Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತ್ರಿವೇಣಿ ಕಾದಂಬರಿ ಕಥೆಯ  ಚಿತ್ರ - 'ಸರಳ ಸುಬ್ಬರಾವ್' ಟ್ರೇಲರ್

ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಿಸಿರುವ,  ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ ಮತ್ತು 1970 ರ ಕಾಲಘಟ್ಟದ ಪ್ರೇಮ ಕಥಾನಕದ  'ಸರಳ ಸುಬ್ಬರಾವ್' ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

"ನಾನು ಹುಟ್ಟಿದ್ದು 1980ರಲ್ಲಿ. ಈ ಚಿತ್ರದ ಕಥೆ ನಡೆಯುವುದು 1970ರ ಕಾಲಘಟ್ಟದಲ್ಲಿ" ಎಂದು ಸಮಾರಂಭದಲ್ಲಿ  ಮಾತನಾಡಿದ ನಾಯಕ ಅಜೇಯ್ ರಾವ್, ಕನ್ನಡದಲ್ಲಿ ಅಪರೂಪ ಎನ್ನಬಹುದಾದ ಕಥೆಯನ್ನು  ನಿರ್ದೇಶಕ ಮಂಜು ಸ್ವರಾಜ್ ಹಾಗೂ ನಿರ್ಮಾಪಕ ಲೋಹಿತ್ ಆಯ್ಕೆ ಮಾಡಿಕೊಂಡಿದ್ದಾರೆ. ರೆಟ್ರೊ ಶೈಲಿಯಲ್ಲಿ ಕಾಣಿಸಿಕೊಂಡಿರುವುದಕ್ಕೆ ಖುಷಿಯಿದೆ. ಟ್ರೇಲರ್ ಎಲ್ಲರ ಗಮನ ಸೆಳೆದಿದೆ.  ಪ್ರೇಮಿಗಳ ದಿನದ ಸಂದರ್ಭದಲ್ಲಿ ನಮ್ಮ ಚಿತ್ರ ತೆರೆಗೆ ಬರಲಿದೆ. ಎಲ್ಲರೂ ಚಿತ್ರಮಂದಿರಗಳಲ್ಲಿ ಕುಟುಂಬ ಸಮೇತ ನಮ್ಮ ಚಿತ್ರ ನೋಡುವ ಮೂಲಕ  ಪ್ರೋತ್ಸಾಹಿಸಿ" ಎಂದರು.


"ಈ ಚಿತ್ರದಲ್ಲಿ ನಟಿಸಿದ್ದು ಬಹಳ ಖುಷಿಯಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ" ಎಂದರು ನಾಯಕಿ ಮಿಶಾ ನಾರಂಗ್‌.

"ಸರಳ ಸುಬ್ಬರಾವ್' 1970 ರ ಕಾಲಘಟ್ಟದ ಪ್ರೇಮಕಥೆ. ತ್ರಿವೇಣಿ ಅವರ ಕಾದಂಬರಿ ಆಧರಿಸಿದ ಕಥೆ ಇದು. ಈವರೆಗೂ ಕನ್ನಡದಲ್ಲಿ ತ್ರಿವೇಣಿ ಅವರ ಕಾದಂಬರಿಗಳನ್ನು ಆಧರಿಸಿ ಬಂದಿರುವ ಚಿತ್ರಗಳೆಲ್ಲಾ ಗೆದ್ದಿದೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಕಥೆ ಕೂಡ. ನಮ್ಮ ಚಿತ್ರ ಎಲ್ಲರಿಗೂ ಮೆಚ್ಚುಗೆಯಾಗುವ ಭರವಸೆ ಇದೆ. ಹೆಚ್ಚು ಕಡಿಮೆ ನೂರು ವರ್ಷಗಳ ಇತಿಹಾಸವಿರುವ ಮೈಸೂರಿನ ಮನೆಯೊಂದರಲ್ಲಿ ನಮ್ಮ ಚಿತ್ರದ ಚಿತ್ರೀಕರಣ ನಡೆದಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ  ಮೂಲಕ ನಮ್ಮ ಚಿತ್ರ ನೋಡುಗರ ಮನ ಗೆದ್ದಿದೆ. ಅಂತರಾಷ್ಟ್ರೀಯ ಖ್ಯಾತಿಯ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪ್ರದೀಪ್ ಪದ್ಮಕುಮಾರ್ ಛಾಯಾಗ್ರಹಣ ಹಾಗೂ  ಬಸವರಾಜ್ ಅರಸ್ ಸಂಕಲನ 'ಸರಳ ಸುಬ್ಬರಾವ್' ಚಿತ್ರಕ್ಕಿದೆ" ಎಂದು ನಿರ್ದೇಶಕ ಮಂಜು ಸ್ವರಾಜ್ ತಿಳಿಸಿದರು.

"ನಿರ್ದೇಶಕರು ಹೇಳಿದ ಈ ಕಥೆ ಬಹಳ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ. ಅಜೇಯ್ ರಾವ್ ಸೇರಿದಂತೆ ಚಿತ್ರತಂಡದ ಎಲ್ಲರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಫೆಬ್ರವರಿ 12 ರಂದು ನಮ್ಮ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ‌. ಪ್ರೋತ್ಸಾಹ ನೀಡಿ" ಎಂದು ನಿರ್ಮಾಪಕ ಲೋಹಿತ್ ನಂಜುಂಡಯ್ಯ ಹೇಳಿದರು.

ಚಿತ್ರದಲ್ಲಿ ನಟಿಸಿರುವ ರಘು ರಾಮನಕೊಪ್ಪ, ವೀಣಾ ಸುಂದರ್, ಚಿತ್ಕಲಾ ಬಿರಾದಾರ್ ಮುಂತಾದವರು 'ಸರಳ ಸುಬ್ಬರಾವ್' ಚಿತ್ರದ ಕುರಿತು ಮಾತನಾಡಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*