Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರುದ್ರಣ್ಣ ಸಾವಿನ ಪ್ರಕರಣ; ನಿಷ್ಪಕ್ಷಪಾತವಾಗಿ ತನಿಖೆ ಆಗಲಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ :  ಬೆಳಗಾವಿಯ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ  ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರುದ್ರಣ್ಣ ಯಡವಣ್ಣವರ ಸಾವಿನ ವಿಷಯ ಅತ್ಯಂತ ದುಃಖ ತರುವಂತಹದು. ಇದೊಂದು ದುರದೃಷ್ಟಕರ ಘಟನೆ. ಇಂತಹ ಘಟನೆಗಳು ನಡೆಯಬಾರದು. ರುದ್ರಣ್ಣವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅವರು ಹೇಳಿದರು.


ರುದ್ರಣ್ಣ ಸಾವಿನ ಘಟನೆ ಬಗ್ಗೆ ಮಾಧ್ಯಮಗಳಿಂದ ನಾನು ತಿಳಿದಿದ್ದೇನೆ. ಈ ಬಗ್ಗೆ ನನಗೂ ಹೆಚ್ಚೇನು ಮಾಹಿತಿ ಇಲ್ಲ. ಈ ಸಾವಿನ ಹಿಂದೆ ಲಕ್ಷ್ಮೀ ಹೆಬ್ಬಾಳಕರ್ ಪಾತ್ರವಿಲ್ಲವೆಂದು ಅವರೇ ಹೇಳಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಏನೂ ಗೊತ್ತಿಲ್ಲ ಎಂದಿರುವ ವಿಡೀಯೋವನ್ನು ಮಾಧ್ಯಮಗಳ ಮೂಲಕ ಗಮನಿಸಿದ್ದೇನೆ. ಈ ಬಗ್ಗೆ ಸತ್ಯಾಸತ್ಯತೆ ಜನರಿಗೆ ತಿಳಿಯಬೇಕು. ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು.


ರುದ್ರಣ್ಣವರ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರಿಗೆ ಪ್ರತಿಭಟನೆ ಮಾಡಬೇಡಿ ಎಂದು ಹೇಳಲು ಆಗುವುದಿಲ್ಲ. ಆದರೆ ಈ ವಿಷಯವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಬಾರದು. ಸ್ವತಹ ರುದ್ರಣ್ಣನವರೇ ಹೇಳಿದ್ದಾರೆ ಈ ಬಗ್ಗೆ ಮೇಡಂ ಅವರ ಪಾತ್ರವಿಲ್ಲವೆಂದು. ಆದರೂ ವ್ಯರ್ಥ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು


ಈ ಹಿಂದಿನ ಈಶ್ವರಪ್ಪನವರ ಪ್ರಕರಣಕ್ಕೂ ಮತ್ತು ಈ ಪ್ರಕರಣಕ್ಕೂ ಬಹಳ ವ್ಯತ್ಯಾಸವಿದೆ. ಈ ಸಾವಿನ  ಪ್ರಕರಣ ಆದಷ್ಟು ಬೇಗ ತನಿಖೆಯಾಗಲಿ. ನಿಷ್ಪಕ್ಷಪಾತವಾದ ತನಿಖೆ ಆಗಬೇಕೆಂದು ಪೊಲೀಸ್ ತನಿಖಾಧಿಕಾರಿಗಳಿಗೂ ಮನವಿ ಮಾಡುತ್ತೇನೆ. ಸಾವಿಗೀಡಾದ ನೌಕರನ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂದು ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ