Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಣೆ


ಬಳ್ಳಾರಿ,01.: ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್ 31 ರಿಂದ ಜಾರಿಗೊಳಿಸುತ್ತಿರುವ  ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು  ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ  ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ.


ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6 ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ.7.5, ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕ ಆಕರಿಸುತ್ತಿವೆ.


ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು (ಖಚಿಣioಟಿಚಿಟisಚಿಣioಟಿ) ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು ರಾಜ್ಯ ಸರ್ಕಾರವು ಆ.31 ರಿಂದ ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇ.1 ರಿಂದ  ಶೇ.2 ರಷ್ಟು ಪರಿಷ್ಕರಿಸಿದೆ.
ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಲು ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್ ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್ ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು.
ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‌ಎಂಎಸ್ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.


ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇ.2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು.
ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಕಲ್ಪಿಸಲಾಗುವುದು ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ