Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ-2025; ನಾಗರಿಕ ಸೇವಾ ಕೇಂದ್ರಗಳಲ್ಲಿ ಮಾಹಿತಿ ನೀಡಲು ಜೂ.22 ರ ವರೆಗೆ ಅವಕಾಶ


ಬಳ್ಳಾರಿ,ಜೂ.10: ನಿವೃತ್ತ ನ್ಯಾ.ಎಚ್.ಎನ್.ನಾಗಮೋಹನ್ ಸದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನೇತೃತ್ವದಲ್ಲಿ ನಡೆಯುತ್ತಿರುವ ಒಳಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿಯನ್ನು ಜೂನ್ 22 ರ ವರೆಗೆ ವಿಸ್ತರಿಸಲಾಗಿದೆ.

ಈಗಾಗಲೇ ಜೂನ್ 08 ವರೆಗೆ ಸಮೀಕ್ಷೆ ಕೈಗೊಂಡಿದ್ದು, ಸಮೀಕ್ಷೆಯು ಪ್ರಗತಿಪಥದಲ್ಲಿದ್ದು, ಕೆಲವು ಕುಟುಂಬಗಳು ವಲಸೆ ಹೋಗಿರುವ ಪ್ರಯುಕ್ತ ಪರಿಶಿಷ್ಟ ಜಾತಿಗೆ ಸೇರಿದ ಸಂಘ-ಸAಸ್ಥೆಗಳು ಸಮೀಕ್ಷೆಯ ಅವಧಿಯನ್ನು ಮತ್ತೆ ವಿಸ್ತರಿಸಬೇಕು ಎಂದು ಮನವಿ ಸಲ್ಲಿಸಿರುತ್ತಾರೆ.  ಆದರೆ ಈಗಾಗಲೇ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಗಣತಿದಾರರನ್ನಾಗಿ ನೇಮಕ ಮಾಡಲಾಗಿದ್ದ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಲಾಗಿದೆ.

ಹೀಗಾಗಿ ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಪರಿಶಿಷ್ಟ ಜಾತಿ ಕುಟುಂಬದವರು ನಾಗರೀಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್ ಮತ್ತು ಗ್ರಾಮಒನ್ ಕೇಂದ್ರಗಳಿಗೆ ಭೇಟಿ ನೀಡಿ ಜೂನ್ 22ರ ವರೆಗೂ ತಮ್ಮ ಮಾಹಿತಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಮಾಹಿತಿ ನಮೂದಿಸಲು ಸಾರ್ವಜನಿಕರು ತಮ್ಮ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಸಂಖ್ಯೆ ಅವಶ್ಯಕವಾಗಿದೆ.ಆನ್‌ಲೈನ್ ಲಿಂಕ್ https://schedulecastesurvey.karnataka.gov.in/selfdeclaration ಮೂಲಕ ಸಹ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ಘೋಷಣೆ ಮಾಡಿಕೊಳ್ಳಲು ಜೂ.22 ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ