಎಂಎಸ್ ಸ್ಕ್ವೇರ್ ಮೂವೀಸ್  ಲಾಂಛನದಲ್ಲಿ ನಾನು ಹಾಗೂ ನನ್ನ ಪತ್ನಿ ಪ್ರೀತಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ‌. ಹತ್ತಕ್ಕೂ ಅಧಿಕ ಸ್ನೇಹಿತರ ಸಹ ನಿರ್ಮಾಣ ಈ ಚಿತ್ರಕ್ಕಿದೆ. ತೀರ್ಥಹಳ್ಳಿ ತಾಲ್ಲೂಕಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ. ನಲವತ್ತಕ್ಕೂ ಆಧಿಕ ಮಕ್ಕಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಮಕ್ಕಳಿಗೆ ತರಭೇತಿ ನೀಡಿ ಆನಂತರ ಚಿತ್ರೀಕರಣ ಮಾಡಲಾಯಿತು. ತೀರ್ಥಹಳ್ಳಿ ಆಸುಪಾಸಿನ ಮಕ್ಕಳೇ ಇದರಲ್ಲಿ ನಟಿಸಿದ್ದಾರೆ. ಹಿರಿಯರಾದ ಬಾಲಾಜಿ ಮನೋಹರ್, ಸುಧಾಕರ್ ಬನ್ನಂಜೆ, ಕಿರಣ್ ನಾಯಕ್, ನಟನ ಪ್ರಶಾಂತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. 80, 90 ರ ಕಾಲಘಟ್ಟದಲ್ಲಿ ಶಿಕ್ಷಕರ ಹಾಗೂ ಮಕ್ಕಳ ನಡುವೆ ಇದ್ದ ಸಂಬಂಧದ ಸುತ್ತಲ್ಲಿನ ಕಥಾಹಂದರವನ್ನು ಈ ಚಿತ್ರ ಹೊಂದಿದೆ. 'ಪಾಠಶಾಲಾ' ಚಿತ್ರಕ್ಕೆ 'ಓದು ಅಥವಾ ಓಡೋಗು' ಎಂಬ ಅಡಿಬರಹವಿದೆ. ಇದು ಬರೀ ಮಕ್ಕಳ ಚಿತ್ರವಲ್ಲ. ಎಲ್ಲಾ ವಯಸ್ಸಿನವರು ನೋಡಲೇಬೇಕಾದ ಚಿತ್ರ‌.  ಎಲ್ಲರೂ ನಮ್ಮ ಚಿತ್ರ ನೋಡಿ ಪ್ರೋತ್ಸಾಹ ನೀಡಿ" ಎಂಬುದು ನಿರ್ದೇಶಕ ಹೆದ್ದೂರ್ ಮಂಜುನಾಥ್ ಶೆಟ್ಟಿ ಅವರ ಮನವಿಯಾಗಿದೆ.

     ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಗ್ರಹಣ ಹಾಗೂ ಉಮೇಶ್ ಆರ್ ಬಿ ಸಂಕಲನ ಈ ಚಿತ್ರಕ್ಕಿದೆ.


















Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*