LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿ

 

ಕುಡತಿನಿ, ಆ.26 ಬಳ್ಳಾರಿ ಭಾಗದ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿರುವ ಅಮರಾವತಿ ಎಕ್ಸ್‌ಪ್ರೆಸ್‌ ರೈಲನ್ನು ಕಾಕಿನಾಡ ವರೆಗೆ ವಿಸ್ತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೋರಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಆಂದ್ರಪ್ರದೇಶದ ಸಚಿವರಾದ ನಾರಾ ಲೋಕೇಶ್ ಅವರಲ್ಲಿ ಮನವಿ ಮಾಡಿದೆ.ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ. ಸತ್ಯಬಾಬು ಅವರು ಸಚಿವರಿಗೆ ಕುಡತಿನಿಯಲ್ಲಿ ಮಂಗಳವಾರ ಮನವಿ ಸಲ್ಲಿಸಿ, ಅಮರಾವತಿ ಎಕ್ಸ್‌ಪ್ರೆಸ್‌ ರೈಲು ಸಂಖ್ಯೆ 17226 ಮತ್ತು 17225 ಪ್ರಸ್ತುತ ನರಸಾಪುರಕ್ಕೆ ನಿಲ್ಲುತ್ತವೆ. ಈ ಮಾರ್ಗವನ್ನು ಕಾಕಿನಾಡಕ್ಕೆ ವಿಸ್ತರಿಸುವುದರಿಂದ ಆಗುವ ಅನುಕೂಲಗಳ ಕುರಿತು ಸಚಿವ ನಾರಾ ಲೋಕೇಶ್ ಅವರಿಗೆ ಮನವರಿಕೆ ಮಾಡಿಕೊಟ್ಟರು.ಬಳ್ಳಾರಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರು ಆಂಧ್ರ ಪ್ರದೇಶದ ವಿವಿಧ ನಗರಗಳಿಗೆ, ವಿಶೇಷವಾಗಿ ಕಾಕಿನಾಡು ಪ್ರದೇಶಕ್ಕೆ ಸಂಚರಿಸಲು ಅನುಕೂಲವಾಗಲಿದೆ.ಈ ಭಾಗದ ಪ್ರವಾಸೋದ್ಯಮ, ವ್ಯಾಪಾರ, ಕೈಗಾರಿಕೆ, ಶಿಕ್ಷಣ, ಉದ್ಯೋಗ ಹಾಗೂ ಕೈಗಾರಿಕಾ ಕ್ಷೇತ್ರಗಳಿಗೂ ಪ್ರೋತ್ಸಾಹ ಸಿಗಲಿದೆ. ಪ್ರಯಾಣಿಕರು ಮತ್ತು ವ್ಯಾಪಾರ ವಲಯದ ಹಿತದೃಷ್ಟಿಯಿಂದ ಈ ಮನವಿಯನ್ನು ಪರಿಗಣಿಸಿ, ರೈಲ್ವೆ ಸಚಿವಾಲಯದ ಮೇಲೆ ಒತ್ತಡ ಹೇರುವ ಮೂಲಕ ರೈಲ್ವೆ ಮಾರ್ಗವನ್ನು ವಿಸ್ತರಣೆ ಮಾಡಸಬೇಕು  ಎಂದು ಮನವಿ ಮಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್