LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದಲ್ಲಿ ಬಿಸಿಗಾಳಿ ತೀವ್ರ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು01: ರಾಜ್ಯದಲ್ಲಿ ಬಿಸಿಗಾಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳವರೆಗೆ ಜಿಲ್ಲೆಗಳಿಗೆ ಹವಾಮಾನ ಇಲಾಖೆ ವಿವಿಧ ರೀತಿಯ ಎಚ್ಚರಿಕೆಗಳನ್ನು ನೀಡಿದೆ.


ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್‌, ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗು ಬಳ್ಳಾರಿ, ವಿಜಯಪುರ, ರಾಯಚೂರು, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.


ಮಳೆ ಮುನ್ಸೂಚನೆ: ಮೇ 4ರಂದು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಲಿದೆ. ಮೇ 5ರಂದು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.


ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ 5 ದಿನಗಳವರೆಗೆ ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ.


ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ನಿರ್ಮಲ ಆಕಾಶವಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 39 ಡಿಗ್ರಿ ಮತ್ತು 24 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇಂದು ಬೆಂಗಳೂರು ನಗರದಲ್ಲಿ 38.2 ಡಿಗ್ರಿ ಉಷ್ಣಾಂಶ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್