Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುರುಗೋಡು: ವಿವಿಧೆಡೆ ದಾಳಿ-ಮೂವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ

ಕುರುಗೋಡು: ವಿವಿಧೆಡೆ ದಾಳಿ-ಮೂವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ
ಬಳ್ಳಾರಿ,ಫೆ.04- ಕಾರ್ಮಿಕ ಇಲಾಖೆ ಹಾಗೂ ಇತರೆ ಸಹಭಾಗೀದಾರರ ಇಲಾಖೆಯ ಸಹಯೋಗದಲ್ಲಿ ಕುರುಗೋಡು ಪಟ್ಟಣದ ವಿವಿಧೆಡೆ ದಾಳಿ ನಡೆಸಿ ಮೂವರು ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಹಾಗೂ ಪ್ಯಾನ್-ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ ಅಂಗವಾಗಿ ಗ್ರೇಡ್-2 ತಹಶೀಲ್ದಾರ ಮಲ್ಲೇಶಪ್ಪ ಅಧ್ಯಕ್ಷತೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಈ ದಾಳಿ ಕೈಗೊಳ್ಳಲಾಯಿತು.
ಕುರುಗೋಡು ಪಟ್ಟಣದ ಗೆಣಿಕೆಹಾಳ್ ರಸ್ತೆ, ತೇರು ಬೀದಿ, ಹಳೇ ಎಸ್.ಬಿ.ಎಂ. ರಸ್ತೆ ಹತ್ತಿರದ ವಿವಿಧ ಸ್ಥಳಗಳಲ್ಲಿರುವ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಟಾಸ್ಕ್ ಪೋರ್ಸ್ ಸಮಿತಿ ಮುಖಾಂತರ ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳು ಕೆಲಸ ಮಾಡುತ್ತಿರುವುದನ್ನು ಗಮನಿಸಲಾಯಿತು. ತಕ್ಷಣ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ 03 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ವಶಕ್ಕೆ ಪಡೆದುಕೊಂಡು ಮಕ್ಕಳ ಹೇಳಿಕೆಗಳನ್ನು ಸ್ಥಳದಲ್ಲಿಯೇ ಪಡೆದುಕೊಂಡು ಅವರನ್ನು ಮುಖ್ಯವಾಹಿನಿಗೆ ತರಲು ಶಿಕ್ಷಣ ಇಲಾಖೆಗೆ ಒಪ್ಪಿಸಲಾಗಿದೆ.
ಇದೇ ಸಂದರ್ಭದಲ್ಲಿ ಎಲ್ಲಾ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ನೀಡಿ ಜಾಗೃತಿ ಮೂಡಿಸಲಾಯಿತು.
ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಕುರುಗೋಡು ತಾಪಂ ಕಚೇರಿಯ ಶಿವರಣ ರೆಡ್ಡಿ, ಪುರಸಭೆಯ ಆರೋಗ್ಯಾಧಿಕಾರಿ ಆದಿಕೇಶವ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಜಡೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮೇಲ್ವಿಚಾರಕಿ ಮಂಜುಳ, ಆರೋಗ್ಯ ಇಲಾಖೆಯ ಗೋವಿಂದಪ್ಪ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಲಹೆಗಾರ ಪ್ರಶಾಂತ್ ಕುಮಾರ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರವಿಕುಮಾರ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ಕಾರ್ತಿಕ್ ಮತ್ತು ರೀಚ್ ಸಂಸ್ಥೆಯ ಸಂಯೋಜಿಕಿ ಬಸಮ್ಮ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ