Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನ ಮನ ಸೂರೆಗೊಂಡ ನೇತ್ರ ಕಲಾ ಸಂಘದ  ಗ್ರಾಮೀಣ ಕಲೋತ್ಸವ 2026 

ಬಳ್ಳಾರಿ. ಮೇ. 22: (ಸಿರುಗುಪ್ಪ ) ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ನಾಡಿನ ಸಾಂಸ್ಕೃತಿಕ ಸಾಹಿತ್ಯಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಕಲಾಸಂಘ ಸಂಸ್ಥೆಗಳಿಗೆ ಕಾರ್ಯಕ್ರಮಗಳನ್ನು ಸಂಘಟಿಸಲು ಮತ್ತು ಅಸಂಘಟಿತ ಕಲಾವಿದರಿಗೂ  ಪ್ರತಿವರ್ಷವು ಧನ ಸಹಾಯ ನೀಡುತ್ತಿದ್ದು ಇದರಿಂದ ಗ್ರಾಮೀಣ ಭಾಗದ ಅಳಿವಿನಂಚಿನಲ್ಲಿರುವ ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ  ಧನ ಸಹಾಯ ನೀಡುವ ಮೂಲಕ  ಪ್ರೋತ್ಸಾಹಿಸುತ್ತಿದೆ ಸರ್ಕಾರದ ಈ ಯೋಜನೆಯನ್ನು ಕಲಾವಿದರು ಸದುಪಯೋಗಪಡಿಸಿಕೊಳ್ಳಬೇಕೆಂದು  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ ನಾಗರಾಜ್   ಹೇಳಿದರು. 
ಅವರು ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶಾನವಾಸಪುರ  ಗ್ರಾಮದ ಬಯಲು ರಂಗ ಮಂದಿರ ವೇದಿಕೆಯಲ್ಲಿ ಮಂಗಳವಾರ ಸಂಜೆ  ಗ್ರಾಮೀಣ ಕಲೋತ್ಸವ 2026  ಕಾರ್ಯಕ್ರಮವನ್ನು ನೇತ್ರ ಕಲಾ ಸಂಘ ಸಿರುಗುಪ್ಪ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ವಿಶೇಷ ಘಟಕ ಯೋಜನೆ ಅಡಿಯಲ್ಲಿ ಆಯೋಜಿಸಲಾದ  ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿ, ಸಿರುಗುಪ್ಪ ತಾಲೂಕಿನ  ನೇತ್ರಕಲಾ ಸಂಘವು 15 ವರ್ಷಗಳಿಂದ ನಿರಂತರ ಸಾಂಸ್ಕೃತಿಕ ಸಾಹಿತ್ಯಕ ಸಾಮಾಜಿಕ ಸೇವೆ ಜೊತೆಗೆ ಬೀದಿ ನಾಟಕ,ಆರೋಗ್ಯ ಜಾಗೃತಿ, ಬಾಲ್ಯ ವಿವಾಹ, ಅಸ್ಪೃಶ್ಯತೆ ಯಂತಹ ಜಾಗೃತಿ ಕಾರ್ಯಕ್ರಮಗಳನ್ನು ಇಂದಿಗೂ ನಡೆಸಿಕೊಂಡು ಬರುತ್ತಿರುವುದು ವಿಶೇಷವಾಗಿದೆ ಎಂದು ಹೇಳಿದರು.
ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು  ಹಾಗೂ ಶಾನವಾಸಪುರ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳಾದ ಮಲ್ಲಿಕಾರ್ಜುನ ಅವರು ಅಧ್ಯಕ್ಷತೆ ವಹಿಸಿದರು.  ಗ್ರಾಮೀಣ ಪ್ರದೇಶದಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾಂಸ್ಕೃತಿಕ ಜಾಗೃತಿ ಮೂಡಿಸುವ ಜೊತೆಗೆ ಯುವಕರಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಅನಾವರಣಗೊಳಿಸಲು ಇಂತಹ ಕಾರ್ಯಕ್ರಮಗಳು ಅವಶ್ಯಕತೆ ಇದೆ,ಹಳ್ಳಿಗಳಲ್ಲಿ ಜನಪದ ಕಲೆ  ನಶಿಸುತ್ತಿರುವ ಸಮಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಘ-ಸಂಸ್ಥೆಗಳು ಜೊತೆಗೂಡಿ ಕಲೆಗಳನ್ನು ಉಳಿಸುವ ಬೆಳೆಸುವ  ಕೆಲಸ ನಡೆಯುತ್ತಿರುವುದು ಅತ್ಯಂತ ಶ್ಲಾಘನೀಯ ಸಂಗತಿ ಎಂದರೆ ತಪ್ಪಾಗಲಾರದು ಅದರಂತೆ ಸಾರ್ವಜನಿಕರಾದ ನಾವು  ಪ್ರತಿಯೊಬ್ಬರೂ ಜನಪದ ಕಲೆಗಳನ್ನು ಉಳಿಸುವ ಮೂಲಕ ಇಂದಿನ ಯುವ ಪೀಳಿಗೆಯವರು ಕೂಡ ಕ್ರೀಡೆ,ಶಿಕ್ಷಣ, ಕೃಷಿ, ಆಧ್ಯಾತ್ಮ, ಜನಪದ ಮತ್ತು ಸಾಮಾಜಿಕ ಅಂಶಗಳನ್ನು ಮೈಗೂಡಿಸಿಕೊಂಡು ಗ್ರಾಮೀಣ ಭಾಗದ ಸೊಗಡನ್ನು ಜನಪದ ಕಲೆಯಿಂದಲೇ  ಪರಿಚಯಿಸಿದಾಗ ಜನಪದ ಕಲೆ ಉಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
 ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿಗಳ ಅಧಿಕಾರಿಗಳಾದ ಶ್ರೀ ವೀರೇಶ್ ಮತ್ತುಮತ್ತು ಊರಿನ ಹಿರಿಯ ಮುಖಂಡರಾದ ಎಂ. ಈರಪ್ಪ ವೈ. ನಾಗರಾಜ, ಸೋಮಪ್ಪ, ರಾಮಪ್ಪ, ಅಕ್ಬರ್ ಸಾಬ್, ತಿಪ್ಪೇರುದ್ರಗೌಡ, ಅಯ್ಯಪ್ಪ, ಬೈಲೂರು ನಾಗರಾಜ, ಬೈಲಾಟ ಅಕಾಡೆಮಿ ಮಾಜಿ ಸದಸ್ಯ ಹೆಚ್ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಡಿ. ಮಹದೇವಿ  ಸಿರುಗುಪ್ಪ ತಂಡದಿಂದ ಸುಗಮ ಸಂಗೀತ,  ಮುತ್ತಣ್ಣ ಕುಡುದ್ರಾಳ್ ತಂಡದಿಂದ  ಜನಪದ ಸಂಗೀತ, ದೊಡ್ಡ ಹುಸೇನಪ್ಪ ಅರಳಿಗನೂರು ತಂಡದಿಂದ ವಚನ ಸಂಗೀತ, ಹರಿಕೃಷ್ಣ ಸಂಗನಕಲ್ಲು ತಂಡದವರಿಂದ ಡೊಳ್ಳು ಕುಣಿತ, ದಾಸರ ಶಕ್ಷವಲಿ ಜಾಲಿಬೆಂಚಿ ತಂಡದವರಿಂದ ತತ್ವಪದ ಗಾಯನ ಹಾಗೂ ಸುಮಿತ್ರ ಮಾನ್ವಿ ತಂಡದವರಿಂದ ಪೌರಾಣಿಕ ನಗೆ ನಾಟಕ ಶ್ರೀಕೃಷ್ಣ ಸಂಧಾನ ಎಂಬ ನಾಟಕವು ನೆರೆದಿದ್ದ ಸಾವಿರಾರು ಜನರನ್ನು ನಗೆಯಲಿ ತೇಲಿಸುತ್ತಾ ವೇದಿಕೆಯ ಸಾಂಸ್ಕೃತಿಕ ಸಂಗೀತ ಕಾರ್ಯಕ್ರಮಗಳು ಎಲ್ಲರನ್ನು ಮನರಂಜಿಸಿದರೆ ಮರಿಯಮ್ಮನಹಳ್ಳಿಯ ಜನಪದ ಕಲಾವಿದ ಹನುಮಯ್ಯ ಕಂಠದಲ್ಲಿ ಕೇಳಿ ಬಂದ  ಮಹರ್ಷಿ ವಾಲ್ಮೀಕಿ ಗೀತೆ ಜನರನ್ನು ಕುಣಿದು ಕುಪ್ಪಳಿಸುವಂತೆ ಮಾಡಿದ್ದು ವಿಶೇಷವಾಗಿತ್ತು. ಕಾರ್ಯಕ್ರಮದ ನಿರ್ವಹಣೆ ಮತ್ತು ನಿರೂಪಣೆಯನ್ನು ಶ್ರೀ ವೀರೇಶ ದಳವಾಯಿ ಕಾರ್ಯದರ್ಶಿ ನೇತ್ರಕಲಾ ಸಂಘ ಇವರು ನಿರ್ವಹಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ