ಅಥಣಿ: ಜೂನ್ 5 ರಂದು ವಿಶ್ವ ಪರಿಸರ ದಿನದ ಅಂಗವಾಗಿ, ಅಥಣಿ ಪಟ್ಟಣದ ವಿಕ್ರಮಪುರದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಮತ್ತು ಉನ್ನತೀಕರಿಸಿದ ಪ್ರೌಢಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಭಾಗವಾಗಿ ಶಾಲೆಯ ಎಸ್.ಡಿ.ಎಮ್.ಸಿ. ಅಧ್ಯಕ್ಷ ರಾಕೇಶ ಮೈಗೂರ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪರಿಸರ ಸಂರಕ್ಷಣೆಯು ಕೇವಲ ಒಂದು ದಿನದ ಆಚರಣೆಯಲ್ಲ, ಅದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ದಿನೇ ದಿನೇ ಏರುತ್ತಿರುವ ತಾಪಮಾನವನ್ನು ನಿಯಂತ್ರಿಸಲು ಮತ್ತು ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ತಮ್ಮ ಮನೆಗಳ ಮುಂದೆ ಕನಿಷ್ಠ ಒಂದು ಮರವನ್ನಾದರೂ ನೆಟ್ಟು ಪೋಷಿಸಬೇಕು" ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ, ಮುಖ್ಯೋಪಾಧ್ಯಾಯರಾದ ಡಿ ಎಸ್ ಬಸರಗಿ,ಡಿ ಎಸ್ ಗುಡದಿನ್ನಿ,ಎಸ್ ಎಸ್ ಮುಗಳಖೋಡ,
ವಿ ಎಸ್ ವಾಘಮೋಡೆ, ಡಿ ಎ ಬರಡಗಿ, ಜಿ ಏನ್ ಕುಂಬಾರ್ , ಎಫ್ಎಂ ಕೊರಬು, ಲಕ್ಷ್ಮಿ ನಿಡೋನಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು
