Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಓದು ನಮ್ಮ ಬದುಕಿಗೆ ಬೆಳಕಾಗುತ್ತದೆ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ :  ನಮ್ಮಂತ ಅನೇಕ ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಪ್ರಾಮಾಣಿಕ ಓದು, ಕಠಿಣ ಪರಿಶ್ರಮಗಳೆ ಬದುಕಿನ ಬೆಳಕಾಗಿವೆ. ಮಕ್ಕಳು ಪ್ರಾಮಾಣಿಕವಾಗಿ, ಮನಮುಟ್ಟುವಂತೆ ಓದಬೇಕು. ಈ ಓದು ಉನ್ನತ ಹುದ್ದೆ, ಉತ್ತಮ ಸ್ಥಾನಮಾನ, ಹೆಚ್ಚಿನ ಸಾಧನೆಗಳಿಗೆ ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.


 ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಆವರಣದಲ್ಲಿರುವ ಶ್ರೀ ಎನ್.ಎ.ಮುತ್ತಣ್ಣ ಸ್ಮಾರಕ ಪೋಲೀಸ್ ಮಕ್ಕಳ ವಸತಿಶಾಲೆಯ ಪ್ರಸಕ್ತ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.


ವಿದ್ಯಾರ್ಥಿ ಜೀವನದಲ್ಲಿ 6ನೇ ವರ್ಗದಿಂದ 12 ನೇ ವರ್ಗದ ಓದು ಸಾಧನೆಗೆ ಮುಖ್ಯವಾಗುತ್ತದೆ. ಕಠಿಣ ಪರಿಶ್ರಮ, ಏಕಾಗ್ರತೆ, ಶಿಸ್ತು, ಛಲ, ವಿನಯ ಇರಬೇಕು.  ಸ್ಫರ್ಧೆಯಲ್ಲಿ ಗೆಲವು ಮತ್ತು ಕಲಿಕೆ ಮಾತ್ರ ಇರುತ್ತದೆ. ಸೋಲು ಎಂಬುದು ಇಲ್ಲ. ಇದನ್ನು ಅರ್ಥೈಸಿಕೊಂಡು ಮುನ್ನಡೆಯಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


ಪೋಲೀಸ್ ವಸತಿ ಶಾಲೆಯ ಅಭಿವೃದ್ಧಿಗೆ ಜಿಲ್ಲಾಡಳಿತ ಸಿದ್ಧವಿದೆ. ಮಕ್ಕಳು ಓದು, ಕ್ರೀಡೆಗಳಲ್ಲಿ ಗುರಿ ಹೊಂದಿ, ಪ್ರಯತ್ನಿಸಬೇಕು ಎಂದರು.


ದೇಶಭಕ್ತಿ, ತಂದೆ-ತಾಯಿ ಬಗ್ಗೆ ಗೌರವ, ನಾಡಿನ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಉತ್ತಮ ಸಂಸ್ಕøತಿ, ಸಂಸ್ಕಾರಗಳನ್ನು ವಿದ್ಯಾರ್ಥಿ ಜೀವನದಲ್ಲಿಯೇ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.


ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಅವರು ಮಾತನಾಡಿ, ಪೋಲೀಸ್ ಶಾಲೆ ಶಿಸ್ತು ಕಲಿಸುತ್ತದೆ. ಪೋಲೀಸ್ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಸಮಾಜದಲ್ಲಿ ವಿಶೇಷವಾಗಿ ಗುರುತಿಸಿಕೊಳ್ಳುತ್ತಾರೆ. ವಿದ್ಯಾರ್ಥಿಗಳಿಗೆ ಓದು, ಬರಹ ಮತ್ತು ಗುರಿ ಸಾಧಿಸುವಲ್ಲಿ ಬದ್ಧತೆ ಇರಬೇಕು ಎಂದರು.

ಮಕ್ಕಳು ಓದುವ ವಯಸ್ಸಿನಲ್ಲಿ ಕ್ರಿಯಾಶೀಲತೆ ಬೆಳೆಸಿಕೊಳ್ಳಬೇಕು. ಕುತೂಹಲ, ಕಲಿಕೆಯ ಹಸಿವು ಇರಬೇಕು. ಇಂದಿನ ಉತ್ತಮ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಭುವನೇಶ ಪಾಟೀಲ ಅವರು ತಿಳಿಸಿದರು.


ಐಎಎಸ್ ಪೋಬೆಷನರಿ ರಿತಿಕಾ ವರ್ಮಾ ಅವರು ಮಾತನಾಡಿ, ಮಕ್ಕಳು ಸಹನೆ, ತಾಳ್ಮೆ, ಶ್ರಮದ ಗುಣ ಬೆಳಸಿಕೊಳ್ಳಬೇಕು. ಶಾಲೆಗಳಲ್ಲಿ ಪಡೆಯುವ ಜ್ಞಾನ ನಮ್ಮ ವ್ಯಕ್ತಿತ್ವ ರೂಪಿಸುತ್ತದೆ. ಭೌತಿಕ ಮತ್ತು ಮಾನಸಿಕ ಬೆಳವಣಿಗೆಗೆ ವಿದ್ಯಾರ್ಥಿಗಳು ತಮ್ಮನ್ನು ಮುಕ್ತವಾಗಿ ಒಳಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.


ಜಿಲ್ಲಾ ಪೋಲೀಸ್ ಅಧಿಕ್ಷಕ ಡಾ.ಗೋಪಾಲ ಬ್ಯಾಕೋಡ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಪೋಲೀಸ್ ಮಕ್ಕಳ ವಸತಿ ಶಾಲೆಯ ಮಕ್ಕಳು ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ರಾಜ್ಯಮಟ್ಟದ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಮಿಷನ್ ವಿದ್ಯಾಕಾಶಿಯ ಕಾರ್ಯಕ್ರಮಗಳಿಂದ ಶಾಲೆಯ ಶೈಕ್ಷಣಿಕ ಸುಧಾರಣೆಗೆ ಸಹಾಯವಾಗಿದೆ. ಪ್ರಸಕ್ತ ವರ್ಷ ಜಿಲ್ಲೆಗೆ ಪ್ರಥಮ ಸ್ಥಾನ ಬರಲು ಈಗಿನಿಂದಲೇ ಮಕ್ಕಳು ಸಿದ್ದತೆ, ಉತ್ತಮ ಅಧ್ಯಯನ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಶಾಲಾ ಸಮಿತಿ ಸದಸ್ಯರು ಜಿ.ಆರ್.ಭಟ್ ಅವರು, ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾತನಾಡಿದರು.


ಹೆಚ್ಚುವರಿ ಪೋಲೀಸ್ ಅಧೀಕ್ಷಕ ನಾರಾಯಣ ಬರಮಣಿ ಶಾಲೆಯ ಕಾರ್ಯ ಚಟುವಟಿಕೆಗಳನ್ನು ತಿಳಿಸಿ, ನಂತರ ಅವರು ವಂದಿಸಿದರು.


ಶಾಲೆ ಮುಖ್ಯೋಪಾಧ್ಯಾಯಿನಿ ಡಾ.ಎಸ್.ಓ.ಬಿರಾದಾರ ಅವರು ಶಾಲೆಯ ಸಾಧಕ ವಿದ್ಯಾರ್ಥಿಗಳನ್ನು ಪರಿಚಯಿಸಿದರು.


ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ: ರಾಷ್ಟ್ರಮಟ್ಟದ ವಿದ್ಯಾರ್ಥಿ ವಿಭಾಗದ ಯೋಗ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಮತ್ತು ಪ್ರಶಸ್ತಿ ಪಡೆದ ವಿಜಯಕುಮಾರ ಸಂಗಪ್ಪ ಅರಳಿಕಟ್ಟಿ ಅವರನ್ನು ಹಾಗೂ ಕಳೆದ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆದ ಸಂಕೇತ ಪೆಡ್ನೇಕರ ಅವರನ್ನು ಸನ್ಮಾನಿಸಲಾಯಿತು. ಮತ್ತು ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ವಿತರಿಸಲಾಯಿತು.


ಪೆÇಲೀಸ್ ಇಲಾಖೆಯ ಪರವಾಗಿ ಎಸ್.ಪಿ. ಡಾ.ಗೋಪಾಲ ಬ್ಯಾಕೋಡ ಅವರು ಜಿಲ್ಲಾಧಿಕಾರಿಗಳನ್ನು, ಜಿಲ್ಲಾ ಪಂಚಾಯತ ಸಿಇಓ ಹಾಗೂ ರಿತಿಕಾ ವರ್ಮಾ ಅವರನ್ನು ಸನ್ಮಾನಿಸಿ, ಗೌರವಿಸಿದರು.

ಕಾರ್ಯಕ್ರಮದಲ್ಲಿ ಡಿಎಅರ್ ವಿಭಾಗದ ಡಿವೈಎಸ್‍ಪಿ ಡಿ.ಎಸ್.ಧನಗರ, ಎಸ್.ಪಿ. ಕಚೇರಿ ಸಹಾಯಕ ಆಡಳಿತ ಅಧಿಕಾರಿ ಮಹಾಂತೇಶ ಹಿರೇಮಠ ಹಾಗೂ ಎನ್.ಎ.ಮುತ್ತಣ್ಣ ಶಾಲೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಇತರು ಭಾಗವಹಿಸಿದ್ದರು.ಡಾ.ಎ.ಸಿ.ಅಲ್ಲಯ್ಯನವರಮಠ ಅವರು ಕಾರ್ಯಕ್ರಮ ನಿರೂಪಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ