LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸಂಜೀವಿನಿಯ ವಿಭಿನ್ನ ಕಥೆಯ  ದೇವಸಸ್ಯ ಟೈಟಲ್ ಟೀಸರ್ ಬಿಡುಗಡೆ



     ದೇವಸಸ್ಯ ಒಂದು ವಿಶಿಷ್ಠ ಕಥಾಹಂದರವನ್ನು ಹೇಳುವ ಹಾಗೂ ಅಪರೂಪದ ಗಿಡದ ಸುತ್ತ ನಡೆಯುವ ಘಟನೆಗಳ ಗುಚ್ಛ. ಬಹುತೇಕ ಉತ್ತರ ಕನ್ನಡದವರೇ ಸೇರಿ ಮಾಡಿರುವ ಪ್ಯಾನ್ ಇಂಡಿಯಾ  ಚಿತ್ರವಿದು. ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ದೇಶಾದ್ಯಂತ ತೆರೆಗೆ ಬರುತ್ತಿದೆ.

     ಅನಂತ ಫಿಲಂಸ್ ಅಡಿಯಲ್ಲಿ ಅನಂತಕುಮಾರ್ ಹೆಗ್ಡೆ ಅವರು ನಿರ್ಮಾಣ ಮಾಡಿರೋ ಈ ಚಿತ್ರಕ್ಕೆ ಕಾರ್ತೀಕ್ ಭಟ್ ಆಕ್ಷನ್ ಕಟ್ ಹೇಳಿದ್ದಾರೆ. ನಟ ನವೀನ್ ಕೃಷ್ಣ ಅವರು ಈ ಚಿತ್ರದ 5 ಭಾಷೆಯ ಟೀಸರನ್ನು ಬಿಡುಗಡೆ ಮಾಢಿದರು.

     ವೇದಿಕೆಯಲ್ಲಿ ನಿರ್ದೇಶಕ ಕಾರ್ತೀಕ್ ಭಟ್ ಮಾತನಾಡಿ "ಈ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಮೊದಲಿಂದಲೂ ನನಗೆ ಸಿನಿಮಾ ಹುಚ್ಚು. ಬೆಂಗಳೂರಿಗೆ ಬಂದ ಮೇಲೆ ಕೆಲವು ಸಿನಿಮಾ, ಸೀರಿಯಲ್ ಗಳಿಗೆ ಬರಹಗಾರನಾಗಿ ಕೆಲಸ ಮಾಡಿದೆ. ಸಿರ್ಸಿ ಸುತ್ತಮುತ್ತಲಿನ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಸಮುದಾಯದ ಕಥೆಯಿದು. ನಿರ್ಮಾಪಕರ ಪರಿಚಯ ಆದಮೇಲೆ ಅವರಿಗೆ ಈ ಕಥೆ ಹೇಳಿದೆ. ಕಥೆಯನ್ನು ತುಂಬಾನೇ  ಇಷ್ಟಪಟ್ಟು ನಿರ್ಮಾಣ ಮಾಡುತ್ತಿದ್ದಾರೆ. ಇದು ಎರಡು ಊರುಗಳ ಮಧ್ಯೆ ನಡೆಯುವ ಕಥೆ. ಕಥೆಗಾಗೇ  ೨  ವರ್ಷ ಪೇಪರ್ ವರ್ಕ್ ರೆಡಿ ಮಾಡಿಕೊಂಡೆ. ಅಲ್ಲಿ ನಿರ್ಮಾಪಕರೂ ಜೊತೆಗಿದ್ದರು. ಸಿದ್ದಿ ಹುಡುಗನ ಪಾತ್ರವನ್ನು ಸೆಲ್ವಿನ್ ದೇಸಾಯಿ ಮಾಡಿದ್ದಾರೆ. ಮತ್ತೊಂದು ಮುಖ್ಯ ಪಾತ್ರವನ್ನು ಅಹನ ಮಾಡಿದ್ದಾರೆ.1995ರಲ್ಲಿ ನಡೆವ ಕಥೆಯಾಗಿದ್ದರಿಂದ ಅಂಥಾ ಲೊಕೇಶನ್ ಎಲ್ಲೂ ಸಿಗಲಿಲ್ಲ ಹಾಗಾಗಿ ಸೆಟ್ ಹಾಕಿಸಿದ್ದೇವೆ. ಕೆಜಿಎಫ್ ಖ್ಯಾತಿಯ  ಕರಣ್ ಅವರು ಅದ್ಭುತವಾಗಿ ಈ  ಸೆಟ್ ಹಾಕಿದ್ದಾರೆ. ಈಗಾಗಲೇ 45 ದಿನಗಳ ಶೂಟಿಂಗ್ ನಡೆದಿದೆ. ಹೊಸಬರ ತಂಡ, ತುಂಬಾ  ಆತ್ಮವಿಶ್ವಾಸದಿಂದ ಈ ಸಿನಿಮಾ ಮಾಡಿದ್ದೇವೆ. 'ದೇವಸಸ್ಯ' ಏನು ಎನ್ನುವುದೇ ಚಿತ್ರ ನೋಡಿದ ನಂತರವೇ ಗೊತ್ತಾಗುತ್ತದೆ" ಎಂದರು.

     ನಟ ಸೆಲ್ವಿನ್ "ಸಿನಿಮಾದಲ್ಲಿ  ಆಕ್ಟ್ ಮಾಡಬೇಕೆಂದೇ ನಾನು ಬೆಂಗಳೂರಿಗೆ  ಬಂದೆ. ಟ್ರ್ಯಾಕ್ಟರ್ ಓಡಿಸುತ್ತಿದ್ದೆ. ಆಗ ನಿರ್ದೇಶಕರು ಈ ಸಿನಿಮಾಗೆ ಕರೆದರು  ನಂತರವೇ ಆಕ್ಷನ್ ಎಲ್ಲಾ  ಕಲಿತೆ" ಎಂದು ವಿವರಿಸಿದರು.ಮತ್ತೊಬ್ಬ ನಟ ಅಹನಾ  "ಇದರಲ್ಲಿ ಕುರ್ಮುಷ್ಠ ಎಂಬ ಪಾತ್ರ ಮಾಡಿದ್ದೇನೆ" ಎಂದರೆ, ನಾಯಕಿ ಬಿಂಬಿಕಾ  "ಚಿತ್ರದಲ್ಲಿ ನಾನು ಮಾತಂಗಿ ಎಂಬ ಸಿದ್ದಿ ಜನಾಂಗದ ಹುಡುಗಿಯಾಗಿ ನಟಿಸಿದ್ದೇನೆ. ನಾರಾಯಣ ನಾರಾಯಣ ನಂತರ ಇದು ನನ್ನ 5ನೇ ಚಿತ್ರ" ಎಂದರು.

     ನಿರ್ಮಾಪಕ ಅನಂತಕುಮಾರ್ ಹೆಗ್ಡೆ  "ನಾನೂ ಒಬ್ಬ ಪತ್ರಕರ್ತ. ಸಿರ್ಸಿಯಲ್ಲಿ ವಿಶ್ವಂಬರ ಟಿವಿ ಚಾನೆಲ್ ನಡೆಸುತ್ತಿದ್ದೇನೆ. ನನಗೆ ಮೊದಲಿಂದಲೂ  ಸಿನಿಮಾ ಹೀರೋ ಆಗಬೇಕೆಂಬ ಆಸೆಯಿತ್ತು. ಈಗ ನಿರ್ಮಾಪಕನಾಗಿದ್ದೇನೆ".

     "ಹಿಂದೆ ನಮ್ಮದು ಬಡತನದ ಕುಟುಂಬ. ಬೆಂಗಳೂರಿಗೆ ಬಂದು ಅರ್ಚಕನಾಗಿ ಕೆಲಸ ಮಾಡ್ತಿದ್ದೆ. ಜನರಿಗೆ ಓಂದೊಳ್ಳೆ ಸಿನಿಮಾ ನೀಡಬೇಕೆಂದು ಈ ಚಿತ್ರ ಪ್ರಾರಂಭಿಸಿದೆ. ಅದ್ಭುತವಾದ, ವಿಶೇಷವಾದ  ಸಂಜೀವಿನಿ ಗಿಡವೇ 'ದೇವಸಸ್ಯ' ಅದರ ಸುತ್ತ ನಡೆವ ಕಥೆಯಿದು".

    "30 ವರ್ಷಗಳ ಹಿಂದಿದ್ದ ಊರನ್ನು ಮರುಸೃಷ್ಠಿ ಮಾಡಿದ್ದೇವೆ. ಒಂದು ಸಸ್ಯದ ಕುರಿತಂತೆ ಮಾಡಿರುವ ಕಥೆಯಾಗಿದ್ದರಿಂದ ಎಲ್ಲಾ ಭಾಷೆಗಳಿಗೂ ಅನ್ವಯವಾಗುತ್ತೆ ಅಂತ 5 ಭಾಷೆಗೂ ಡಬ್ ಮಾಡುತ್ತಿದ್ದೇವೆ" ಎಂದು ಹೇಳಿದರು.

     ರಾಜು ಎನ್.ಎಂ. ಛಾಯಾಗ್ರಹಣ ಮತ್ತು ಹರಿ ಅಜಯ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್