Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್‌ಎಸ್‌ಎಸ್ ಬಿಜೆಪಿಯ ಅಂಗ : ಎಸ್.ಜಿ.ನಂಜಯ್ಯನಮಠ


ಜಮಖಂಡಿ: ಆರ್‌ಎಸ್‌ಎಸ್ ಬಿಜೆಪಿಯ ಒಂದು ಅಂಗ ಎಂಬುದು ಇಡಿ ಜಗತ್ತಿಗೆ ಗೊತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದರು.

ನಗರದ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರ ನಿವಾಸದ ಆವರಣದಲ್ಲಿ ಮತ ಕಳ್ಳತನ ನಿಲ್ಲಿಸಿ, ಜನಾದೇಶ ಕಗ್ಗೋಲೆ ನಿಲ್ಲಿಸಿ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಸಹಿ ಮಾಡುವದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಸುದ್ದಿಗಾರರ ಜೋತೆ ಮಾತನಾಡಿದರು.

ಆರ್‌ಎಸ್‌ಎಸ್ ಸೂಚನೆ, ಭಾಗವತರ ಸೂಚನೆಯನ್ನೆ ಬಿಜೆಪಿ ಪರಿಪಾಲನೆ ಮಾಡಿಕೊಳ್ಳುತ್ತಾ ಬರುತ್ತಿದೆ, ಬಿಜೆಪಿಯವರು ಜಾತ್ಯಾತಿತ ನಿಲುವನ್ನು ತೆಗೆದುಕೊಂಡರೆ ಆರ್‌ಎಸ್‌ಎಸ್‌ನವರಿಗೆ ಆಗಿಬರಲ್ಲ, ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರ ವಿರುದ್ದವೂ ಅಸಮಾಧಾನ ಗೊಂಡಿದ್ದರು ಎಂದರು.

ಭೀಮ ಸಂಚಲನ, ಬಸವ ಸಂಚಲನ ಮಾಡುವ ಹಕ್ಕು ಎಲ್ಲರಿಗೂ ಇದೆ ಎಂದರು.

ಮಾಜಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ಸಚಿವ ಪ್ರಿಯಾಂಕ ಖರ್ಗೆ ಅವರು ಕೇಳಿದ ಪ್ರಶ್ನೆಗಳಿಗೆ ಆರ್‌ಎಸ್‌ಎಸ್‌ನವರು ಯಾಕೆ ಉತ್ತರಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರ ಹೊರಡಿಸಿದ ಪೂರ್ವಾನುಮತಿ ಪಡೆಯಬೇಕೆಂಬ ಆದೇಶವನ್ನೆ ನಮ್ಮ ಸರ್ಕಾರ ಜಾರಿಗೆ ತಂದಿದೆ, ಸರ್ಕಾರಿ ಜಾಗೆ ಬಳಕೆಗೆ ಎಲ್ಲರಿಗೂ ಅನ್ವಯವಾಗುವಂತೆ ಮಾಡಿದ್ದಾರೆ ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಇದ್ದರೂ ಪರವಾಣಿಗೆ ಪಡೆದುಕೊಳ್ಳಬೇಕು ಆರ್‌ಎಸ್‌ಎಸ್‌ಗೆ ಅಷ್ಟೆ ಈ ಆದೇಶವಾಗಿಲ್ಲ ಎಂದರು.

ಈ ಸಂದರ್ಭದಲ್ಲಿ ಮಜ್ದುರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೌಫಿಕ ಪಾರ್ಥನಳ್ಳಿ, ನಗರಸಭೆ ಅಧ್ಯಕ್ಷ ಈಶ್ವರ ವಾಳೆನ್ನವರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಮಹಾದೇವ ಪಾಟೀಲ, ಮಹೇಶ ಕೋಳಿ, ರವಿ ಯಡಹಳ್ಳಿ ಇತರರು ಇದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*