LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜೈಲಿನಿಂದ ಬಿಡುಗಡೆಯಾದ ರೇವಣ್ಣ ನಾಳೆ ಹೊಳೆನರಸೀಪುರಕ್ಕೆ: ಭರ್ಜರಿ ಸ್ವಾಗತಕ್ಕೆ ಸಿದ್ಧತೆ

ಹಾಸನ, ಮೇ.14: ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರದು ಎನ್ನಲಾದ ವಿಡಿಯೋಕ್ಕೆ ಸಂಬಂಧಿಸಿದ ಸಂತ್ರಸ್ಥೆ ಮಹಿಳೆಯನ್ನು ಅಪಹರಿಸಿದ್ದ ಆರೋಪದ ಮೇಲೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಜೈಲು ಸೇರಿದ್ದರು. ಇಂದು(ಮೇ.14) ಜೈಲಿನಿಂದ ಬಿಡುಗಡೆಯಾಗಿದ್ದು, ಜೆಡಿಎಸ್​ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಇದರ ಬೆನ್ನಲ್ಲೇ ನಾಳೆ (ಮೇ.15) ರೇವಣ್ಣ ಅವರು ಸ್ವಕ್ಷೇತ್ರ ಹೊಳೆನರಸೀಪುರಕ್ಕೆ ತೆರಳುವ ಸಾಧ್ಯತೆಯಿದ್ದು, ರೇವಣ್ಣ ಸ್ವಾಗತಕ್ಕೆ ಜೆಡಿಎಸ್​ ಕಾರ್ಯಕರ್ತರು ಸಿದ್ಧತೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಗಡಿಯಲ್ಲೇ ಸ್ವಾಗತಕೋರುವುದಕ್ಕೆ ಭರ್ಜರಿ ತಯಾರಿ ನಡೆಸಿದ್ದಾರೆ.

ಇನ್ನು ರೇವಣ್ಣ ಜೈಲಿನಿಂದ ಬಿಡುಗಡೆ ಹಿನ್ನಲೆ ಮಂಕಾಗಿದ್ದ ದಳ ಕೋಟೆಯಲ್ಲಿ ಉತ್ಸಾಹ ಹೆಚ್ಚಿದೆ. ತಮ್ಮ ನಾಯಕನ ಸ್ಚಾಗತಕ್ಕೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸಜ್ಜಾಗಿದ್ದಾರೆ. ಜೊತೆಗೆ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಹೊಸ ಹುಮ್ಮಸ್ಸು ಮೂಡಿದೆ. ಇಂದು ಬಿಡುಗಡೆಯಾಗಿ ಬೆಂಗಳೂರಿನ ಮನೆಗೆ ತೆರಳಿರುವ ರೇವಣ್ಣ ಅವರು, ನಾಳೆ(ಮೇ.15) ಹೊಳೆನರಸೀಪುರದ ಮನೆಗೆ ಆಗಮಿಸಿ, ಬಳಿಕ ಆರಾಧ್ಯ ದೇವಾಲಯಗಳಾದ ಹೊಳೆನರಸೀಪುರದ ಲಕ್ಷ್ಮಿ‌ನರಸಿಂಹ, ದೇವೇಗೌಡರ ಹುಟ್ಟೂರು ಹರದನಹಳ್ಳಿಯಲ್ಲಿ‌ರುವ ಮನೆ ದೇವರು ದೇವೇಶ್ವರ, ಮಾವಿನಕೆರೆಯ ಬೆಟ್ಟದ ರಂಗನಾಥನಿಗೆ ಪೂಜೆ ಸಲ್ಲಿಸುವ ಸಾಧ್ಯತೆಯಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ