LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಿದ್ಯುತ್‌ ಉಳಿಸಿ ನಾಡು ಬೆಳಗಿಸಿ

ಕುರುಗೋಡ, ಸೆ. 2, 2024:* ವಿದ್ಯುತ್ ಸಮಸ್ಯೆಯಾದಾಗ ರೈತರು ತಾಳ್ಮೆ ವಹಿಸಿದರೆ ವಿದ್ಯುತ್‌ ಸಂಬಂಧಿತ ಅವಘಡಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಕಂಪ್ಲಿ ಶಾಸಕ ಜೆ.ಎನ್‌.ಗಣೇಶ್‌ ಹೇಳಿದ್ದಾರೆ.


ಗುಲ್ಬರ್ಗಾ ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ) ಕುರುಗೋಡು ಉಪವಿಭಾಗದಲ್ಲಿ ಹಮ್ಮಿಕೊಂಡಿರುವ ವಿದ್ಯುತ್‌ ಸುರಕ್ಷತಾ ಕಾರ್ಯಾಗಾರದ ವೇಳೆ ಪಟ್ಟಣದ ದೊಡ್ಡಬಸವೇಶ್ವರ ದೇವಸ್ಥಾನದ ಬಳಿ ಬೀದಿ ನಾಟಕ ಪ್ರದರ್ಶನ ಜಾಗೃತಿ ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದ ಅವರು, ರೈತರು ಹಾಗೂ ಸಾರ್ವಜನಿಕರು ಯಾವುದೇ ರೀತಿ ವಿದ್ಯುತ್ ಸಂಬಂಧಿ ಸಮಸ್ಯೆಗಳು ಬಂದರೂ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ಇಂತಹ ಸಂದರ್ಭದಲ್ಲಿ ಅವಸರದ ನಿರ್ಧಾರ ತೆಗೆದುಕೊಂಡು ವಿದ್ಯುತ್‌ ಅವಘಡ ಸಂಭವಿಸಿದರೆ ನಿಮ್ಮನ್ನೇ ನಂಬಿದ್ದ ನಿಮ್ಮ ಕುಟುಂಬ ಸಮಸ್ಯೆ ಎದುರಿಸಬೇಕಾಗಬಹುದು ಎಂದು ಹೇಳಿದರು.


ವಿದ್ಯುತ್ ಸಂಬಂಧಿ ಸಮಸ್ಯೆಗಳ ಪರಿಹಾರಕ್ಕಾಗಿ ಜೆಸ್ಕಾಂ ವತಿಯಿಂದ ದಿನದ 24 ಗಂಟೆ ಕಾರ್ಯನಿರ್ವಹಿಸುವ ಸಹಾಯವಾಣಿ ಸೇರಿದಂತೆ ವಾಟ್ಸಾಪ್ ಮತ್ತಿತರೆ ತುರ್ತು ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ. ಹೀಗಾಗಿ ಯಾವುದೇ ತೊಂದರೆಗಳಿದ್ದರೂ ಅವುಗಳ ಮೂಲಕ ಜೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರೆ ಅವರು ಸಮಸ್ಯೆ ಬಗೆಹರಿಸುತ್ತಾರೆ. ಇದರ ಅನುಕೂಲ ಪಡೆದು ನೀವು ಸುರಕ್ಷಿತವಾಗಿರುವುದರ ಜತೆಗೆ ನಿಮ್ಮ ಸುತ್ತ ಇರುವವರನ್ನೂ ಸುರಕ್ಷಿತವಾಗಿರಿಸಬೇಕು ಎಂದು ಹೇಳಿದರು.


ವಿದ್ಯುತ್‌ ಸರಕ್ಷತಾ ಕ್ರಮಗಳ ಕುರಿತು ಜೆಸ್ಕಾಂ ಸಿಬ್ಬಂದಿ ನಾಟಕ ಪ್ರದರ್ಶನದ ಮೂಲಕ ಮಾಹಿತಿ ನೀಡಿದರು. ಜತೆಗೆ ವಿದ್ಯುತ್‌ ಸುರಕ್ಷತಾ ಮುಂಜಾಗೃತ ಕ್ರಮಗಳ ಸೂಚನಾ ಫಲಕಗಳ ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್