ಬಳ್ಳಾರಿ, ಜು. 16: ದೇಶದಲ್ಲಿ ಚುನಾವಣಾ ಆಯೋಗ ಹಮ್ಮಿಕೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಮತದಾರರ ನಿಖರತೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಅತ್ಯಂತ ಮಹತ್ವದ್ದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದ ಭಾರತೀಯ ಜನತಾ ಪಕ್ಷದ ಜಿಲ್ಲಾ ಪ್ರಧಾನ ಕಚೇರಿಯಲ್ಲಿ ಬುಧವಾರ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಎಸ್‌ಐಆರ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಅರ್ಹ ಪ್ರತಿಯೊಬ್ಬ ಮತದಾರರ ಹೆಸರನ್ನು ಪಟ್ಟಿಯಲ್ಲಿ ಸೇರಿಸುವ ನಿಟ್ಟಿನಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಮಹತ್ವವನ್ನು ವಿವರಿಸಿದ ಅವರು, ಕಾರ್ಯಕರ್ತರಿಗೆ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ, ಬಿಜೆಪಿ ಮುಖಂಡೆ ಗಾಲಿ ಲಕ್ಷ್ಮೀ ಅರುಣಾ, ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯರಾದ ಸುಶೀಲ್ ಕುಮಾರ್ ಹಾಗೂ ವೈ.ಎಂ. ಸತೀಶ್, ಮಾಜಿ ಸಂಸದ ಸಣ್ಣ ಪಕ್ಕೀರಪ್ಪ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಡಚಿ ರಾಜೀವ್, ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಟಿ.ಎಚ್. ಸುರೇಶ್ ಬಾಬು, ಎಂ.ಎಸ್. ಸೋಮಲಿಂಗಪ್ಪ, ಬಿಜೆಪಿ ಜಿಲ್ಲಾಾಧ್ಯಕ್ಷ ಅನಿಲ್ ಕುಮಾರ್ ನಾಯ್ಡು, ವಿಜಯನಗರ ಬಿಜೆಪಿ ಜಿಲ್ಲಾಧ್ಯಕ್ಷ ಬಸವನಗೌಡ ಪಾಟೀಲ್, ಸೇರಿದಂತೆ ಜಿಲ್ಲೆಯ ಹಾಗೂ ನಗರದ ಪದಾಧಿಕಾರಿಗಳು, ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.