LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ


ರಾಮದುರ್ಗ: ರಾಮದುರ್ಗ ತಾಲೂಕನ್ನು ಸಂಪೂರ್ಣ ಬರಗಾಲ ಪೀಡಿತ ಎಂದು ಘೋಷಿಸುವುದು ಹಾಗೂ ರೈತರ ವಿವಿಧ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದಿಂದ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರಿಗೆ ಮನವಿ ಸಲ್ಲಿಸಿದರು.
ರಾಮದುರ್ಗ ತಾಲೂಕಿನಲ್ಲಿ ಮಳೆ ಕೊರತೆಯಿಂದಾಗಿ ರೈತರು ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಸಮರ್ಪಕವಾಗಿ ಮಳೆಯಾಗದೆ ಕೃಷಿ ಚಟುವಟಿಕೆಗಳು ಹದಗೆಟ್ಟಿದ್ದು, ರೈತರು ಬೆಳೆದ ಬೆಳೆಗಳು ಒಣಗುತ್ತಿವೆ. ಕೃಷಿಗಾಗಿ ಮಾಡಿದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ರೈತರ ಹಿತದೃಷ್ಟಿಯಿಂದ ತಾವು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಮದುರ್ಗ ತಾಲೂಕನ್ನು ಸಂಪೂರ್ಣ ಬರಗಾಲ ಪೀಡಿತ ತಾಲೂಕು ಎಂದು ಘೋಷಿಸಬೇಕು, ರೈತರಿಗೆ ತಕ್ಷಣ ಬೆಳೆ ಪರಿಹಾರ ಒದಗಿಸಬೇಕು. ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರದ ನಿಯಮಾನುಸಾರ ಬೆಳೆ ನಷ್ಟದ ಸಮೀಕ್ಷೆ ನಡೆಸಿ, ಅರ್ಹ ರೈತರಿಗೆ ತಕ್ಷಣ ಬೆಳೆ ಪರಿಹಾರವನ್ನು ಮಂಜೂರು ಮಾಡಿ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಬೆಳೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ನೆನೆಗುದಿಗೆ ಬಿದ್ದಿರುವ ವೀರಭದ್ರೇಶ್ವರ ಹಾಗೂ ಸಾಲಾಪುರ ಬಸವೇಶ್ವರ ಏತ ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಿ ನೀರು ಹರಿಸಬೇಕು. ರಾಷ್ಟ್ರೀಕೃತ ಬ್ಯಾಂಕುಗಳಿಂದ ರೈತರಿಗೆ ಸಾಲ ವಸೂಲಾತಿ ನೋಟಿಸ್ ನೀಡುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ರಾಮದುರ್ಗ ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಮಳೆ ಮಾಪನ ಕೇಂದ್ರವನ್ನು ಸ್ಥಾಪಿಸಬೇಕು. ಇದರಿಂದ ಗ್ರಾಮವಾರು ಮಳೆಯ ಪ್ರಮಾಣವನ್ನು ನಿಖರವಾಗಿ ದಾಖಲಿಸಲು, ಮಳೆ ಕೊರತೆಯ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಅಂದಾಜಿಸಲು ಹಾಗೂ ಬರಗಾಲ ಘೋಷಣೆ ಮತ್ತು ಬೆಳೆ ಪರಿಹಾರ ನಿರ್ಧಾರಗಳಿಗೆ ಅಗತ್ಯವಾದ ನಿಖರ ಮಾಹಿತಿಯನ್ನು ಸಂಗ್ರಹಿಸಲು ಅನುಕೂಲವಾಗುತ್ತದೆ. ಮುಖ್ಯವಾಗಿ ರಾಮದುರ್ಗ ತಾಲೂಕಿನ ರೈತರು ಮಳೆ ಕೊರತೆ, ಬೆಳೆ ಹಾನಿ, ನೀರಾವರಿ ಸೌಲಭ್ಯದ ಅಭಾವ ಹಾಗೂ ಕೃಷಿ ಸಾಲದ ಹೊರೆಗಳಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ರೈತರ ಬದುಕು ಮತ್ತು ಕೃಷಿಯನ್ನು ಉಳಿಸುವುದು ಇಂದಿನ ತುರ್ತು ಅಗತ್ಯವಾಗಿದ್ದು, ಕಡಲೇ ಈ ಬೇಡಿಕೆಗಳನ್ನು ಈಡೆರಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮದುರ್ಗ, ತಾಲೂಕಾಧ್ಯಕ್ಷ ಸುರೇಶ ಗುಂಜೇರಿ, ವಿವಿಧ ಪದಾಧಿಕಾರಿಗಳಾದ ಈರಣ್ಣ ರಾಜನಾಳ, ಕೃಷ್ಣಗೌಡ ಪಾಟೀಲ, ಮಹಾದೇವ ತ್ಯಾವಟಗಿ, ಬಸು ಯಾದವಾಡ, ಯಲ್ಲಪ್ಪ ದೊಡಮನಿ, ಭೀಮಶಿ ಕಡ್ಡೆನ್ನವರ, ದ್ಯಾಮಣ್ಣ ಪೋತೆನ್ನವರ, ಹನಮಂತಗೌಡ ಪಾಟೀಲ, ಬಸು ನಂದೆಪ್ಪನವರ, ನಿಂಗಪ್ಪ ಜೋಗಿ,  ನಿಂಗಪ್ಪ ಮಾಯನ್ನವರ ಸೇರಿದಂತೆ ಇತರರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ