LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ನಿವೃತ್ತ ಡಿಎಸ್​ಪಿ ಬರ್ಜಿಂದರ್ ಸಿಂಗ್ ಭುಲ್ಲರ್ ಆತ್ಮಹತ್ಯೆ!

ಲೂಧಿಯಾನ : ನಿವೃತ್ತ ಡಿಎಸ್​ಪಿ ಬರ್ಜಿಂದರ್ ಸಿಂಗ್ ಭುಲ್ಲರ್ ಅವರು ಲೂಧಿಯಾನದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ.


ನಿವೃತ್ತ ಡಿಎಸ್​ಪಿ ಆತ್ಮಹತ್ಯೆ: ಡಿಎಸ್ಪಿ ಬರ್ಜಿಂದರ್ ಸಿಂಗ್ ಭುಲ್ಲಾರ್ ಒಂದು ವರ್ಷದ ಹಿಂದೆ ನಿವೃತ್ತರಾಗಿದ್ದಾರೆ ಮತ್ತು ಮಾನಸಿಕ ಅಸ್ವಸ್ಥವಾಗಿದ್ದರು ಎಂದು ಹೇಳಲಾಗಿದೆ. ಮಾಜಿ ಡಿಎಸ್ಪಿ ಅವರು ತಮ್ಮ ಪೋಷಕರೊಂದಿಗೆ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಅವರ ಪತ್ನಿ ಮತ್ತು ಮಕ್ಕಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಸರಭನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ನೋಡಿದಾಗ ಡಿಎಸ್ಪಿ ಕೊಠಡಿಯಲ್ಲಿದ್ದ ಕುರ್ಚಿಯ ಮೇಲೆ ಶವವಾಗಿ ಪತ್ತೆಯಾಗಿದ್ದರು. ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಗೆ ರವಾನಿಸಿದ್ದಾರೆ.


ವಿದೇಶದಲ್ಲಿ ಪತ್ನಿ, ಮಕ್ಕಳು: ಈ ಬಗ್ಗೆ ಬಂದಿರುವ ಮಾಹಿತಿ ಪ್ರಕಾರ ಬರ್ಜಿಂದರ್ ಸಿಂಗ್ ಭುಲ್ಲಾರ್ ಅವರು ಸುಮಾರು 1 ವರ್ಷದ ಹಿಂದೆ ನಿವೃತ್ತರಾಗಿದ್ದರು. ಅವರು ನಿವೃತ್ತರಾದಾಗ, ಅವರ ಕೊನೆಯ ಪೋಸ್ಟಿಂಗ್ IRB ಅಲ್ಲಿ ಆಗಿತ್ತು. ಮೃತ ಡಿಎಸ್​ಪಿ ಸರಭನಗರ ಪ್ರದೇಶದ ಗ್ರೀನ್ ಅವೆನ್ಯೂದಲ್ಲಿ ತನ್ನ ಹೆತ್ತವರೊಂದಿಗೆ ವಾಸಿಸುತ್ತಿದ್ದರೆ, ಅವರ ಪತ್ನಿ ತಮ್ಮ ಮಕ್ಕಳೊಂದಿಗೆ ವಿದೇಶದಲ್ಲಿ ನೆಲೆಸಿದ್ದಾರೆ.


ಮಾನಸಿಕವಾಗಿ ನೊಂದಿದ್ದ ಡಿಎಸ್‌ಪಿ: ಬರ್ಜಿಂದರ್ ಸಿಂಗ್ ಕೆಲಕಾಲ ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ. ಆಗಾಗ ಮನೆಯಲ್ಲಿ ಒಬ್ಬರೇ ಕೋಣೆಯಲ್ಲಿ ಕೂರುತ್ತಿದ್ದರು. ನಿನ್ನೆ, ಕೋಣೆಯಲ್ಲಿ ಕುರ್ಚಿಯ ಮೇಲೆ ಕುಳಿತಾಗ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಗುಂಡಿನ ಸದ್ದು ಕೇಳಿದ ಪೋಷಕರು ಕೊಠಡಿಯನ್ನು ತಲುಪಿದಾಗ ಬರ್ಜಿಂದರ್ ಅವರ ದೇಹವು ಅವರ ಮುಂದೆ ಬಿದ್ದಿದ್ದು, ಈ ವೇಳೆ ಸ್ಥಳದಲ್ಲಿ ಪಿಸ್ತೂಲ್​ ಸಹ ಪತ್ತೆಯಾಗಿದೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್