LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಾವರ್ಕರ್ ಬ್ರಾಹ್ಮಣ, ದನದ ಮಾಂಸ ತಿನ್ನುತ್ತಿದ್ದರು: ವಿವಾದದ ಕಿಡಿ ಹೊತ್ತಿಸಿದ ದಿನೇಶ್ ಗುಂಡೂರಾವ್

ಬೆಂಗಳೂರು, ಅಕ್ಟೋಬರ್ 3: ‘ವಿನಾಯಕ ದಾಮೋದರ್ ಸಾವರ್ಕರ್ ಒಬ್ಬ ಚಿತ್ಪಾವನ ಬ್ರಾಹ್ಮಣ. ಅವರು ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಅವರು ಗೋಹತ್ಯೆಗೆ ವಿರುದ್ಧವಾಗಿರಲಿಲ್ಲ’ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿರುವುದು ಈಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಗಾಂಧಿ ಜಯಂತಿ ಪ್ರಯುಕ್ತ ಬುಧವಾರ ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ಸಾವರ್ಕರ್ ಮೂಲಭೂತವಾದಿಯಾಗಿದ್ದರು. ಆದರೆ, ಅವರು ಮಾಡರ್ನ್ ಕೂಡ ಆಗಿದ್ದರು. ಅವರು ಗೋಮಾಂಸ ಸೇವಿಸುತ್ತಿದ್ದರು ಎಂದೂ ಕೆಲವು ಜನ ಹೇಳುತ್ತಿದ್ದಾರೆ ಎಂದಿದ್ದರು.

ಸಾವರ್ಕರ್ ಬ್ರಾಹ್ಮಣ, ಹಾಗೆಂದು ಅವರು ಖಂಡಿತವಾಗಿಯೂ ಮಾಂಸಾಹಾರ ಸೇವನೆ ಮಾಡುತ್ತಿದ್ದರು. ಮೂಲಭೂತವಾದಿಯಾಗಿದ್ದರೂ ಮಾಡರ್ನ್ ಆಗಿದ್ದ ಅವರು ದನದ ಮಾಂಸ ಸೇವನೆ ಮಾಡುತ್ತಿದ್ದರು ಎಂದು ಕೆಲವರು ಹೇಳಿದ್ದಾರೆ. ಸಾವರ್ಕರ್ ಬಹಿರಂಗವಾಗಿಯೇ ಮಾಂಸಾಹಾರ ಸೇವನೆ ಬಗ್ಗೆ ಅರಿವು ಮೂಡಿಸುತ್ತಿದ್ದರು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹಾಗೆ ನೋಡಲು ಹೋದರೆ ಮಹಾತ್ಮ ಗಾಂಧಿ ಸಸ್ಯಾಹಾರಿ. ಅವರಿಗೆ ಹಿಂದೂ ಸಂಸ್ಕೃತಿ ಬಗ್ಗೆ ಅಪಾರವಾದ ಗೌರವ, ನಂಬಿಕೆ ಇತ್ತು. ಆದರೆ, ಅವರ ಅಭಿಪ್ರಾಯ ಬೇರೆ ರೀತಿಯಲ್ಲತ್ತು. ಅವರು ಡೆಮಾಕ್ರಟಿಕ್ ಆಗಿದ್ದರು ಎಂದು ಗುಂಡೂರಾವ್ ಹೇಳಿದ್ದರು.

ಮೊಹಮ್ಮದ್ ಅಲಿ ಜಿನ್ನಾ ಕೂಡ ಡೆಮಾಕ್ರಟಿಕ್ ಆಗಿದ್ದರು. ಅವರು ಕೂಡ ಕಟ್ಟಾ ಇಸ್ಲಾಂವಾದಿಯಾಗಿರಲಿಲ್ಲ. ಅವರು ವೈನ್ ಕುಡಿಯುತ್ತಿದ್ದರು, ಹಂದಿ ಮಾಂಸ ಸೇವನೆ ಮಾಡಿದ್ದರು ಎಂದು ಅನೇಕರು ಹೇಳುತ್ತಾರೆ. ಜಿನ್ನಾ ಮೂಲಭುತವಾದಿಯಾಗಿರಲಿಲ್ಲ. ಆದರೆ, ಸಾವರ್ಕರ್ ಮೂಲಭೂತವಾದಿಯಾಗಿದ್ದರು ಎಂದೂ ಗುಂಡೂರಾವ್ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ