Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಸರ  ಉಳಿಸಿ, ಭವಿಷ್ಯ ಬೆಳಸಿ

  
ಬಳ್ಳಾರಿ,ಜೂ.೦6: ಪ್ರತಿಯೊಬ್ಬ  ವಿದ್ಯಾರ್ಥಿಯೂ ವರ್ಷಕ್ಕೊಂದು ಗಿಡ ನೆಟ್ಟು ಅದರ ಆರೈಕೆ ಮಾಡುವ ಸಂಕಲ್ಪ ಮಾಡಬೇಕು. ಪಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ, ಹಸಿರು ಪರಿಸರ ಉಳಿದರೆ ಮಾತ್ರ ಮಾನವ ಜೀವನ ಸುಖಮಯವಾಗಿರುತ್ತದೆ.  ಆದ್ದರಿಂದ  ಪರಿಸರ  ಉಳಿಸಿ, ಭವಿಷ್ಯ ಬೆಳೆಸಿ, ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಆಳವಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ವಾಸವಿ ವಿದ್ಯಾಲಯದಲ್ಲಿ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಶುಭಾರಂಭಗೊAಡಿತು. ಬಳಿಕ ಶಾಲಾ ಆವರಣದಲ್ಲಿ ಐದು ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ  ಚಾಲನೆ  ನೀಡಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರಿಸರ ಸಂರಕ್ಷಣೆಯ ಪ್ರತಿಜ್ಞೆಯನ್ನು ಸ್ವೀಕರಿಸಿ , ಹಸಿರು ಪರಿಸರ ನಿರ್ಮಾಣಕ್ಕೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.
೯ ನೇ ತರಗತಿಯ ವಿದ್ಯಾರ್ಥನಿ ಯಶಸ್ವಿನಿ ವಿಶ್ವ ಪರಿಸರ ದಿನದ ಮಹತ್ವದ ಕುರಿತು ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಬ್ದಾರಿಯಾಗಿದ್ದು, ಮರಗಳನ್ನು ನೆಡುವುದು ಹಾಗೂ ಪ್ರಕೃತಿಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ತಮ್ಮ ಭಾಷಣದಲ್ಲಿ  ತಿಳಿಸಿದರು.
ಶ್ರೀ ವಾಸವಿ ವಿದ್ಯಾಲಯವು ಹಸಿರು ವಾತಾವರಣದಿಂದ ಕೂಡಿದ ಶಾಲೆಯಾಗಿದ್ದು, ಶಾಲೆಯ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶವು ವಿವಿಧ ಮರಗಳು ಹಾಗೂ ಸಸ್ಯಗಳಿಂದ ಸಮೃದ್ಧವಾಗಿದೆ. ಹಸಿರಿನಿಂದ ಕಂಗೊಳಿಸುವ ಈ ಪರಿಸರವು ವಿದ್ಯಾರ್ಥಿಗಳಿಗೆ ಆರೋಗ್ಯಕರ ಹಾಗೂ ಕಲಿಕೆಗೆ ಪೂರಕವಾದ ವಾತಾವರಣವನ್ನು ಒದಗಿಸುತ್ತದೆ.ವಿದ್ಯಾರ್ಥಿಗಳಲ್ಲಿ  ಪ್ರಕೃತಿ ಪ್ರೇಮ ಮತ್ತು ಪರಿಸರ ಕಾಳಜಿಯನ್ನು ಬೆಳೆಸುವ ಕಾರ್ಯವನ್ನು ನಿರಂತರವಾಗಿ ೪೪ ವರ್ಷಗಳಿಂದ  ನಡೆಸುತ್ತಿದೆ.    
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಆರ್.ವೈ.ಎಮ್ .ಇ.ಸಿ ಪ್ರೊಫೆಸರ್ ಡಾ. ಪ್ರಶಾಂತ್ ಕೇಣಿ,     ಶ್ರೀ ವಾಸವಿ ವಿದ್ಯಾಲಯದ ಕಾರ್ಯದರ್ಶಿಗಳಾದ ಪಿ.ಎನ್. ಸುರೇಶ್, ವಿಶೇಷ ಆಹ್ವಾನಿತರಾದ ರಾಮದುರ್ಗಂ ಸುರೇಶ್, ಪಿ. ಜಿ.ಗುಪ್ತಾ, ಮುಖ್ಯೋಪಾಧ್ಯಾರಾದ ವೀರೇಶ್.ಯು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.  ಈ ಕಾರ್ಯಕ್ರಮವನ್ನು  ಜಬೀನಾ ಬೇಗಂ, ಹೆಚ್, ಎಮ್ ಸುಜಾತ ಮತ್ತು ಬಸವರಾಜೇಶ್ವರಿ ಯವರು ನಿರ್ವಹಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ