LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Koppal

ಕೂಲಿ ಕೆಲಸದೊಂದಿಗೆ ವಿಮೆ ನೋಂದಣಿ ಮಾಡಿಕೊಳ್ಳಿ: ಸೌಮ್ಯ

ಚಳ್ಳಾರಿ ಗ್ರಾಮದ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಆರೋಗ್ಯ ತಪಾಸಣೆ

ಕೊಪ್ಪಳ ಆಗಸ್ಟ್ 20: ಪ್ರತಿಯೊಬ್ಬ ಕೂಲಿಕಾರರು ಕೂಲಿ ಕೆಲಸದೊಂದಿಗೆ ವಿವಿಧ ವಿಮಾ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಕೊಪ್ಪಳ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಕೆ.ಸೌಮ್ಯ ಅವರು ಕರೆ ನೀಡಿದರು.
 ಕೊಪ್ಪಳ ತಾಲೂಕಿನ ಚಿಕ್ಕಬೊಮ್ಮನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಳ್ಳಾರಿ ಗ್ರಾಮದಲ್ಲಿ ಆ.19ರಂದು ವಿಬಿಜಿ ರಾಮ್‌ಜೀ ಯೋಜನೆಯಡಿ ನಡೆಯುತ್ತಿರುವ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
 ವಿಬಿಜಿ ರಾಮ್‌ಜೀ ಯೋಜನೆಯು ಗ್ರಾಮೀಣ ಭಾಗದ ಕೂಲಿಕಾರರು ಗುಳೆ ಹೋಗುವುದನ್ನು ತಡೆದು, ಪ್ರತಿ ಕುಟುಂಬಕ್ಕೆ ಸ್ಥಳೀಯವಾಗಿ 125 ದಿನಗಳ ಕೂಲಿ ಕೆಲಸ ಒದಗಿಸುವ ಉದ್ದೇಶ ಹೊಂದಿದೆ. ಯೋಜನೆಯಡಿ ಪುರುಷರು ಮತ್ತು ಮಹಿಳೆಯರಿಗೆ ಸಮಾನ ಕೂಲಿ ನಿಗದಿಪಡಿಸಲಾಗಿದೆ. ಜಲ ಸಂರಕ್ಷಣೆ, ನೀರಾವರಿ, ಅಂತರ್ಜಲ ಮರುಪೂರಣ, ಜಲಾನಯನ ಪ್ರದೇಶಗಳ ಅಭಿವೃದ್ಧಿ ಹಾಗೂ ಜಲಮೂಲಗಳ ಪುನಶ್ಚೇತನಕ್ಕೆ ಆದ್ಯತೆ ನೀಡಲಾಗಿದೆ. ವಿಕಸಿತ ಗ್ರಾಮ ಪಂಚಾಯಿತಿಯಿಂದ ವಿಕಸಿತ ಭಾರತದೆಡೆಗೆ ಸಾಗುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದರು.
 ಪ್ರಸ್ತುತ ಪ್ರತಿ ಮಾನವ ದಿನಕ್ಕೆ ರೂ. 382 ಕೂಲಿ ನಿಗದಿಪಡಿಸಲಾಗಿದ್ದು, ಕೂಲಿಕಾರರು ಅಳತೆಗೆ ಅನುಗುಣವಾಗಿ ಕೆಲಸ ನಿರ್ವಹಿಸಬೇಕು. ಕೆಲಸದ ಅಳತೆಗೆ ಅನುಗುಣವಾಗಿ ಕೂಲಿ ಹಣ ಪಾವತಿಸಲಾಗುತ್ತದೆ ಎಂದು ಸೌಮ್ಯ ತಿಳಿಸಿದರು.
 ತಾಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ ಮಾತನಾಡಿ, ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಾದ ಜಾನುವಾರು ಶೆಡ್, ಮೇಕೆ ಶೆಡ್, ಕೃಷಿಹೊಂಡ, ಬದು ನಿರ್ಮಾಣ, ಕೋಳಿ ಶೆಡ್ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು 125 ದಿನಗಳ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
 ಜಮೀನು ಇಲ್ಲದವರು ಗ್ರಾಮ ಪಂಚಾಯಿತಿಯಿಂದ ಕೈಗೊಳ್ಳುವ ಸಾಮೂಹಿಕ ಕಾಮಗಾರಿಗಳಲ್ಲಿ ಕೂಲಿ ಕೆಲಸ ನಿರ್ವಹಿಸಿ, ಆದಾಯ ಗಳಿಸುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು. ಹೊಸದಾಗಿ ನೋಂದಣಿಯಾದ ಕುಟುಂಬಗಳಿಗೆ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಲಾಗುತ್ತದೆ ಎಂದರು.
 ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂದಿಗಲ್ಲಪ್ಪ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗವಿಸಿದ್ದಯ್ಯ, ಆರೋಗ್ಯ ಇಲಾಖೆಯ ಸಿಬ್ಬಂದಿ, ಡಿಇಒ ಹುಲಗಪ್ಪ, ಗ್ರಾಮಸ್ಥರಾದ ಅಲ್ಲಾಭಕ್ಷಿ, ಗ್ರಾಮ ಕಾಯಕ ಮಿತ್ರ ಪವಿತ್ರಾ, ಕಾಯಕ ಬಂಧುಗಳು ಹಾಗೂ ಕೂಲಿಕಾರರು ಉಪಸ್ಥಿತರಿದ್ದರು.
****

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮಾಜ ನಮಗೇನು ಕೊಟ್ಟಿದೆ ಎನ್ನುವದಕ್ಕಿಂತ ನಾವು ಸಮಾಜಕ್ಕೆ ಏನು ಮಾಡಿದ್ದೇವೆ ಎನ್ನುವದನ್ನು ಅರಿಯಿರಿ  :ಡಾ. ಅಲ್ಲಮಪ್ರಭು ಶ್ರೀಗಳು ಎನ್‌ಕೌಂಟರ್ ಪ್ರತಿಕಾರಕ್ಕೆ 10 ಎಕರೆ ಅರಣ್ಯವೇ ಬಲಿ!ಬಿ. ನಾಗೇಂದ್ರಗೆ ಹೈಕೋರ್ಟ್ ಆಘಾತ: ರಾಜ್ಯ ಬಿಟ್ಟು ತೆರಳದಂತೆ ಆದೇಶತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಡಿಎಚ್‌ಒ ಡಾ.ಅಲಕಾನಂದ ಮಳಗಿ ದಿಢೀರ್ ಭೇಟಿ: ವೈದ್ಯರು, ಸಿಬ್ಬಂದಿಗೆ ಖಡಕ್ ಸೂಚನೆ"ತೆರಿಗೆದಾರರಿಗೆ ಗೌರವ ನೀಡಿ, ಸಮಾಲೋಚಿಸಿ" ಬಳ್ಳಾರಿ: ಪೋಷಕರ ಪತ್ತೆಗಾಗಿ ಮೂಕ ಬಾಲಕನ ಪರವಾಗಿ ಮನವಿಧರ್ಮಗಳ ನಡುವೆ ಸೌಹಾರ್ದತೆ ಕಾಪಾಡಿ, ಸಂಭ್ರಮದಿಂದ ಹಬ್ಬ ಆಚರಿಸಿ: ಕಿರಣ ಸತ್ತಿಗೇರಿದಿ. 27 ರಂದು "ಹೋರಾಟದ ನಡೆ ಶಾಸಕರ ಮನೆ ಕಡೆ"ಕೂಲಿ ಕೆಲಸದೊಂದಿಗೆ ವಿಮೆ ನೋಂದಣಿ ಮಾಡಿಕೊಳ್ಳಿ: ಸೌಮ್ಯರಾಜೀಯಾಗಬಲ್ಲ ಪ್ರಕರಣಗಳ ಸುಲಭ ಇತ್ಯರ್ಥಕ್ಕೆ ಅವಕಾಶ: ನ್ಯಾ. ಮಹಾಂತೇಶ ದರಗದ