LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನೀಟ್ ಎಕ್ಸಾಂ ಬರೆಯಲು ನಿರಾಕರಣೆ: ಕಣ್ಣೀರಿಟ್ಟ ವಿದ್ಯಾರ್ಥಿನಿಯರು

ಬೆಂಗಳೂರು,

ನೀಟ್ (NEET) ಪರೀಕ್ಷೆಗೆ ನಿಗದಿತ ಸಮಯಕ್ಕಿಂತ ಕೆಲವೇ ನಿಮಿಷ ತಡವಾಗಿ ಆಗಮಿಸಿದ ಇಬ್ಬರು ವಿದ್ಯಾರ್ಥಿನಿಯರಿಗೆ (Students) ಪ್ರವೇಶ ನಿರಾಕರಿಸಿದ ಘಟನೆ ಬೆಂಗಳೂರಿನ ಎರಡು ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. 10 ನಿಮಿಷ ತಡವಾಗಿ ಬಂದಿದ್ದಕ್ಕೆ ಪರೀಕ್ಷೆ ಬರೆಯಲು ಸಿಬ್ಬಂದಿ ನಿರಾಕರಿಸಿದ್ದಾರೆ. ಪರೀಕ್ಷೆ ಬರೆಯಲು ಆಗದ ಹಿನ್ನಲೆ ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದಾರೆ.

ಬೆಂಗಳೂರಿನ ಯಲಹಂಕದ ಪ್ರಥಮ ದರ್ಜೆ ಕಾಲೇಜ್​ ಮತ್ತು ಚಾಲುಕ್ಯ ಸರ್ಕಲ್ ಬಳಿಯ ಆರ್​ಸಿ ಕಾಲೇಜಿನ ಎಕ್ಸಾಂ ಸೆಂಟರ್‌ನಲ್ಲಿ ಘಟನೆ ಕಂಡುಬಂದಿವೆ. ಮಧ್ಯಾಹ್ನ 2 ಗಂಟೆಗೆ ನೀಟ್ ಎಕ್ಸಾಂ ಆರಂಭವಾಗಿದೆ. ಮಧ್ಯಾಹ್ನ 1.30ರವರೆಗೆ ಎಕ್ಸಾಂ ಸೆಂಟರ್‌ನ ಗೇಟ್‌ ಓಪನ್​ ಮಾಡಲಾಗಿತ್ತು. 

ಯಲಹಂಕದ ಪ್ರಥಮ ದರ್ಜೆ ಕಾಲೇಜಿಗೆ ನೀಟ್ ಎಕ್ಸಾಂ ಬರೆಯಲು ಓರ್ವ ವಿದ್ಯಾರ್ಥಿನಿ ಆಗಮಿಸಿದ್ದಾರೆ. ಆದರೆ ಅಷ್ಟರಲ್ಲಿ 10 ನಿಮಿಷ ತಡವಾಗಿದೆ. ಹೀಗಾಗಿ ಸಿಬ್ಬಂದಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ್ದಾರೆ. ಇನ್ನು ಇದೇ ರೀತಿಯಾಗಿ ನಗರದ ಚಾಲುಕ್ಯ ಸರ್ಕಲ್ ಬಳಿಯ ಆರ್​ಸಿ ಕಾಲೇಜಿನಲ್ಲೂ ಘಟನೆ ನಡೆದಿದೆ.

ಕಣ್ಣೀರು ಹಾಕಿದ ವಿದ್ಯಾರ್ಥಿನಿಯರು 

ಅತ್ತಿಬೆಲೆಯಿಂದ ಓರ್ವ ವಿದ್ಯಾರ್ಥಿನಿ ಎಕ್ಸಾಂ ಸೆಂಟರ್​ಗೆ ತಡವಾಗಿ ಆಗಮಿಸಿದ್ದಾಳೆ. ಟ್ರಾಫಿಕ್‌ಜಾಮ್‌ನಿಂದ 20 ನಿಮಿಷ ತಡವಾಗಿ ಬಂದಿದ್ದ ಯುವತಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ. ಗೇಟ್ ಕ್ಲೋಸ್ ಆಗಿದೆ, ಪ್ರೊಸೀಜರ್ ಮುಗಿದಿದೆ. ಏನು ಮಾಡುವುದಕ್ಕೆ ಆಗಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ. ಹೀಗಾಗಿ ಪರೀಕ್ಷೆ ಬರೆಯಲು ಆಗದ ಹಿನ್ನಲೆ ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದಾರೆ. ವರ್ಷವಿಡೀ ಕಷ್ಟಪಟ್ಟು ಓದಿದರೂ ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲವಲ್ಲ ಎಂದು ವಿದ್ಯಾರ್ಥಿನಿಯರು ಮರುಗಿದರು.

2026-27ನೇ ಸಾಲಿನ ವೈದ್ಯಕೀಯ ಪ್ರವೇಶಾತಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಇಂದು ನಡೆದಿದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆದಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಒಳಗೆ ಬರಬೇಕು. ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್‌ ಕಾರ್ಡ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಸಹಿತ ಹಾಜರಾಗುವಂತೆ ತಿಳಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್