LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸ್ಮಾರ್ಟ್‌ ಮೀಟರ್‌ ಟೆಂಡರ್​ನಲ್ಲಿ ಹಗರಣ ಊಹಾಪೋಹ: ಕೆಪಿಟಿಸಿಎಲ್‌ ಎಂ.ಡಿ. ಪಂಕಜ್‌ಕುಮಾರ್‌ ಪಾಂಡೆ

ಬೆಂಗಳೂರು, ಮಾರ್ಚ್​ 24: ಸ್ಮಾರ್ಟ್ ಮೀಟರ್ ಟೆಂಡರ್​ನಲ್ಲಿ ಹಗರಣ ನಡೆದಿದೆ ಎಂಬ ಊಹಾಪೋಹಗಳು ಕೇಳಿಬರುತ್ತಿದೆ. ನಿನ್ನೆಯಷ್ಟೇ ವಿದ್ಯುತ್ ಬಿಲ್ ದರ ಏರಿಕೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ವಿದ್ಯುತ್ ಸ್ಮಾರ್ಟ್ ಮೀಟರ್ ಹೆಸರಿನಲ್ಲಿ 15,500 ಕೋಟಿ ರೂ ಹಗರಣ ನಡೆಸುವ ಮೂಲಕ ಜನರ ಹಣ ಲೂಟಿ ಮಾಡಿರುವುದು ಬಯಲಾಗಿದೆ ಎಂದು ಬಿಜೆಪಿ ಕೂಡ ಆರೋಪ ಮಾಡಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಕೆಪಿಟಿಸಿಎಲ್ ಎಂ.ಡಿ ಪಂಕಜ್​ ಕುಮಾರ್​​ ಪಾಂಡೆ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಟಿಸಿಎಲ್​ ಎಂ.ಡಿ ಪಂಕಜ್ ಕುಮಾರ್ ಪಾಂಡೆ, ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಮಾಡಿ ಅಂತ ಕೆಇಆರ್ಸಿ ಹೇಳಿದೆ. ಬೇರೆ ಬೇರೆ ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಇದೆ. ಕೇಂದ್ರ ಸರ್ಕಾರ ಸೂಚನೆ ಸಹ ಇದೆ. ಹೊಸ ಕನೆಕ್ಷನ್ ತೆಗೆದುಕೊಳ್ಳುವಾಗ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಲಾಗಿದೆ. ಸ್ಮಾರ್ಟ್ ಮೀಟರ್ ಮನೆಗಳಿಗೆ ಹಾಕಿದರೆ, ಮೀಟರ್ ಲೀಡರ್ ಮನೆಗೆ ಹೋಗುವ ಅವಶ್ಯಕತೆ ಇರೋದಿಲ್ಲ, ಹಾಗಾಗಿ ಎಲ್ಲರ ಮನೆಗೂ ಸ್ಮಾರ್ಟ್ ಮೀಟರ್ ಹಾಕಿಸಿ. ಅದರಲ್ಲೂ ಹೊಸ ಮನೆಗಳಲ್ಲಿ ಎಲ್ಲರೂ ಕೂಡ ಈ ಸ್ಮಾರ್ಟ್ ಮೀಟರ್ ಕಡ್ಡಾಯ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿದೆ. ಮಾರ್ಚ್​ನಲ್ಲಿ ವಿದ್ಯುತ್ ಬೇಡಿಕೆ 18,395 ಮೆಗಾವ್ಯಾಟ್ ಇದೆ. ಕಳೆದ ವರ್ಷಕ್ಕಿಂತ 15 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ. ಕಳೆದ ನವಂಬರ್​ನಲ್ಲಿ 14,856 ಮೆಗಾವ್ಯಾಟ್ ಇತ್ತು. ಏಪ್ರಿಲ್, ಮೇನಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿರುತ್ತೆ. ವಿದ್ಯುತ್ ಸಂಗ್ರಹ ರಾಜ್ಯದಲ್ಲಿ ಚೆನ್ನಾಗಿದೆ. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ 17,220 ಮೆಗಾವ್ಯಾಟ್ ಇತ್ತು. ಈ ವರ್ಷ 18,500 MW ವರೆಗೆ ವಿದ್ಯುತ್ ಬೇಡಿಕೆ ಹೆಚ್ಚಾಗಲಿದೆ. ಕೈಗಾರಿಕಾ ವಲಯದಲ್ಲಿ ಶೇ 15 ರಷ್ಟು ವಿದ್ಯುತ್ ಬೇಡಿಕೆ ಹೆಚ್ಚಿದೆ ಎಂದು ತಿಳಿಸಿದರು.

ಉತ್ತರ ಪ್ರದೇಶ, ಪಂಜಾಬ್​ ಎರಡು ರಾಜ್ಯಗಳಿಂದ ಮೇ ವರೆಗೆ ವಿದ್ಯುತ್ ಖರೀದಿ ಮಾಡಲಾಗುತ್ತೆ. ಉತ್ತರ ಪ್ರದೇಶದಿಂದ 1400, ಪಂಜಾಬ್​ನಿಂದ 200-300 mW ವಿದ್ಯುತ್ ಖರೀದಿ ಮಾಡಲಾಗುತ್ತಿದ್ದು, ಜೂನ್ ನಂತರ ರಾಜ್ಯದಿಂದ ಪಂಜಾಬ್, ಯುಪಿಗೆ ವಿದ್ಯುತ್ ಸರಬರಾಜು ಮಾಡುತ್ತೇವೆ. ರೈತರಿಗೆ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ವಿದ್ಯುತ್ ಸರಬರಾಜು ಮಾಡಲಾಗುತ್ತೆ. ವಿದ್ಯುತ್ ಕೊರತೆ ಆಗದಂತೆ ಕ್ರಮ ಕೈಗೊಂಡಿದ್ದೇವೆ. ಯಾವುದೇ ಸಮಸ್ಯೆ ಆಗದಂತೆ ವಿದ್ಯುತ್ ನೀಡಲಾಗುತ್ತೆ ಎಂದು ಸ್ಪಷ್ಟನೆ ನೀಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್