LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಯೋಧರಿಂದ ಬಿಡುಗಡೆಯಾಯಿತು  ಕುಲದಲ್ಲಿ ಕೀಳ್ಯಾವುದೋ ಚಿತ್ರದ ಟ್ರೇಲರ್



     ಯೋಗರಾಜ್ ಸಿನಿಮಾಸ್ ಅರ್ಪಿಸುವ,  ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ, ನಾಯಕಿಯಾಗಿ ನಟಿಸಿರುವ 'ಕುಲದಲ್ಲಿ ಕೀಳ್ಯಾವುದೋ' ಚಿತ್ರದ ಟ್ರೇಲರ್ ಇತ್ತೀಚೆಗೆ ಅನಾವರಣವಾಯಿತು.

      ನಿವೃತ್ತ ಯೋಧರಾದ ಮಂಜುನಾಥ್, ಜಯರಾಮ್, ದೇವರಾಜ್, ಅಶೋಕ್ ಕುಮಾರ್, ಸತ್ಯಂ, ಮಧುಸೂದನ್, ಶೇಖರ್  ಅವರು ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

     "ಕುಲದಲ್ಲಿ ಕೀಳ್ಯಾವುದೋ' ಟ್ರೇಲರ್ ದೇಶಕ್ಕೆ ಸೇವೆ ಸಲ್ಲಿಸಿದ ನಿವೃತ್ತ ಯೋಧರಿಂದ ಬಿಡುಗಡೆಯಾಗಿದ್ದು ತುಂಬಾ ಖುಷಿ ಹಾಗೂ ಹೆಮ್ಮೆಯ ವಿಚಾರ. ಇನ್ನೂ ಚಿತ್ರದ ಬಗ್ಗೆ ಸಾಕಷ್ಟು ಹೇಳಿದ್ದೇನೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಮೇ 23 ರಂದು ಚಿತ್ರ ತೆರೆಗೆ ಬರಲಿದೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಸಿನಿಮಾ ನೋಡಿ" ಎಂದರು ನಿರ್ದೇಶಕ ರಾಮ್ ನಾರಾಯಣ್.

     "ದೇಶ ಕಾಯ್ದ ಯೋಧರಿಂದ ನಮ್ಮ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ನನ್ನ‌ ಮನಸ್ಸಿಗೆ ಬಹಳ ಖುಷಿಯಾಗಿದೆ. ಈ ಸಂದರ್ಭದಲ್ಲಿ ನಾನು ಚಿತ್ರದ ವಿಚಾರಕ್ಕಿಂತ ಚಿತ್ರತಂಡದ ಕುರಿತು ಮಾತನಾಡುತ್ತೇನೆ. ಹೊಸ ನಿರ್ಮಾಪಕರನ್ನು ದುರ್ಬಳಕೆ ಮಾಡಿಕೊಳ್ಳುವವರು ಹೆಚ್ಚು ಅಂತ ನನಗೆ ಅನೇಕರು ಹೇಳಿದ್ದರು. ಆದರೆ ನನ್ನ ಚಿತ್ರತಂಡ ನಿರ್ಮಾಪಕರ ಪರ ನಿಂತಿದೆ. ಯಾರಿಂದಲೂ ನನಗೆ ಯಾವ ವಿಷಯದಲ್ಲೂ ಬೇಜಾರಾಗಿಲ್ಲ. ಹಾಗಾಗಿ ಈ ಸಮಯದಲ್ಲಿ ನನಗೆ ಈ ತಂಡ ಪರಿಚಯಿಸಿದ ಯೋಗರಾಜ್ ಭಟ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಹಾಗೂ ನಮ್ಮ ಚಿತ್ರದಲ್ಲಿ ಬರುವ ಲಾಭದ ಮೂವತ್ತರಷ್ಟು ಭಾಗವನ್ನು ಯೋಧರಿಗೆ ಅರ್ಪಿಸುತ್ತೇನೆ" ಎಂದು ನಿರ್ಮಾಪಕ ಸಂತೋಷ್ ಕುಮಾರ್ ತಿಳಿಸಿದರು. ನಿರ್ಮಾಪಕಿ ವಿದ್ಯಾ ಅವರು ಈ‌ ಸಂದರ್ಭದಲ್ಲಿದ್ದರು.

      "ನಮ್ಮ ಚಿತ್ರಕ್ಕೆ ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಒಂದೊಳ್ಳೆ ಕಥೆ ಮಾಡಿದ್ದಾರೆ. ಆ ಕಥೆ ಗೆದ್ದೆ ಗೆಲ್ಲುತ್ತದೆ ಎಂಬ ವಿಶ್ವಾಸ ನನ್ನಗಿದೆ‌‌. ಹಾಗಾಗಿ ಕರ್ನಾಟಕದ ಉದ್ದಗಲಕ್ಕೂ ಪ್ರಚಾರ ಮಾಡುತ್ತಿದ್ದೇವೆ. ಇನ್ನೂ ನನ್ನ ಮೇಲೆ ಬಂಡವಾಳ ಹೂಡಿರುವ ನಿರ್ಮಾಪಕರಿಗೆ, ನಿರ್ದೇಶಕರಿಗೆ, ವಿಶೇಷವಾಗಿ ಯೋಗರಾಜ್ ಭಟ್, ಶರಣಯ್ಯ ಹಾಗೂ ಸಂಗೀತ ನಿರ್ದೇಶಕ ಮನೋಮೂರ್ತಿ ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದ ಹೇಳುತ್ತೇನೆ"   ಎಂದರು ನಾಯಕ ಮಡೆನೂರ್ ಮನು.

      ನಾಯಕಿ ಮೌನ ಗುಡ್ಡಮನೆ, ಕಲಾವಿದರಾದ ತಬಲ‌ನಾಣಿ, ಕರಿಸುಬ್ಬು, ಹರೀಶ್ ರಾಜ್, ಡ್ರ್ಯಾಗನ್ ಮಂಜು, ಸೀನ ಭಾಯ್ ಹಾಗೂ ಹಿರಿಯ ನಟ ಎಂ.ಎಸ್ ಉಮೇಶ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಸೋನಾಲ್ ಮೊಂತೆರೊ ಅವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ