Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಬಿಡುಗಡೆ




ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು 1,02,64,714 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ ಮಾಡಿದ ಅವರು 1,02,64,714 ಮತದಾರರಲ್ಲಿ 52,80,287 ಪುರುಷರು, 49,82,589 ಮಹಿಳೆಯರು ಮತ್ತು 1,838 ತೃತೀಯ ಲಿಂಗಿಗಳು ಇದ್ದಾರೆ ಎಂದರು.

ನಗರದ ಎಲ್ಲ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ವಾರ್ಡ್ ಕಚೇರಿಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ www.ceokarnataka.kar.nic.in -- ಮತ್ತು BBMP ವೆಬ್‌ಸೈಟ್ www.bbmp.gov.in ಗಳಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬಹುದು.

ಮೊಬೈಲ್ ಫೋನ್‌ನಲ್ಲಿ VHA (ಮತದಾರರ ಸಹಾಯವಾಣಿ ಅಪ್ಲಿಕೇಶನ್) ಅಥವಾ ವೆಬ್ ಪೋರ್ಟಲ್ voters.eci.gov.in ನಲ್ಲಿಯೂ ಮಾಹಿತಿ ಪಡೆಯಬಹುದು. e-EPIC ಡೌನ್‌ಲೋಡ್ ಮಾಡಿಕೊಂಡು, ಮತಗಟ್ಟೆ ಮತ್ತು ಮತದಾನದ ಶೇಕಡಾವಾರು ಮಾಹಿತಿಯಂತಹ ಇತರ ಮಾಹಿತಿಯನ್ನು ಪಡೆಯಬಹುದು. ನಗರದ 1.02 ಕೋಟಿ ಮತದಾರರ ಪೈಕಿ 95,391 ಯುವ ಮತದಾರರಿದ್ದಾರೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.









Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ