LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದು ಹುಟ್ಟೂರಿನಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅಂತ್ಯಸಂಸ್ಕಾರ

ಚನ್ನಪಟ್ಟಣ: 'ಅಭಿನಯ ಸರಸ್ವತಿ' ಬಿ. ಸರೋಜಾದೇವಿ ಸೋಮವಾರ ಮುಂಜಾನೆ ತಮ್ಮ 87ನೇ ವಯಸ್ಸಿನಲ್ಲಿ ಇಹಲೋಕದ ಪಯಣ ಮುಗಿಸಿದರು. ಇಂದು ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತಿಮ ವಿಧಿ-ವಿಧಾನಗಳು ನಡೆಯಲಿವೆ. ಮಲ್ಲೇಶ್ವರಂ ನಿವಾಸದಿಂದ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮಕ್ಕೆ ನಟಿಯ ಪಾರ್ಥಿವ ಶರೀರವನ್ನು ಸಾಗಿಸಲಾಗುತ್ತಿದೆ.


ಶಾಸಕ ಸಿ.ಪಿ. ಯೋಗೇಶ್ವರ್ ಸ್ಥಳ ಪರಿಶೀಲನೆ: ದಶವಾರ ಗ್ರಾಮದ ಹೊರವಲಯದಲ್ಲಿರುವ ನಟಿಯ ಮೆಚ್ಚಿನ ತೋಟದಲ್ಲಿ‌ ಅಂತ್ಯಸಂಸ್ಕಾರ ಕಾರ್ಯಗಳು ನೆರವೇರಲಿವೆ. ತಾಯಿ ರುದ್ರಮ್ಮ ಸಮಾಧಿ ಪಕ್ಕದಲ್ಲೇ ನಟಿಯ ಅಂತಿಮ ವಿಧಿವಿಧಾನಗಳು ಜರುಗಲಿವೆ. ಈ ಹಿನ್ನೆಲೆ, ಶಾಸಕ ಸಿ.ಪಿ. ಯೋಗೇಶ್ವರ್ ಅವರು ಪೊಲೀಸ್​ ಅಧಿಕಾರಿಗಳೊಂದಿಗೆ ಭೇಟಿ ಕೊಟ್ಟು ಸ್ಥಳ ಪರಿಶೀಲಿಸಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಚರ್ಚೆ ನಡೆಸಿ, ಅಗತ್ಯ ಕ್ರಮ‌ ಕೈಗೊಳ್ಳುವಂತೆ ಸೂಚಿಸಿದರು.


ಇಂದು ಬೆಳಗ್ಗೆ ನಟಿಯ ಬೆಂಗಳೂರು ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ, ನಟ ಗಣೇಶ್​ ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಿದ್ದಾರೆ. ಇನ್ನೇನು ಕೆಲ ಹೊತ್ತಲ್ಲಿ ನಟಿ ಬಿ.ಸರೋಜಾ ದೇವಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ.

ಅಭಿನಯ ಸರಸ್ವತಿ ಖ್ಯಾತಿಯ ಹಿರಿಯ ನಟಿ ಬಿ. ಸರೋಜಾ ದೇವಿ ಅವರ ಅಂತ್ಯಸಂಸ್ಕಾರ ಇಂದು ಅವರ ಹುಟ್ಟೂರಾದ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ನಡೆಯಲಿದೆ. ತಾಯಿಯ ಸಮಾಧಿ ಪಕ್ಕವೇ ಅಂತ್ಯಸಂಸ್ಕಾರ ನಡೆಸಲು ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದೆ.


ಒಕ್ಕಲಿಗ ಸಮುದಾಯದ ಸಂಪ್ರದಾಯದಂತೆ ಅಂತ್ಯಸಂಸ್ಕಾರ: ಬಿ. ಸರೋಜಾ ದೇವಿ ಅವರ ಪ್ರೀತಿಯ ತೋಟದಲ್ಲಿನ ತಾಯಿ ಸಮಾಧಿಯ ಪಕ್ಕವೇ ನಟಿಯ ಅಂತಿಮ ವಿಧಿ-ವಿಧಾನಗಳು ನಡೆಯಲಿದ್ದು, ಬಹುತೇಕ ಕೆಲಸಗಳು ಪೂರ್ಣಗೊಂಡಿವೆ. ಒಕ್ಕಲಿಗ ಸಮುದಾಯದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್