ಗದಗ,18 : ಜಿಲ್ಲಾ ಆಡಳಿತ ಗದಗ, ಜಿಲ್ಲಾ ಪಂಚಾಯತ್ ಗದಗ, ಉಪನಿರ್ದೇಶಕರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಗದಗ ಜಿಲ್ಲೆ ಇವರ ಸಹಯೋಗದಲ್ಲಿ ಗದಗ ಜಿಲ್ಲಾ ಮಟ್ಟದ ೨೦೨೬-೨೭ ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಜರುಗಿದ್ದು ಸ್ಟುಡೆಂಟ್ಸ್ ಎಜ್ಯುಕೇಶನ್ ಸಂಸ್ಥೆಯ ಸನ್ಮಾರ್ಗ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಫುಟ್ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ಜಯಶಾಲಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿದ್ದಕ್ಕಾಗಿ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ರಾಜೇಶ ಕುಲಕರ್ಣಿ, ಪ್ರಾಚಾರ್ಯರಾದ ಪ್ರೋ. ಪುನೀತ ದೇಶಪಾಂಡೆ ಆಡಳಿತಾಧಿಕಾರಿಗಳಾದ ಶ್ರೀ.ಎಂ.ಸಿ.ಹಿರೇಮಠ ಸಂಸ್ಥೆಯ ನಿರ್ದೇಶಕರುಗಳಾದ ಪ್ರೊ. ರೋಹಿತ್ ಒಡೆಯರ, ಪ್ರೋ. ರಾಹುಲ ಒಡೆಯರ್, ಪ್ರೋ. ಸೈಯ್ಯದ ಮತಿನ್ ಮುಲ್ಲಾ ಮಹಾವಿದ್ಯಾಲಯದ ಬೋಧಕ - ಬೋಧಕೇತರ ಸಿಬ್ಬಂದಿ ವಿಜೇತ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿ ವಿದ್ಯಾರ್ಥಿಗಳ ಕ್ರೀಡಾಸಕ್ತಿ ಇನ್ನೂ ಅಧಿಕಗೊಂಡು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸುವಂತಾಗಲಿ ಎಂದು ಆಶಿಸಿದ್ದಾರೆ.