LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ!

ಬೆಂಗಳೂರು, ಜುಲೈ 17: ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಮಸೂದೆಯು ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದಾರೆ. ‘ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಉದ್ಯಮ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024’ ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ.

ಯಾವುದೇ ಉದ್ಯಮ, ಕಾರ್ಖಾನೆ ಅಥವಾ ಇತರ ಸಂಸ್ಥೆಗಳು ನಿರ್ವಹಣಾ ವಿಭಾಗಗಳಲ್ಲಿ (ಮ್ಯಾನೇಜ್​ಮೆಂಟ್) ಸ್ಥಳೀಯ ಅಭ್ಯರ್ಥಿಗಳಿಗೆ ಶೇ 50 ರಷ್ಟು ಮೀಸಲಾತಿ ನೀಡಬೇಕು. ನಿರ್ವಹಣೆಯೇತರ (ನಾನ್ ಮ್ಯಾನೇಜ್​ಮೆಂಟ್) ವಿಭಾಗಗಳಲ್ಲಿ ಶೇ 75ರಷ್ಟು ಮೀಸಲಾತಿ ನೀಡಬೇಕು.

ಕರ್ನಾಟಕದಲ್ಲಿ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷಗಳಿಂದ ವಾಸಿಸುತ್ತಿರುವವರು, ಕನ್ನಡ ಭಾಷೆಯಲ್ಲಿ ಮಾತಾಡಲು, ಓದಲು ಹಾಗೂ ಬರೆಯಲು ಬರುವವರು ಮೀಸಲಾತಿಗೆ ಅರ್ಹರು. ಅಭ್ಯರ್ಥಿಗಳು ಕನ್ನಡವನ್ನು ಒಂದು ಭಾಷೆಯಾಗಿ ಹೊಂದಿರುವ ಮಾಧ್ಯಮಿಕ ಶಾಲಾ ಪ್ರಮಾಣಪತ್ರವನ್ನು ಹೊಂದಿಲ್ಲದಿದ್ದರೆ, ಅವರು ‘ನೋಡಲ್ ಏಜೆನ್ಸಿ’ ನಿರ್ದಿಷ್ಟಪಡಿಸಿದ ಕನ್ನಡ ಪ್ರಾವೀಣ್ಯತೆಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆ