Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಹೆಬ್ಬಾಳಕರ್ ಸೂಚನೆ


 ಬೆಂಗಳೂರು:ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ.


ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ - ಸಮುದ್ರ ಪಾತ್ರಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಬೇಕು ಎಂದು ಸಚಿವರು ತಿಳಿಸಿದ್ದಾರೆ. ‌


ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು, ಏಳು ತಾಲೂಕು ಜನರ ಅನುಕೂಲಕ್ಕಾಗಿ ದಿನ 24 ಗಂಟೆ ಸಹಾಯವಾಣಿ ಕಾರ್ಯನಿರ್ವಹಿಸಬೇಕು ಎಂದು ಸಚಿವೆ ಹೆಬ್ಬಾಳಕರ್ ತಿಳಿಸಿದ್ದಾರೆ.

ಸಾರ್ವಜನಿಕರು ಸಹ ಎಚ್ಚರಿಕೆ ವಹಿಸಬೇಕು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ